ಕಲಬುರ್ಗಿಯಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ

Posted By:
Subscribe to Oneindia Kannada

ಕಲಬುರ್ಗಿ, ನವೆಂಬರ್, 4: ಭಾರತೀಯ ಜನತಾ ಪಕ್ಷದ ಹಿರಿಯ ಕಾರ್ಯಕರ್ತ ಮಹದೇವಪ್ಪ ಕಾಳೆ (50) ಅವರನ್ನು ಅಪರಿಚಿತ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅಫ್ಜಲ್ ಪುರ ತಾಲ್ಲೂಕಿನ, ಉಪ್ಪಾರವಾಡಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮಹಾದೇವಪ್ಪ ಕಾಳೆ ಅವರು ಶಿವಬಾಳ ನಗರದ ಮಣೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾಗಿದ್ದರು. ಬುಧವಾರ ರಾತ್ರಿ ಉಪ್ಪಾರ ಹಟ್ಟಿ ಗ್ರಾಮದ ಹೊರವಲಯದಲ್ಲಿ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ['ರುದ್ರೇಶ್ ಹತ್ಯೆಗೂ ಪಿಎಫ್ಐಗೂ ಯಾವುದೇ ಸಂಬಂಧವಿಲ್ಲ']

BJP activist murdered in Afzalpur taluk, Kalaburagi district

ಬುಧವಾರ ಸಂಜೆ ಕಲಬುರ್ಗಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ವೇಳೆ ಉಪ್ಪಾರವಾಡಿ ಶಿವಬಾಳ ನಗರ ಮಧ್ಯೆ ಸುಮಾರು 8.30 ಗಂಟೆ ಹೊತ್ತಿನಲ್ಲಿ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆಗೈದು ಪರಾರಿಯಾಗಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಅಫಜಲ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಂತರಕ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Mahadeva Kale (50), a Bharatiya Janata Party (BJP) activist, who was attacked with lethal weapons by a group of unidentified people on the outskirts of Uppara Hatti village in Afzalpur taluk, Kalaburagi district, on Wednesday evening, died in a private hospital in Solapur the same night.
Please Wait while comments are loading...