ರಾಯಣ್ಣ ಬ್ರಿಗೇಡ್, ಭಿನ್ನಮತ ಸಹಿಸಲು ಸಾಧ್ಯವಿಲ್ಲ: ಯಡಿಯೂರಪ್ಪ

Posted By:
Subscribe to Oneindia Kannada

ಕಲಬುರಗಿ, ಜನವರಿ 22: ಇಲ್ಲಿ ನಡೆದಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಎರಡನೇ ದಿನದಂದು ಕೂಡಾ ಬಿ.ಎಸ್. ಯಡಿಯೂರಪ್ಪ ಹಾಗೂ ಕೆ.ಎಸ್. ಈಶ್ವರಪ್ಪ ನಡುವೆ ಅಂತರ ಕಾಯ್ದುಕೊಂಡಿದ್ದಾರೆ.

ಇಬ್ಬರು ವೇದಿಕೆ ಹಂಚಿಕೊಂಡರೂ, ಅಕ್ಕ ಪಕ್ಕ ಕೂರುತ್ತಿಲ್ಲ, ಮುಖಕ್ಕೆ ಮುಖ ಕೊಟ್ಟು ಮಾತನಾಡಲು ಸಿದ್ಧರಿಲ್ಲ. ಈ ನಡುವೆ 'ಯಾವುದೇ ಕಾರಣಕ್ಕೂ ಬ್ರಿಗೇಡ್ ಬೆಂಬಲಿಸುವ ಪ್ರಶ್ನೆಯೇ ಇಲ್ಲ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಖಡಕ್ ಸಂದೇಶ ನೀಡಿದ್ದಾರೆ.

BJP Executive meet : BS Yeddyurappa slams KS Eshwarappa and Rayanna Brigade

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನಲ್ಲಿ ಕೆಲವರು ಭಿನ್ನಮತೀಯ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರಿಂದ ಪಕ್ಷದ ಗೌರವಕ್ಕೆ ಧಕ್ಕೆಯಾಗುತ್ತಿದೆ. ಯಾವುದೇ ಕಾರಣಕ್ಕೂ ಇದನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯ ಕಾರ್ಯಕಾರಿಣಿ ಸಭೆಯಲ್ಲೂ ಇದರ ಬಗ್ಗೆ ಸ್ಪಷ್ಟ ಸಂದೇಶ ನೀಡಲಾಗಿದೆ. ಆದರೆ, ಅಬ್ಜಲ್‍ಪುರದಲ್ಲಿ ಭಾನುವಾರದಂದು ಬ್ರಿಗೇಡ್ ಸಭೆ ಆಯೋಜನೆಯಾಗಿದೆ ಇದರಿಂದ ಪಕ್ಷಕ್ಕೆ ಮುಜುಗರ ಉಂಟಾಗಲಿದೆ. ಮೇಲಾಗಿ ಮೂಡುತ್ತದೆ. ಇದನ್ನು ಸಹಿಸಲು ಸಾಧ್ಯವಿಲ್ಲ.

ಕಠಿಣ ಕ್ರಮ: ಬ್ರಿಗೇಡ್ ಸಮಾವೇಶದಲ್ಲಿ ಪಾಲ್ಗೊಳ್ಳಬಾರದು ಎಂದು ಈಗಾಗಲೇ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಸೂಚಿಸಿದ್ದೇನೆ. ಆದರೂ ಶಿಸ್ತು ಉಲ್ಲಂಘಿಸಿ ಪಕ್ಷಕ್ಕೆ ಧಕ್ಕೆ ಉಂಟು ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ರಾಷ್ಟ್ರೀಯ ನಾಯಕರು ಸೂಕ್ತ ಸಮಯದಲ್ಲಿ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಯಡಿಯೂರಪ್ಪ ಎಚ್ಚರಿಸಿದರು.

ಭಿನ್ನಮತ ಚಟುವಟಿಕೆಗಳನ್ನು ನಡೆಸುವುದು ಸರಿಯಲ್ಲ. ರಾಜ್ಯದಲ್ಲಿ ಬರಗಾಲವಿದೆ. ಸರ್ಕಾರ ಜನರಿಗೆ ಯಾವುದೇ ರೀತಿಯಲ್ಲೂ ಸ್ಪಂದನೆ ನೀಡುತ್ತಿಲ್ಲ. ಇದರ ವಿರುದ್ಧ ನಾವು ಹೋರಾಟ ಮಾಡಬೇಕಾಗಿದೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
BJP Executive meet day 2 : BJP state president BS Yeddyurappa has maintained distance from former minister KS Eshwarappa. Yeddyurappa said Sangolli Rayanna Brigade can't accepted at any cost.
Please Wait while comments are loading...