Breaking; ರಸ್ತೆ ಅಪಘಾತ, ಧರ್ಮಣ್ಣ ದೊಡ್ಡಮನಿ ಏರ್‌ಲಿಫ್ಟ್
ಕಲಬುರಗಿ, ನವೆಂಬರ್ 18; ಬಿಜೆಪಿ ನಾಯಕ ಮತ್ತು ಕರ್ನಾಟಕ ರಾಜ್ಯ ಉಣ್ಣೆ ಮತ್ತು ಕುರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಕಲಬುರಗಿಯಿಂದ ಅವರನ್ನು ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಏರ್‌ಲಿಫ್ಟ್ ಮಾಡಲಾಗಿದೆ.
ಕಲಬುರಗಿ ಸಂಸದ ಉಮೇಶ್ ಜಾಧವ್ ಶುಕ್ರವಾರ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಕರ್ನಾಟಕ ರಾಜ್ಯ ಉಣ್ಣೆ ಮತ್ತು ಕುರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದರು.

ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಧರ್ಮಣ್ಣ ದೊಡ್ಡಮನಿ ಕುಟುಂಬ ಸದಸ್ಯರ ಜೊತೆ ಚರ್ಚೆ ನಡೆಸಿದರು. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಬೆಂಗಳೂರಿಗೆ ಏರ್‌ಲಿಫ್ಟ್ ಮಾಡುವ ಕುರಿತು ಮಾತುಕತೆ ನಡೆಸಿದರು. ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ.

'ಧರ್ಮಣ್ಣ ದೊಡ್ಡಮನಿ ಆರೋಗ್ಯ ಏರುಪೇರು ಆಗಿರುವ ಸುದ್ದಿ ತಿಳಿದು ಬಹಳ ದುಃಖವಾಯಿತು. ಇಂದು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಭೇಟಿ ಮಾಡಿ ವೈದ್ಯರೊಂದಿಗೆ ಅವರ ಆರೋಗ್ಯ ಬಗ್ಗೆ ಸಂಪೂರ್ಣ ವಿವರಣೆ ಪಡೆದೆನು' ಎಂದು ಉಮೇಶ್ ಜಾಧವ್ ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಯಿಂದ ಝಿರೋ ಟ್ರಾಫಿಕ್ ಮೂಲಕ ಅಂಬ್ಯುಲೆನ್ಸ್‌ನಲ್ಲಿ ಧರ್ಮಣ್ಣ ದೊಡ್ಡಮನಿಯನ್ನು ಕಲಬುರಗಿ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಬರಲಾಯಿತು. ಬಳಿಕ ಹೈದರಾಬಾದ್‌ನಿಂದ ಕಲಬುರಗಿಗೆ ಆಗಮಿಸಿದ ವಿಮಾನದಲ್ಲಿ ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲಾಯಿತು.
ಧರ್ಮಣ್ಣ ದೊಡ್ಡಮನಿಯನ್ನು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು. ಅಲ್ಲಿಂದ ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.












Click it and Unblock the Notifications