ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನ ಬಿಜೆಪಿ ತೆಕ್ಕೆಗೆ
ಕಲಬುರಗಿ ಮಾರ್ಚ್ 23: ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಕಾಂಗ್ರೆಸ್‌ಗೆ ಬಿಗ್ ಶಾಕ್ ಕೊಟ್ಟಿದೆ. ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ವಾರ್ಡ್ ಸಂಖ್ಯೆ 46 ಪ್ರತಿನಿಧಿಸುವ ವಿಶಾಲ ದರ್ಗಿ ಮತ್ತು ವಾರ್ಡ್ ಸಂಖ್ಯೆ 25 ರಿಂದ ಶಿವಾನಂದ ಪಿಸ್ತಿ ಅವರು ಮೇಯರ್ ಮತ್ತು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಬಿಜೆಪಿ ಕಾಂಗ್ರೆಸ್ ಅನ್ನು ಕುಟುಕಿದೆ.
'ರಾಜ್ಯ ಕಾಂಗ್ರೆಸ್ ಮುಕ್ತವಾಗುತ್ತಿರುವ ಸೂಚನೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಖರ್ಗೆ ಅವರ ತವರು ಕಲಬುರಗಿಯಲ್ಲಿಯೇ ಸಿಕ್ಕಿದೆ. ಜೆಡಿಎಸ್-ಕಾಂಗ್ರೆಸ್ ಅನೈತಿಕ ಮೈತ್ರಿಯ ನಡುವೆಯೂ ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ' ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದೆ.

ಕಲಬುರಗಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಆಯ್ಕೆಗೊಂಡ ಶ್ರೀ ವಿಶಾಲ ದರ್ಗಿ ಮತ್ತು ಉಪ-ಮಹಾಪೌರರಾಗಿ ಆಯ್ಕೆಗೊಂಡ ಶ್ರೀ ಶಿವಾನಂದ ಪಿಸ್ತಿ ಅವರಿಗೆ ಅಭಿನಂದನೆಗಳನ್ನು ತಿಳಿಸಿದೆ. ಜೊತೆಗೆ ಕಾಂಗ್ರೆಸ್‌ನ ಸುಳ್ಳು ಗ್ಯಾರಂಟಿಗಳಿಗೆ ಮರಳಾಗದೆ ಸ್ವಾಭಿಮಾನಿ ಕನ್ನಡಿಗರು 'ಕಾಂಗ್ರೆಸ್ ಹಠಾವೋ' ಗ್ಯಾರಂಟಿ ನೀಡುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಮುಕ್ತವಾಗುತ್ತಿರುವ ಸೂಚನೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ @kharge ಅವರ ತವರು ಕಲಬುರಗಿಯಲ್ಲಿಯೇ ಸಿಕ್ಕಿದೆ. ಜೆಡಿಎಸ್-ಕಾಂಗ್ರೆಸ್ ಅನೈತಿಕ ಮೈತ್ರಿಯ ನಡುವೆಯೂ ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. #BJPYeBharavase
— BJP Karnataka (@BJP4Karnataka) March 23, 2023
1/2 pic.twitter.com/TSkvgmefGH
ಇದೇ ಮೊದಲ ಬಾರಿಗೆ ಕಲಬುರಗಿಯಲ್ಲಿ ಬಿಜೆಪಿ ಸ್ವತಂತ್ರ್ಯವಾಗಿ ಗೆಲುವು ಸಾಧಿಸಿದೆ. ಮೇಯರ್ ಆಗಿ ಬಿಜೆಪಿಯ ವಿಶಾಲ್ ದರ್ಗಿ ಅವರು ಆಯ್ಕೆಯಾದರೆ ಉಪ ಮೇಯರ್ ಆಗಿ ಶಿವಾನಂದ್ ಪಿಸ್ತಿ ಆಯ್ಕೆಯಾಗಿದ್ದಾರೆ. ಈ ಮೂಲಕ 12 ವರ್ಷಗಳ ಬಳಿಕ ಬಿಜೆಪಿ ಕಲಬುರಗಿ ಪಾಲಿಕೆಯ ಗದ್ದುಗೆಗೇರಿದೆ.
ವಿಶಾಲ್ ದರ್ಗಿ 33 ಮತಗಳನ್ನು ಪಡೆದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಕಪನೂರ್ ಮತಗಳನ್ನು ಪಡೆದಿದ್ದಾರೆ. ಇನ್ನು ಉಪಮೇಯರ್ ಸ್ಥಾನಕ್ಕೆ ಬಿಜೆಪಿಯ ಶಿವಾನಂದ್ ಪಿಸ್ತಿ 33 ಮತಗಳನ್ನು ಪಡೆದರೆ ಕಾಂಗ್ರೆಸ್ ನ ವಿಜಯಲಕ್ಷ್ಮಿ 32 ಮತಗಳನ್ನು ಪಡೆದಿದ್ದಾರೆ. 2021ರ ಸೆಪ್ಟೆಂಬರ್ ತಿಂಗಳಲ್ಲಿ ಕಲಬುರಗಿ ಪಾಲಿಕೆ ಚುನಾವಣೆ ನಡೆದಿತ್ತು. ಬಿಜೆಪಿ 23, ಕಾಂಗ್ರೆಸ್ 27, ಜೆಡಿಎಸ್ 4, ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು.

2021ರ ಸೆಪ್ಟೆಂಬರ್ ತಿಂಗಳಲ್ಲಿ ಕಲಬುರಗಿ ಪಾಲಿಕೆ ಚುನಾವಣೆ ನಡೆದಿತ್ತು. BJP 23, ಕಾಂಗ್ರೆಸ್ 27, JDS 4, ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಅಧಿಕಾರ ಚುಕ್ಕಾಣಿ ಹಿಡಿಯಲು ಜೆಡಿಎಸ್ ಬೆಂಬಲದೊಂದಿಗೆ ಅಧಿಕಾರಕ್ಕೇರಲು ಕಾಂಗ್ರೆಸ್ ಕೂಡ ತಂತ್ರ ರೂಪಿಸಿತಾದರೂ ಅದು ಸಾಧ್ಯವಾಗಲಿಲ್ಲ. ಕೈ ಮುಖಂಡರು ಜೆಡಿಎಸ್ ನಾಯಕರ ಸಂಪರ್ಕದಲ್ಲಿದ್ದರೂ, ಪಾಲಿಕೆಯ ಗದ್ದುಗೆ ಹಿಡಿಯಲು ಬಿಜೆಪಿಗೆ ಬಿಡದಂತೆ ಕೈ ತಂತ್ರ ಹೆಣೆದರೂ ಪ್ರಯೋಜನವಾಗಲಿಲ್ಲ.
ಹೈಕೋರ್ಟ್ ಆದೇಶದಿಂದ ಬಿಜೆಪಿ ನಾಯಕರಿಗೆ ಹಿನ್ನಡೆ
ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಸಂಬಂಧಿಸಿ ಹಳೆ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲು ಆದೇಶ ನೀಡಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಅರ್ಜಿಯನ್ನು ಕಲಬುರಗಿ ಹೈಕೋರ್ಟ್ ಎತ್ತಿ ಹಿಡಿದಿದೆ. ಕಲಬುರಗಿ ಹೈಕೋರ್ಟ್ ನ್ಯಾ. ಇಂದರೇಶ್ ಪೀಠ ಆದೇಶ ನೀಡಿದೆ. ಹೈಕೋರ್ಟ್ ಆದೇಶದಿಂದ ಬಿಜೆಪಿ ನಾಯಕರಿಗೆ ಹಿನ್ನಡೆ ಉಂಟಾಗಿದೆ.
63 ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲು ಆದೇಶ ನೀಡಲಾಗಿದೆ. ನವೆಂಬರ್ನಲ್ಲಿ ಹೊರಡಿಸಿದ್ದ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸುವಂತೆ ಹೈಕೋರ್ಟ್ನಿಂದ ಸೂಚನೆ ಲಭಿಸಿದೆ. ಬಿಜೆಪಿ ಅಧಿಕಾರಕ್ಕೆ ಬರಲು ಐವರ ಹೆಸರನ್ನು ಸೇರಿಸಿತ್ತು. ಪರಿಷತ್ನ ಐವರು ಸದಸ್ಯರ ಹೆಸರನ್ನು ಬಿಜೆಪಿ ಸೇರಿಸಿತ್ತು. ಕಲಬುರಗಿ ಜಿಲ್ಲೆಗೆ ಸಂಬಂಧ ಇಲ್ಲದಿದ್ದವರ ಹೆಸರು ಸೇರಿಸಿತ್ತು. ಮತದಾರರ ಪಟ್ಟಿಯಲ್ಲಿ ಐವರ ಹೆಸರು ಸೇರಿಸಿದ್ದ ಬಿಜೆಪಿ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್ ಮೊರೆಹೋಗಿತ್ತು.












Click it and Unblock the Notifications