Kalaburagi: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಕಲಬುರಗಿ ಅಕ್ಟೋಬರ್ 20: ಕಲಬುರಗಿಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಿವಕುಮಾರ್ ಪೂಜಾರಿ ಆತ್ಮಹತ್ಯೆಯನ್ನು ರೈತ ಆತ್ಮಹತ್ಯೆ ಎಂದು ದೂರು ದಾಖಲಿಸಲಾಗಿದೆ.
ಕಲಬುರಗಿಯ ಚಿಂಚೊಳ್ಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗೆಂದು ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಆಡಿಯೋದಲ್ಲಿ ಹೇಳಿದ್ದರು. ಆದರೂ ಶಿವಕುಮಾರ್ ಪೂಜಾರಿ ಆತ್ಮಹತ್ಯೆಯನ್ನು ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ. ಸ್ವತ: ಶಿವಕುಮಾರ್ ಪತ್ನಿ ಮಲ್ಲಮ್ಮ ಅವರು ರೈತ ಆತ್ಮಹತ್ಯೆ ಎಂದು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತನ್ನ ಪತಿ ಶಿವಕುಮಾರ್ 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಮಳೆಯಾಗದೇ ಇದ್ದಿದ್ದರಿಂದ ಹೆಸರು ಬೆಳೆ ಹಾಳಾಗಿ ಹೋಗಿತ್ತು. ಸಾಲ ತೀರಿಸಲಿಕ್ಕಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಮಲ್ಲಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪತಿಯ ಆತ್ಮಹತ್ಯೆ ಕೇಸ್‌ನಲ್ಲಿ ಯಾರ ಮೇಲೆ ಕೂಡಾ ಅನುಮಾನ ಇಲ್ಲ ಎಂದು ಉಲ್ಲೇಖವಾಗಿರುವುದು ಅಚ್ಚರಿಗೆ ಕಾರಣವಾಗಿದೆ.
35 ವರ್ಷದ ಶಿವಕುಮಾರ್ ಎಂಬುವವರು ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರು ಬುಧವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣರಾಗಿದ್ದರು. ಆತ್ಮಹತ್ಯೆಗೂ ಮುನ್ನ ಅವರು ಮಾತನಾಡಿದ ಮೂರು ಆಡಿಯೋದಲ್ಲಿ ಶಿವಕುಮಾರ್ ತಮ್ಮ ಆತ್ಮಹತ್ಯೆಗೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರನ್ನು ಹೊಣೆ ಮಾಡಿದ್ದರು.
ಆಡಿಯೋದಲ್ಲಿ ಶಿವಕುಮಾರ್, 'ನಾನು ಹಿಂದೂ ಹುಲಿಯಾಗಿದ್ದೇನೆ, ಹಿಂದೂ ಹುಲಿಯಾಗೇ ಸಾಯುತ್ತೇನೆ' ಎಂದು ಹೇಳಿದ್ದಾರೆ. ಜೊತೆಗೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ತಮ್ಮ ಸಾವಿಗೆ ಕಾರಣ ಎಂದು ಹೇಳಿದ್ದಾರೆ. 'ಯಾವುದೇ ಕಾರಣಕ್ಕೂ ಹಿಂದುಗಳ ಬಗ್ಗೆ ಮಾತನಾಡಬಾರದು. ಮಾತನಾಡಿದರೆ ಅವರಿಗೆ ಬೆಂಕಿ ಬೀಳುತ್ತದೆ' ಎಂದು ಆಡಿಯೋದಲ್ಲಿ ಶಿವಕುಮಾರ್ ಹೇಳಿದ್ದಾರೆ.
ಶಿವಕುಮಾರ್ ಸಂಬಂಧಿ ನರಸಪ್ಪ ಎಂಬುವರ ಹೊಲಕ್ಕೆ ಹೋಗಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದರು. ಇದರಿಂದ ಬೇಸತ್ತು ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇವರು ಸಾವಿಗೆ ಶರಣಾಗುವ ಮುನ್ನ ಮೂರು ಆಡಿಯೋ ರೆಕಾರ್ಡ್ ಮಾಡಿದ್ದಾರೆ. ಇನ್ನೂ ಆತ್ಮಹತ್ಯೆಗೂ ಮುನ್ನ ಆತನನ್ನು ಥಳಿಸಲಾಗಿದೆ ಎಂದು ಬಿಜೆಪಿ ಪಕ್ಷ ಆರೋಪಿಸಿದೆ.
ಹೀಗಿರುವಾಗ ಮೃತ ಪತ್ನಿ ಮಲ್ಲಮ್ಮ ನೀಡಿದ ದೂರು ಸಾಕಷ್ಟು ಅನುಮಾನವನ್ನು ಹುಟ್ಟು ಹಾಕಿದೆ. ಮಲ್ಲಮ್ಮ ಯಾರಾದರು ಒತ್ತಡಕ್ಕೆ ಮಣಿದು ಈ ರೀತಿ ದೂರು ದಾಖಲಿಸಿದರಾ? ಅಥವಾ ಈ ಆಡಿಯೋದಲ್ಲಿ ಏನಾದರೂ ತುತಂತ್ರ ಅಡಗಿದಿಯಾ? ಎನ್ನುವ ಅನುಮಾನ ಹುಟ್ಟಿದೆ. ಘಟನೆಯ ಸತ್ಯಾಸತ್ಯತೆಗಳನ್ನು ಪರೀಶೀಲಿಸಲಾಗುತ್ತಿದ್ದು ಕಲಬುರಗಿಯ ಸುಲೆಪೇಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಚಿವ ಸ್ಥಾನದಿಂದ ಶರಣಪ್ರಕಾಶ್ ಪಾಟೀಲ್ ವಜಾಗೊಳಿಸಿ; ಬಿಜೆಪಿ ಆಗ್ರಹ
ಶಿರೋಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ, ಸಚಿವ ಸ್ಥಾನದಿಂದ ಶರಣಪ್ರಕಾಶ್ ಪಾಟೀಲ್ ಅವರನ್ನು ವಜಾಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್ಸಿ ಎನ್ ರವಿಕುಮಾರ್ ಅವರು ಮಾತನಾಡಿ, ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ಕಿರುಕುಳವೇ ನನ್ನ ಸಾವಿಗೆ ಕಾರಣ ಎಂದು ಸಾವಿಗೆ ಮುನ್ನ ಆಡಿಯೋದಲ್ಲಿ ಶಿವಕುಮಾರ್ ಹೇಳಿಕೊಂಡಿದ್ದಾರೆ. ಸರ್ಕಾರ ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಮತ್ತು ತನಿಖಾ ವರದಿ ಬರುವವರೆಗೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ಸಚಿವ ಭಗವಂತ ಖೂಬಾ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದ ಜನರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ. ಧರ್ಮಕ್ಕಾಗಿ ಕೆಲಸ ಮಾಡುವವರನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. "ಮೃತ ಬಿಜೆಪಿ ಕಾರ್ಯಕರ್ತನನ್ನು ಅವರ ಸಂಬಂಧಿಕರ ಕೃಷಿ ಜಮೀನಿನಲ್ಲಿ ಥಳಿಸಲಾಗಿದೆ. ಶಿವಕುಮಾರ್ ಸಾವಿಗೂ ಮುನ್ನ ಆಡಿಯೋದಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ವಿರುದ್ಧ ಆರೋಪ ಮಾಡಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮೌನವಾಗಿದ್ದಾರೆ ಎಂದು ಕಿಡಿಕಾರಿದರು.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications