ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್‌ಪ್ರೆಸ್‌ ಹೆದ್ದಾರಿ ನಿರ್ಮಾಣ; ಬಸವರಾಜ ಬೊಮ್ಮಾಯಿ

|
Google Oneindia Kannada News

ಕಲಬುರಗಿ, ಸೆಪ್ಟೆಂಬರ್ 17- ಬೀದರ್‌ದಿಂದ ಬಳ್ಳಾರಿವರೆಗೆ ಚತುಷ್ಪಥ ಎಕ್ಸ್‌ಪ್ರೆಸ್‌ ಹೈವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, "ಈ ಪ್ರದೇಶ ಅಷ್ಟು ಸುಲಭವಾಗಿ ದೊರೆತಿಲ್ಲ. ಈ ಭಾಗದ ವಿಮೋಚನೆಗೆ ನಾವು ಒಂದು ವರ್ಷ ಕಾಯಬೇಕಾಯಿತು. ಸರ್ದಾರ್ ವಲ್ಲಭಭಾಯಿ ಪಟೇಲರ ದಿಟ್ಟ ನಿಲುವು ಮತ್ತು ನೇತೃತ್ವದಿಂದ ನಿರ್ಧಾರದಿಂದ ಈ ಭಾಗ ಸಮಗ್ರ ಕರ್ನಾಟಕ ಸೇರುವಂತಾಯಿತು ಎಂದು ಕಲ್ಯಾಣ ಕರ್ನಾಟಕ ವಿಮೋಚನೆಗೆ ಶ್ರಮಿಸಿದ ಗಣ್ಯರು ಹಾಗೂ ಈ ಭಾಗಕ್ಕೆ ವಿಶೇಷ ಸ್ಥಾನಮಾನ ಒದಗಿಸಲು ಮಹನೀಯರು ಹೋರಾಟ ನಡೆಸಿದ್ದಾರೆ," ಎಂದು ಮುಖ್ಯಮಂತ್ರಿ ಸ್ಮರಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್‌ನಲ್ಲಿ 3000 ಕೋಟಿ ರೂ ಹಂಚಿಕೆ ಮಾಡಿದ್ದೇನೆ: ಬೊಮ್ಮಾಯಿಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್‌ನಲ್ಲಿ 3000 ಕೋಟಿ ರೂ ಹಂಚಿಕೆ ಮಾಡಿದ್ದೇನೆ: ಬೊಮ್ಮಾಯಿ

ಇನ್ನು ಕಲ್ಯಾಣ ಕರ್ನಾಟಕ ಭಾಗದ ಸಾರಿಗೆ ಸಂಪರ್ಕ ಉತ್ತಮ ಗೊಳಿಸಲು ಬೀದರ್‍-ಬಳ್ಳಾರಿ ಚತುಷ್ಪಥ ಎಕ್ಸ್‌ಪ್ರೆಸ್‌ ಹೆದ್ದಾರಿ ಪ್ರಮುಖ ಪಾತ್ರ ವಹಿಸಲಿದೆ. ಈ ಭಾಗದಲ್ಲಿ ರಾಯಚೂರು, ಬಳ್ಳಾರಿ ವಿಮಾನ ನಿಲ್ದಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರದ ನೆರವಿನೊಂದಿಗೆ ಯಾದಗಿರಿ, ರಾಯಚೂರು, ಕಲಬುರಗಿ ರಿಂಗ್ ರೋಡ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

 ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್‌

ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್‌

ಈ ಭಾಗದಲ್ಲಿ ಕೈಗಾರಿಕೆ ಸ್ಥಾಪಿಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೇವೆ. ಕೇಂದ್ರ ಸರಕಾರ ಕಲಬುರಗಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲು ತೀರ್ಮಾನ ಮಾಡಿದೆ. ರಾಜ್ಯ ಸರಕಾರ ರಾಯಚೂರು ಹಾಗೂ ಬಿಜಾಪುರದಲ್ಲಿ ಜವಳಿ ಪಾರ್ಕ್ ಮಾಡಲು ನಿರ್ಧರಿಸಿದೆ. ಇದರಿಂದ ಕನಿಷ್ಠ 25 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಶೀಘ್ರವೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಇದಲ್ಲದೆ ಬಳ್ಳಾರಿಯಲ್ಲಿ ಜೀನ್ಸ್‌ ಪಾರ್ಕ್, ಯಾದಗಿರಿಯಲ್ಲಿ ಫಾರ್ಮಾಸೂಟಿಕಲ್ ಕ್ಲಸ್ಟರ್ ನಿರ್ಮಿಸಲಾಗುವುದು. ಕೊಪ್ಪಳದಲ್ಲಿ ಈಗಾಗಲೇ ಆಟಿಕೆಗಳ ಕ್ಲಸ್ಟರ್ ನಿರ್ಮಾಣವಾಗುತ್ತಿದೆ. ಬೀದರ್‌ನಲ್ಲಿ ಕೇಂದ್ರದ ನೆರವಿನೊಂದಿಗೆ 90 ಕೋಟಿ ರೂ. ವೆಚ್ಚದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಕುರಿತ ಸಿಪೆಟ್ ಸಂಸ್ಥೆ ಪ್ರಾರಂಭಿಸಲಾಗುವುದು. ಹೀಗೆ ಪ್ರತಿ ಜಿಲ್ಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

 ಬಳ್ಳಾರಿ ವಿಮ್ಸ್ ದುರಂತ: ಸಚಿವ ಸುಧಾಕರ್ ವಿರುದ್ಧ ಸೋಮಶೇಖರ್ ರೆಡ್ಡಿ ಅಸಮಧಾನ ಬಳ್ಳಾರಿ ವಿಮ್ಸ್ ದುರಂತ: ಸಚಿವ ಸುಧಾಕರ್ ವಿರುದ್ಧ ಸೋಮಶೇಖರ್ ರೆಡ್ಡಿ ಅಸಮಧಾನ

 ಪ್ರಾಮಾಣಿಕವಾಗಿ ಕೆಲಸ ಮಾಡಲು ಕಿವಿಮಾತು

ಪ್ರಾಮಾಣಿಕವಾಗಿ ಕೆಲಸ ಮಾಡಲು ಕಿವಿಮಾತು

ಈ ಭಾಗದ ಅಭಿವೃದ್ದಿಯಾಗಬೇಕೆಂದರೆ ರಾಜಕಾರಣಿಗಳು ಪಕ್ಷಬೇದ ಮರೆತು ಕೆಲಸ ಮಾಡಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ರಾಜಕಾರಣ ಮಾಡಿದರೆ ಈ ಭಾಗಕ್ಕೆ ದೊಡ್ಡ ದ್ರೋಹ ಮಾಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

 ಕಲಬುರ್ಗಿ ಕರ್ನಾಟಕದ ಭವಿಷ್ಯದ ನಗರ

ಕಲಬುರ್ಗಿ ಕರ್ನಾಟಕದ ಭವಿಷ್ಯದ ನಗರ

ಕಲಬುರ್ಗಿ ಅಭಿವೃದ್ಧಿಗೆ 100 ಕೋಟಿ ನೀಡಿದ್ದೇನೆ. ಕಲಬುರ್ಗಿ ಕರ್ನಾಟಕದ ಭವಿಷ್ಯದ ನಗರ, ಇಲ್ಲಿ ಎಲ್ಲ ರೀತಿಯ ವೈ ಫೈ ಕನೆಕ್ಟ್, ಕೇಬಲ್ ಕನೆಕ್ಟ್ ಮತ್ತಿತರ ಅತ್ಯಾಧುನಿಕ ಸೌಲಭ್ಯ ಒದಗಿಸುವ ಮೂಲಕ ಅಂತಾರಾಷ್ಟ್ರೀಯ ನಗರ ಮಾಡಲು ತೀರ್ಮಾನಿಸಿದ್ದೇವೆ. ಸಮಸ್ತ ಕರ್ನಾಟಕ ಅಭಿವೃದ್ದಿಯಾಗುತ್ತಿರುವ ಈ ಸಮಯದಲ್ಲಿ ಐತಿಹಾಸಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕವೂ ಅಷ್ಟೇ ವೇಗವಾಗಿ ಬೆಳೆಯಬೇಕು. ಕಲ್ಯಾಣ ಕರ್ನಾಟಕದ ಮೂಲಕ ನವ ಕರ್ನಾಟಕ ಹಾಗೂ ನವ ಭಾರತದ ಅಭಿವೃದ್ದಿಯಾಗಬೇಕು ಎಂದು ಮುಖ್ಯಮಂತ್ರಿ ಆಶಿಸಿದರು.

 ಅಮೃತ ಮಹೋತ್ಸವ ವರ್ಷಪೂರ್ತಿ ಆಚರಣೆ

ಅಮೃತ ಮಹೋತ್ಸವ ವರ್ಷಪೂರ್ತಿ ಆಚರಣೆ

ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ವರ್ಷವನ್ನು ವರ್ಷಪೂರ್ತಿ ಆಚರಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಜನಜಾಗೃತಿಗಾಗಿ ಎಲ್ಲ ಜಿಲ್ಲೆಗಳಲ್ಲಿ ರಥಯಾತ್ರೆ ಕೈಗೊಳ್ಳಲಾಗುವುದು. ಇಂದು ಪ್ರಧಾನಿ ಮೋದಿ ಹುಟ್ಟುಹಬ್ಬ, ಅವರಿಗೆ ಸಮಸ್ತ ಕರ್ನಾಟಕ ವಿಶೇಷವಾಗಿ ಕಲ್ಯಾಣ ಕರ್ನಾಟಕ ಜನತೆಯ ಪರವಾಗಿ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಪ್ರಧಾನಿ ಮೋದಿ ಅವರು ಈ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಅಂತ ಭರವಸೆ ನೀಡಿ ಎಂದು ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.

English summary
Chief Minister Basavaraja Bommai said a four-lane express highway will be constructed from Bidar to Bellary via Kalaburagi and Raichur,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X