ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿ; ಹೊಸ ನೀರಿನ ಸಂಪರ್ಕಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ

|
Google Oneindia Kannada News

ಕಲಬುರಗಿ, ನವೆಂಬರ್ 19 : ಕಲಬುರಗಿ ನಗರದ ಜನರು ಹೊಸದಾಗಿ ನೀರು ಸರಬರಾಜು ಹಾಗೂ ಒಳ ಚರಂಡಿ ಸಂಪರ್ಕ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿಯೇ ವಿಶೇಷ ಆನ್‌ಲೈನ್ ತಂತ್ರಾಂಶವನ್ನು ಜಾರಿಗೆ ತರಲಾಗಿದೆ.

ಕರ್ನಾಟಕ ಸರ್ಕಾರದ ಸೂಚನೆಯಂತೆ ಹೊಸ ಸಂಪರ್ಕ ಪಡೆಯಲು ಆನ್‌ಲೈನ್ ಮೂಲಕ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 'ಜಲನಿಧಿ' ಎಂಬ ವೆಬ್ ಸೈಟ್‌ ಆರಂಭಿಸಲಾಗಿದೆ. ಅಗತ್ಯ ಮಾಹಿತಿಗಳು ಅಲ್ಲಿ ಲಭ್ಯವಿದೆ.

 ಕಲಬುರಗಿ ದೆಹಲಿ ನಡುವೆ ವಿಮಾನ ಯಾನ ಆರಂಭ ಕಲಬುರಗಿ ದೆಹಲಿ ನಡುವೆ ವಿಮಾನ ಯಾನ ಆರಂಭ

ನಗರದ ಜನರು ಹೊಸದಾಗಿ ನೀರು ಸರಬರಾಜು ಹಾಗೂ ಒಳ ಚರಂಡಿ ಸೇವೆಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ನೀರು ಸರಬರಾಜು ನಿರ್ವಹಣೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಹೇಳಿದ್ದಾರೆ.

ಬರದ ಬೀಡಾಗಿದ್ದ ಚಿತ್ರದುರ್ಗದಲ್ಲಿ ಉಕ್ಕಿ ಹರಿಯುತ್ತಿದೆ ಕೊಳವೆ ಬಾವಿಬರದ ಬೀಡಾಗಿದ್ದ ಚಿತ್ರದುರ್ಗದಲ್ಲಿ ಉಕ್ಕಿ ಹರಿಯುತ್ತಿದೆ ಕೊಳವೆ ಬಾವಿ

Apply For New Water Drainage Connection Through Online

ಜನರು ವೆಬ್ ಸೈಟ್‌ಗೆ ಭೇಟಿ ನೀಡಿ ಹೊಸ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿ, ಸೂಕ್ತ ದಾಖಲಾತಿಗಳನ್ನು ಅಪ್ ಲೋಡ್ ಮಾಡಬೇಕು. ಅವುಗಳನ್ನು ಪರಿಶೀಲನೆ ನಡೆಸಿದ ಬಳಿಕ ಸಂಪರ್ಕ ನೀಡಲಾಗುತ್ತದೆ.

ಗ್ರಾಮೀಣ ಪ್ರದೇಶದ ನಿವಾಸಿಗಳ ಮನೆಮನೆಗೆ ಶುದ್ಧ ಕುಡಿಯುವ ನೀರು: ಸಚಿವ ಈಶ್ವರಪ್ಪ ಗ್ರಾಮೀಣ ಪ್ರದೇಶದ ನಿವಾಸಿಗಳ ಮನೆಮನೆಗೆ ಶುದ್ಧ ಕುಡಿಯುವ ನೀರು: ಸಚಿವ ಈಶ್ವರಪ್ಪ

ಕಲಬುರಗಿ ನಗರದ ಜನರು ಹೊಸ ವ್ಯವಸ್ಥೆ ಜಾರಿಗೊಳಿಸಲು ಜಲಮಂಡಳಿಯೊಂದಿಗೆ ಸಹಕರಿಸಬೇಕು. ಅನಗತ್ಯವಾಗಿ ಕಚೇರಿಗೆ ಅಲೆದಾಡುವ ಬದಲು ಈ ಸೇವೆ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಜನರು ಹೊಸ ನೀರಿನ ಸಂಪರ್ಕಕ ಪಡೆಯಲು ವೆಬ್ ಸೈಟ್ ವಿಳಾಸಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

English summary
People of Kalaburagi now apply for new water and drainage connection through Jalanidhi website.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X