Get Updates
Get notified of breaking news, exclusive insights, and must-see stories!

ಮತದಾರ ದೇವರುಗಳು ಆಶೀರ್ವಾದ ಮಾಡಲಿಲ್ಲ ಅಂದ್ರೆ ನಾನು, ನನ್ನ ಹೆಂಡತಿ ವಿಷ ಕುಡಿಯುತ್ತೇವೆ: ಬಾಬುರಾವ್‌ ಚಿಂಚನಸೂರ್‌

ಕಲಬುರಗಿ, ಮೇ, 03: ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದ್ದು, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಅದೇ ರೀತಿ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಪರ ಅವರ ಪತ್ನಿ ಪ್ರಚಾರಕ್ಕೆ ಇಳಿದಿದ್ದಾರೆ. ಈ ಬಗ್ಗೆ ಬಾಬುರಾವ್‌ ಚಿಂಚನಸೂರ್ ಅವರು ಪ್ರತಿಕ್ರಿಯಿಸಿದ್ದು, ಮತದಾರ ಪ್ರಭುಗಳೇ ನೀವು ನನಗೆ ವೋಟ್​ ಹಾಕದಿದ್ದರೆ, ನಾನು, ನನ್ನ ಹೆಂಡತಿ ವಿಷ ಕುಡಿಯುತ್ತೇವೆ ಎಂದು ಹೇಳುವ ಮೂಲಕ ಕಣ್ಣೀರಿಟ್ಟಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಅವರ ಕಾರು ಇತ್ತೀಚೆಗಷ್ಟೇ ಅಪಘಾತ ಆಗಿತ್ತು. ಕಾರಿನಲ್ಲಿದ್ದ ಚಿಂಚನಸೂರ್‌ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿದ್ದವು. ಆಗ ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದ್ದರು.

Baburao Chinchansur Says Me and My Wife Will Take Poison if Voters Didn’t Bless Me in Election

ಬಾಬುರಾವ ಚಿಂಚನಸೂರ ಆಸ್ಪತ್ರೆಗೆ ಸೇರಿದ್ದರಿಂದ ಕ್ಷೇತ್ರದಲ್ಲಿ ಅವರ ಪರವಾಗಿ ಪತ್ನಿ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಚಿಂಚನಸೂರ್‌ ಅವರು, ಈಗ ನಾನು 50% ಚೇತರಿಸಿಕೊಂಡಿದ್ದೇನೆ, ಇನ್ನು 6 ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಬೇಕು. ನೀವು ವೀಲ್‌ ಚೇರ್‌ ಮೇಲೂ ಕೂಡ ಹೋಗುವಂತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಕ್ಷೇತ್ರದಲ್ಲಿ ನನ್ನ ಪತ್ನಿ ಪ್ರಚಾರ ಮಾಡುತ್ತಿದ್ದಾರೆ.

ಒಂದು ವೇಳೆ ಮತದಾರ ದೇವರುಗಳು ಆಶೀರ್ವಾದ ಮಾಡಲಿಲ್ಲ ಅಂದರೆ ನಾನು ಮತ್ತು ನನ್ನ ಹೆಂಡತಿ ವಿಷ ಕುಡಿದು ಸಾಯುತ್ತೇವೆ ಎಂದು ಹೇಳುವ ಮೂಲಕ ಕಣ್ಣೀರಿಟ್ಟಿದ್ದಾರೆ.

ಮತ್ತೊಮ್ಮೆ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಗುರುಮಿಠಕಲ್ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದು. 2018, ಕಳೆದ ಚುನಾವಣೆಯಲ್ಲಿ ಇಲ್ಲಿ ಜನತಾ ದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ಜಯ ಗಳಿಸಿದ್ದರು. ಇನ್ನು ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಚಿಂಚನಸೂರ್‌ ಅವರು 2008, 2013ರಲ್ಲಿ ಸತತ ಎರಡು ಬಾರಿ ಜಯ ಸಾಧಿಸಿ, 2018ರಲ್ಲಿ ಜೆಡಿಎಸ್‌ ಅಭ್ಯರ್ಥಿ ವಿರುದ್ಧ ಸೋಲುಂಡಿದ್ದು. ಇನ್ನು ಈ ಬಾರಿ ಗೆಲುವು ಸಾಧಿಸಲು ಇನ್ನಿಲ್ಲದ ಪ್ರಯತ್ನವನ್ನು ಮುಂದುವರೆಸಿದ್ದಾರೆ.

ಕಾಂಗ್ರೆಸ್‌ ವಿರುದ್ಧ ಶ್ರೀರಾಮುಲು ಕೆಂಡಾಮಂಡಲ
ಇನ್ನು ಇತ್ತೀಚೆಗಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ನರೇಂದ್ರ ಮೋದಿಯವರ ವಿರುದ್ಧ ವಿಷ ಸರ್ಪದ ಹೇಳಿಕೆಯ ಅಸ್ತ್ರವನ್ನು ಬಳಿಸಿದ್ದರು. ಇದೀಗ ಇದಕ್ಕೆ ಸಚಿವ ಶ್ರೀರಾಮುಲು ಗದಗದಲ್ಲಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ನವರಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕಾಗಿದೆ ಎಂದು ವಾಗ್ದಾಳಿ ನಡೆಸಿದರು.

ಗದಗದ ತಮ್ಮ ನಿವಾಸದಲ್ಲಿ ಮಾತನಾಡಿದ ಸಚಿವ ಬಿ. ಶ್ರೀರಾಮುಲು, ಕಾಂಗ್ರೆಸ್‌ನವರು ಲಿಂಗಾಯತ ಸಮುದಾಯದವರು ಯಾರು ಮುಖ್ಯಮಂತ್ರಿ ಆಗುತ್ತಾರೆಯೋ ಅವರೆಲ್ಲಾ ಭ್ರಷ್ಟರು ಅಂತಾ ಉಲ್ಲೇಖ ಮಾಡಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷಸರ್ಪಕ್ಕೆ ಹೋಲಿಸಿದ್ದಾರೆ. ಇದನ್ನೆಲ್ಲ ಗಮನಿಸಿದರೆ ಅವರು ಬೌಧ್ಧಿಕವಾಗಿ, ನೈತಿಕವಾಗಿ ದಿವಾಳಿ ಎದ್ದು ಹೋಗಿದ್ದಾರೆ ಅಂತಾ ನಾನು ತಿಳಿದಿದ್ದೇನೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್‌ನವರ ತಲೆಯಲ್ಲಿ ಹುಳ ಹೋಗಿದೆ. ಅವರು ಮದದಿಂದ, ದುರಹಂಕಾರದಿಂದ, ಎಲ್ಲೋ ಒಂದು ಕಡೆ ಅಧಿಕಾರಕ್ಕೆ ಬರುತ್ತೇವೆ ಅನ್ನುವ ಭ್ರಮೆಯಲ್ಲಿದ್ದಾರೆ. ಆದರೆ ಅವರು ಯಾವಾಗಲೂ ಕೂಡ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ. ಅವತ್ತಿನ ಸಂದರ್ಭದಲ್ಲಿ ಲಾಟರಿ ಮೂಲಕ ಸರ್ಕಾರ ರಚನೆ ಆಗುತ್ತಿತ್ತು. ಈ ಬಾರಿ ಲಾಟರಿ ಸಕ್ಸಸ್ ಅಗುವುದಿಲ್ಲ. ಖಂಡಿತವಾಗಿ ಈ ಚುನಾವಣೆಯಲ್ಲಿ ಸೋಲು ಅನುಭವಿಸುತ್ತಾರೆ.

ನಮ್ಮ ಸರ್ಕಾರ ಒಳ್ಳೆಯ ಕೆಲಸಗಳನ್ನು ಮಾಡಿದ್ದು, ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. 120ಕ್ಕೂ ಹೆಚ್ಚು ಸ್ಥಾನ ಗಡಿ ದಾಟಿ ನಮ್ಮ ಸರಕಾರ ಅಧಿಕಾರಕ್ಕೆ ಬರೋವಂತಹ ಕೆಲಸವನ್ನು ಮಾಡಿದ್ದೇವೆ ಎಂದರು. ಮೀಸಲಾತಿ ಪ್ರಮಾಣ‌ವನ್ನು ಶೇಕಡಾ 75ರಷ್ಟು ಏರಿಸುವ ಕಾಂಗ್ರೆಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಮೀಸಲಾತಿ ಕೊಟ್ಟ ನಂತರ ಅವರಿಗೆ ತುಂಬಾ ಮುಜುಗರ ಆಗಿದೆ. ಅವರಿಗೆ ಸಂವಿಧಾನವೇ ಗೊತ್ತಿಲ್ಲ.

ಇಷ್ಟು ದಿನ ಎಸ್‌ಸಿ, ಎಸ್‌ಟಿ, ಹಿಂದುಳಿದ ಜಾತಿಗಳ ಹೆಸರು ಹೇಳಿ ರಾಜಕಾರಣ ಮಾಡುತ್ತಿದ್ದರು. ಲಿಂಗಾಯತ ಸೇರಿದಂತೆ ಬೇರೆ ಬೇರೆ ಸಮುದಾಯಕ್ಕೆ ಮೀಸಲಾತಿ ಕೊಟ್ಟ ನಂತರ ಅದನ್ನು ರದ್ದು ಮಾಡುತ್ತೇವೆ ಅಂತಾ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+