ಉಪಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ನುಡಿದ ಭವಿಷ್ಯ ನಿಜವಾಗುವುದೇ?

Recommended Video

      Karnataka By Elections 2019 : ಸಿದ್ದರಾಮಯ್ಯ ನುಡಿದ ಭವಿಷ್ಯ ನಿಜವಾಗುವುದೇ? | Oneindia Kannada

      ಕಲಬರುಗಿ, ಸೆ 30: ಡಿಸೆಂಬರ್ ಐದಕ್ಕೆ ನಿಗದಿಯಾಗಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಬಗ್ಗೆ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

      ನಗರದಲ್ಲಿ ಮಾತನಾಡುತ್ತಿದ್ದ ಸಿದ್ದರಾಮಯ್ಯ, " ಉಪಚುನಾವಣೆಯ ನಂತರ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದು, ಬಿಜೆಪಿ ಸರಕಾರ ಪತನಗೊಳ್ಳಲಿದೆ" ಎಂದು ಹೇಳಿದ್ದಾರೆ.

      ಕರ್ನಾಟಕ ಪ್ರದೇಶ ಕುರುಬರ ಸಂಘ, ಕಲಬುರಗಿ ಜಿಲ್ಲಾ ಘಟಕ ಹಾಗೂ ಕುರುಬ ಗೊಂಡ ನೌಕರರ ಸಂಘದ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು.

      After Karnataka Assembly By Election, BJP Government Will Fall: Siddaramaiah

      " ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲುವುದು ನಿಶ್ಚಿತ. ಬಹುಮತದ ಕೊರತೆಯಿಂದ ಬಿಜೆಪಿ ಸರಕಾರ ಬಿದ್ದುಹೋಗಲಿದೆ" ಎನ್ನುವ ವಿಶ್ವಾಸವನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

      " ಬಿಜೆಪಿಯ ಅಣತಿಯಂತೆ ಚುನಾವಣಾ ಆಯೋಗ ಕೆಲಸ ಮಾಡುತ್ತಿರುವುದು ವಿಷಾದನೀಯ" ಎಂದು ಬೇಸರ ವ್ಯಕ್ತ ಪಡಿಸಿರುವ ಸಿದ್ದರಾಮಯ್ಯ, " ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ" ಎಂದು ಹೇಳಿದ್ದಾರೆ.

      " ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ ದೇವೇಗೌಡ ಅವರು ಇನ್ನು ಮುಂದೆ ತಮ್ಮ‌ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿ ಎಂದಿದ್ದಾರೆ. ಹೀಗಾಗಿ ಅವರ ಜೊತೆ ಹೇಗೆ ಮೈತ್ರಿ ಮಾಡಿಕೊಳ್ಳಲು ಸಾಧ್ಯ? ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿಯೇ ಚುನಾವಣೆ ಎದುರಿಸಲಿದೆ " ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+