Umesh Jadhav: ಬಿಸಿಲಿನ ಪ್ರಕೋಪಕ್ಕೆ ಕುಸಿದು ಬಿದ್ದ ಬಿಜೆಪಿ ಸಂಸದ
ಕಲಬುರಗಿ, ಮೇ 01: ಕರ್ನಾಟಕದಲ್ಲಿ ಬಿಸಿಲಿನ ಆರ್ಭಟ ಮುಂದುವರೆದಿದೆ. ಅದರಲ್ಲೂ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತ್ಯಧಿಕ ಗರಿಷ್ಠ ತಾಪಮಾನ ದಾಖಲಾಗಿದೆ. ಇದೀಗ ಈ ಬಿಸಿಲಿನ ಪ್ರಕೋಪ ತಾಳಲಾರದೇ ಸಂಸದರೊಬ್ಬರು ಕುಸಿದು ಬಿದ್ದಿದ್ದಾರೆ.
ಕಲಬುರಗಿಯಲ್ಲಿನ ತೀವ್ರ ಬಿಸಿಲಿನ ತಾಪಕ್ಕೆ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್ ಅವರು ತಲೆ ಸುತ್ತಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ತುರ್ತು ವಾಹನಕ್ಕೆ ಕರೆ ಮಾಡಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಕಲಬುರಗಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಸ್ಥಳೀಯ ಸಂಸದರಾಗಿ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ಪ್ರತಿಭಟನಾಕಾರರ ಜೊತೆ ಮಾತನಾಡುವಾಗ ತೀವ್ರ ತಾಪಮಾನ ತಡೆದುಕೊಳ್ಳಲಾಗದೇ ಕುಸಿದು ಬಿದ್ದಿದ್ದಾರೆ.
ಅಂಬೇಡ್ಕರ್‌ಗೆ ಅಪಮಾನ ಮಾಡಿದವರಿಗೆ ಜಾಮೀನು
ಇದಕ್ಕೂ ಮೊದಲ ಅವರು ಕಲಬುರಗಿಯ ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಲಬುರಗಿಯಲ್ಲಿ ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ. ಕಳೆದ ಬಾರಿ ರಾಮ ಮಂದಿರ ಉದ್ಘಾಟನೆ ಆದ ಮಾರನೇ ದಿನವೇ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಲಾಗಿತ್ತು.
ಆದರೆ ದುರದೃಷ್ಟವಶಾತ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಜಾಮೀನಿನ ಮೇಲೆ ಹೊರ ಬಂದ ಆರೋಪಿಯ ಮನೆ ಮೇಲೆ ಕಲ್ಲು ತೂರಾಟ ನಡೆದ ಹಲ್ಲೆಗೈದಿದ್ದರು ಎಂದು ಅವರು ಮಾಹಿತಿ ನೀಡಿದ್ದರು.

ನೆನ್ನೆ ಜಾಧವ್ ಪರ ವಿಜಯೇಂದ್ರ ಮತಯಾಚನೆ
ಮಂಗಳವಾರಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಲಬುರಗಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಮಲಾಪುರದಲ್ಲಿ ಏರ್ಪಡಿಸಲಾದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಅವರು ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಉಮೇಶ್ ಜಾಧವ್ ಪರ ಮತ ಯಾಚಿಸಿದರು.
BJP'S MP and Gulbarga loksabha candidate umesh Jadhav collapsed during a protest in Gulbarga..
— Talha Hussain | طلحہ حسین 🇵🇸 (@TalhaGulbargavi) May 1, 2024
He's fielded against Radhakrishna RK (Son in law of AICC President Dr Mallikarjun Kharge). pic.twitter.com/LPTQeDqT1K
ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ. ಉಮೇಶ್ ಜಾಧವ್, ಶಾಸಕರಾದ ಶ್ರೀ ಬಸವರಾಜ ಮತ್ತಿಮಡು, ವಿಧಾನಪರಿಷತ್ ಸದಸ್ಯ ಬಿ. ಜಿ. ಪಾಟೀಲ್, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷರು ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಹೀಗೆ ಚುನಾವಣೆ ವೇಳೆ ನಿರಂತರವಾಗಿ ಪ್ರಚಾರದಲ್ಲಿ ತೊಡಗಿದ್ದ ಸಂಸದ ಆಯಾಸಗೊಂಡಿದ್ದರು ಎನ್ನಲಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications