ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿಯಲ್ಲಿ ಮದ್ಯ ಮಾರಾಟ ನಿಷೇಧ; ಬಾರ್‌ ಬಂದ್

|
Google Oneindia Kannada News

ಕಲಬುರಗಿ, ಮಾರ್ಚ್ 16 : ಕಲಬುರಗಿ ಜಿಲ್ಲೆಯಲ್ಲಿ ಕೊರೊನಾದಿಂದ ವೃದ್ಧನೊಬ್ಬ ಮೃತಪಟ್ಟಿದ್ದಾನೆ. ಆತನ ಕುಟುಂಬ ಸದಸ್ಯರೊಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ. ಮಾರ್ಚ್ 15ರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ತನಕ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಕಲಬುರಗಿ ವೃದ್ಧನಿಗೆ ಕೊರೊನಾ ಬಂದಿದ್ದು ಹೇಗೆ? ಕಲಬುರಗಿ ವೃದ್ಧನಿಗೆ ಕೊರೊನಾ ಬಂದಿದ್ದು ಹೇಗೆ?

ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯ ಮಾರಾಟ‌ ಮಾಡುವುದನ್ನು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರನ್ವಯ ನಿಷೇಧಿಸಲಾಗಿದೆ.

ಕಲಬುರಗಿ ; ಮೃತಪಟ್ಟ ವೃದ್ಧನ ಕುಟುಂಬ ಸದಸ್ಯರಿಗೆ ಸೋಂಕಿಲ್ಲಕಲಬುರಗಿ ; ಮೃತಪಟ್ಟ ವೃದ್ಧನ ಕುಟುಂಬ ಸದಸ್ಯರಿಗೆ ಸೋಂಕಿಲ್ಲ

Bar And Restaurant Closed In Kalaburagi

ಜಿಲ್ಲೆಯ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಸಹ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಜನರು ಜಿಲ್ಲಾಡಳಿತದ ಜೊತೆ ಸಹಕಾರ ನೀಡಬೇಕು. ಅಗತ್ಯ ಕೆಲಸಗಳು ಇದ್ದರೆ ಮಾತ್ರ ಮನೆಯಿಂದ ಹೊರಗೆ ಬರುವಂತೆ ಸೂಚನೆ ನೀಡಲಾಗಿದೆ.

ಕೊರೊನಾ ಭೀತಿ; ನಾಗರಹೊಳೆಗೆ ಪ್ರವಾಸಿಗರ ಭೇಟಿಗೆ ನಿರ್ಬಂಧ ಕೊರೊನಾ ಭೀತಿ; ನಾಗರಹೊಳೆಗೆ ಪ್ರವಾಸಿಗರ ಭೇಟಿಗೆ ನಿರ್ಬಂಧ

ಸೌದಿ ಅರೇಬಿಯಾದಿಂದ ವಾಪಸ್ ಆಗಿದ್ದ ಕಲಬುರಗಿ ನಗರದ ನಿವಾಸಿ ಮಹ್ಮದ್ ಹುಸೇನ್ ಸಿದ್ದಿಕಿ ಮಾರ್ಚ್ 10ರಂದು ಮೃತಪಟ್ಟಿದ್ದರು. ಮಾರ್ಚ್ 12ರಂದು ಅವರಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ವರದಿಯಲ್ಲಿ ದೃಡಪಟ್ಟಿತ್ತು.

ಆರೋಗ್ಯ ಸಚಿವ ಬಿ. ಶ್ರೀರಾಮುಲು ಶನಿವಾರ ಕಲಬುರಗಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಮೃತಪಟ್ಟ ವೃದ್ಧನ ನಾಲ್ವರು ಕುಟುಂಬ ಸದಸ್ಯರನ್ನು ಇ.ಎಸ್‌.ಐ.ಸಿ ಮೆಡಿಕಲ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

ಕರ್ನಾಟಕ ಸರ್ಕಾರ ಮಾರ್ಚ್ 14ರಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ಪಬ್, ನೈಟ್ ಕ್ಲಬ್ ಬಂದ್ ಮಾಡಲು ಆದೇಶ ನೀಡಿದೆ. ಮಾಲ್, ಚಿತ್ರಮಂದಿರಗಳು ಸಹ ಮುಚ್ಚಿವೆ. ಸಂತೆ, ಜಾತ್ರೆ, ಸಮಾವೇಶ ನಡೆಸದಂತೆ ಸೂಚನೆ ನೀಡಲಾಗಿದೆ.

English summary
Bar and Restaurant closed in Kalaburagi. 76 year old Kalaburagi man infected with coronavirus died on March 10, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X