ಚಿಂಚೋಳಿ ಬಿಜೆಪಿ ಅಭ್ಯರ್ಥಿ ದಿಢೀರ್ ಬದಲಾವಣೆ?

ಬೆಂಗಳೂರು, ಏಪ್ರಿಲ್ 25 : ಅಚ್ಚರಿಯ ಬೆಳವಣಿಗೆಯಲ್ಲಿ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮೇ 19ರಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.

ಗುರುವಾರ ಕರ್ನಾಟಕ ಬಿಜೆಪಿ ಚಿಂಚೋಳಿ ಮತ್ತು ಕುಂದಗೋಳ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಅಭ್ಯರ್ಥಿಗಳ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಗಿದೆ.

ಆದರೆ, ಗುರುವಾರ ಸಂಜೆ ನಡೆದ ದಿಢೀರ್ ಬೆಳವಣಿಗೆಯಲ್ಲಿ ಚಿಂಚೋಳಿ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಾಗುವ ಸಾಧ್ಯತೆ ಇದೆ. ಹೊಸ ಅಭ್ಯರ್ಥಿ ಹೆಸರನ್ನು ಶುಕ್ರವಾರ ಬೆಳಗ್ಗೆ ಹೈಕಮಾಂಡ್‌ಗೆ ಕಳಿಸಲಾಗುತ್ತದೆ. ಹೈಕಮಾಂಡ್ ಒಪ್ಪಿಗೆ ಬಳಿಕ ಅಭ್ಯರ್ಥಿ ಅಂತಿಮಗೊಳ್ಳಲಿದ್ದಾರೆ.

ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದಾಗಿ ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಣಾವಣೆ ಎದುರಾಗಿದೆ. ಮೇ 19ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಏಪ್ರಿಲ್ 29 ಕೊನೆಯ ದಿನವಾಗಿದೆ. ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಯಾರ ಹೆಸರು ಶಿಫಾರಸು?

ಯಾರ ಹೆಸರು ಶಿಫಾರಸು?

ಗುರುವಾರ ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ಚಿಂಚೋಳಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಯಿತು. ಅಂತಿಮವಾಗಿ ಡಾ.ಉಮೇಶ್ ಜಾಧವ್ ಅವರ ಸಹೋದರ ರಾಮಚಂದ್ರ ಜಾಧವ್ ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಯಿತು.

ಅಭ್ಯರ್ಥಿ ಬದಲಾವಣೆ?

ಅಭ್ಯರ್ಥಿ ಬದಲಾವಣೆ?

ಗುರುವಾರ ಸಂಜೆ ಡಾ.ಉಮೇಶ್ ಜಾಧವ್ ಅವರು ತಮ್ಮ ಪುತ್ರ ಅವಿನಾಶ್ ಜಾಧವ್ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿರುವುದಾಗಿ ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ. ಆದ್ದರಿಂದ, ಚಿಂಚೋಳಿ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಾಗುವ ಸಾಧ್ಯತೆ ಇದೆ.

ಶುಕ್ರವಾರ ಶಿಫಾರಸು

ಶುಕ್ರವಾರ ಶಿಫಾರಸು

ಗುರುವಾರ ರಾಮಚಂದ್ರ ಜಾಧವ್ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿತ್ತು. ಶುಕ್ರವಾರ ರಾಜ್ಯ ಬಿಜೆಪಿ ಘಟಕ ಅವಿನಾಶ್ ಜಾಧವ್ ಅವರ ಹೆಸರನ್ನು ಶಿಫಾರಸು ಮಾಡಲಿದೆ. ಯಾರು ಅಭ್ಯರ್ಥಿಯಾಗಲಿದ್ದಾರೆ? ಎಂದು ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ.

ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿಲ್ಲ

ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿಲ್ಲ

ಚಿಂಚೋಳಿ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಶಾಸಕರಾದ ಪಿ.ಟಿ.ಪರಮೇಶ್ವರ್ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ವಿ.ಆರ್.ಸುದರ್ಶನ್ ಉಪಸ್ಥಿತರಿದ್ದರು. ಆದರೆ, ಅಭ್ಯರ್ಥಿಯನ್ನು ಕಾಂಗ್ರೆಸ್ ಇನ್ನೂ ಘೋಷಣೆ ಮಾಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+