ಬೈಕ್ ಸರ್ವಿಸ್ ಮಾಡ್ಲಿಲ್ಲ ಅಂತ ಶೋರೂಂಗೆ ಹೀಗಾ ಮಾಡೋದು?
ಕಲಬುರಗಿಯಲ್ಲಿ ನಡೆದಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗಿದೆ. ವ್ಯಕ್ತಿಯೊಬ್ಬ ತನ್ನ ಎಲೆಕ್ಟ್ರಿಕ್ ಬೈಕ್ (ಇವಿ) ಸರಿಯಾಗಿ ಸರ್ವೀಸ್ ಮಾಡಿಲ್ಲ ಎಂಬ ಕಾರಣಕ್ಕೆ ದೊಡ್ಡ ಅವಾಂತರವನ್ನೇ ಮಾಡಿದ್ದಾನೆ. ಇದೇ ಕೋಪದಲ್ಲಿ ನೇರವಾಗಿ ಓಲಾ ಶೋರೂಂಗೆ ಹೋಗಿ ಬೆಂಕಿ ಇಟ್ಟು ಬಂದಿದ್ದಾನೆ ಎಂದು ವರದಿಯಾಗಿದೆ.
ಹೌದು, ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್ ಬೈಕ್ ಶೋ ರೂಂಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದಾನೆ. ನಿನ್ನೆ ಬೆಳಿಗ್ಗೆ ಶೋ ರೂಂಗೆ ಬೆಂಕಿ ಬಿದ್ದಿತ್ತು. ಮೊದಲಿಗೆ ಇದನ್ನು ಎಲ್ಲರೂ ಶಾರ್ಟ್‌ಸರ್ಕ್ಯೂಟ್‌ನಿಂದ ಆಗಿರಬಹುದು ಎಂದು ಭಾವಿಸಿದ್ದರು. ಆದರೆ, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿರುವ ವಿಚಾರ ಬೆಳಕಿಗೆ ಬಂದಿದೆ.

ಪೊಲೀಸರು ಹೇಳುವಂತೆ ಮಹಮ್ಮದ್ ನದೀಮ್ ಎಂಬ ವ್ಯಕ್ತಿಯು ತನ್ನ ಬಳಿಯಿದ್ದ ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋರೂಂ ಸ್ಟಾಫ್ ಜೊತೆಗೆ ಗಲಾಟೆ ಮಾಡಿದ್ದ. ನಂತರ ಪೆಟ್ರೋಲ್ ತೆಗೆದುಕೊಂಡು ಬಂದು ಶೋರೂಂಗೆ ಎರಚಿ, ಬೆಂಕಿ ಹಚ್ಚಿದ್ದಾನೆ ಎಂದು ಹೇಳಲಾಗಿದೆ.
At a place in India, 26-year-old Mohammad Nadeem set fire to an Ola scooter showroom in Kalaburagi over disagreement with the showroom management.
— Amit Jha (@Amitranu7368006) September 11, 2024
Every day a new crime of Abduls. pic.twitter.com/DiLtULQaWk
ಇನ್ನು ಈ ಸಂಬಂಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿ ನದೀಮ್‌ನನ್ನು ವಶಕ್ಕೆ ಪಡೆಯಲಾಗಿದೆ. ಶೋರೂಂಗೆ ಬೆಂಕಿ ಬಿದ್ದು ಹೊತ್ತಿ ಉರಿದ ಪರಿಣಾಮ ಒಳಗಿದ್ದ 6 ಹೊಸ ಎಲೆಕ್ಟ್ರಿಕ್ ಬೈಕ್ಗಳು ಬೆಂಕಿಗಾಹುತಿಯಾಗಿವೆ. ಜೊತೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕೂಡ ಸುಟ್ಟುಹೋಗಿವೆ ಎಂದು ಹೇಳಿದ್ದಾರೆ.
ಮೂರು ವಾರಗಳ ಹಿಂದಷ್ಟೇ ಆರೋಪಿಯು ಈ ಶೋರೂಂನಿಂದ ಓಲಾ ಸ್ಕೂಟರ್ ಖರೀದಿ ಮಾಡಿದ್ದ. ಆದರೆ ಪದೇ ಪದೇ ಬಂದು ಬೈಕ್ ರಿಪೇರಿ ಬರುತ್ತಿದೆ ಎಂದು ಕೋಪಗೊಳ್ಳುತ್ತಿದ್ದ. ಅಲ್ಲದೆ ಶೋರೂಂಗೂ ಬಂದು ರಿಪೇರಿ ಮಾಡಿಕೊಡಿ ಎಂದು ಕೇಳಿಕೊಂಡಿದ್ದ. ಶೋರೂಂನವರು ಈ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ ಎಂದು ದೂರಲಾಗಿದೆ. ಇದೇ ಕಾರಣಕ್ಕೆ ಆರೋಪಿ ಶೋರೂಂಗೆ ಬೆಂಕಿ ಇಟ್ಟು ಆಕ್ರೋಶ ಹೊರಹಾಕಿದ್ದಾನೆ.

ಕೊನೆಗೆ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಇನ್ನು ಈ ಶೋರೂಂಗೆ ಬೆಂಕಿ ಬಿದ್ದಿರುವ ವಿಡಿಯೋ ನಿನ್ನೆಯಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಮೊದಲಿಗೆ ವಿದ್ಯುತ್ ಅವಘಡದಿಂದ ಶೋರೂಂಗೆ ಬೆಂಕಿ ತಗುಲಿತ್ತು ಎಂದೇ ಹೇಳಲಾಗಿತ್ತು. ಆದರೆ ಇಂದು ಈ ಘಟನೆಯ ಅಸಲಿ ಸತ್ಯವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications