ಅಫಜಲಪುರ : ಬಿಜೆಪಿ ಭಿನ್ನಮತ, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ
ಕಲಬುರಗಿ, ಏಪ್ರಿಲ್ 11 : ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾದ ಬಳಿಕ ಕಲಬುರಗಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ಪದಾಧಕಾರಿಗಳು ಮತ್ತು ತಾಲೂಕು ಪಂಚಾಯಿತಿ ಸದಸ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.
ಎಂ.ವೈ.ಪಾಟೀಲ್ ಬೆಂಬಲಿಗರಾದ ಬಿಜೆಪಿ ಪದಾಧಿಕಾರಿಗಳು ಮತ್ತು ತಾಲೂಕು ಪಂಚಾಯಿತು ಸದಸ್ಯರ ಬಿಜೆಪಿ ಸದಸ್ಯತ್ವಕ್ಕೆ ಬುಧವಾರ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಎಂ.ವೈ.ಪಾಟೀಲ ಬೆಂಬಲಿಸುವುದಾಗಿ ಘೋಷಣೆ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಅಫಜಲಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಹಲವಾರು ವಿರೋಧಗಳ ನಡುವೆಯೇ ಬಿಜೆಪಿ ಸೇರಿದ್ದರು. ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಅವರನ್ನು ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ ಬಳಿಕ ಮಾಜಿ ಶಾಸಕ ಎಂ.ವೈ.ಪಾಟೀಲ ಅಸಮಾಧಾನಗೊಂಡಿದ್ದರು. ನಂತರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು. ಈಗ ಅವರ ಬೆಂಬಲಿಗರು ಸಾಮೂಹಿಕವಾಗಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
'30 ವರ್ಷಗಳಿಂದ ಅಫಜಲಪುರದಲ್ಲಿ ರಾಜಕೀಯ ವೈರಿಗಳಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಈಗ ನಾವು ಒಂದಾಗಿ ಸಾಗಲು ಸಾಧ್ಯವಿಲ್ಲ. ಗುತ್ತೇದಾರ್ ವಿರುದ್ಧ ರಾಜಕೀಯ ಹೋರಾಟ ಮುಂದುವರೆಸಲು ಕಾಂಗ್ರೆಸ್ ಸೇರುತ್ತಿರುವುದಾಗಿ' ಎಂ.ವೈ.ಪಾಟೀಲ ಹೇಳಿದ್ದರು.
ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು 7 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, 6 ಬಾರಿ ಕ್ಷೇತ್ರದಲ್ಲಿ ಗೆಲುವು ಕಂಡಿದ್ದಾರೆ. 2013ರ ಚುನಾವಣೆಯಲ್ಲಿ ಅವರು 38,093 ಮತಗಳನ್ನು ಪಡೆದು ಜಯಗಳಿಸಿದ್ದರು.
ಸಚಿವ ಸ್ಥಾನ ಪಡೆಯಲು ಅವರು ಹಲವಾರಿ ಬಾರಿ ಪ್ರಯತ್ನ ಪಟ್ಟಿದ್ದರು. ಆದರೆ, ಸಚಿವ ಸಂಪುಟ ಸೇರುವ ಅವರ ಆಸೆ ಈಡೇರಿರಲಿಲ್ಲ. ಕೆಲವು ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಿಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದರು.
ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ ಬಳಿಕ ಮಾರ್ಚ್ 30ರಂದು ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಆದೇಶ ಹೊರಡಿಸಿದ್ದರು.
ಏಪ್ರಿಲ್ 5ರಂದು ರಾಣೆಬೆನ್ನೂರಿನಲ್ಲಿ ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರನ್ನು ಭೇಟಿ ಮಾಡಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಅವರನ್ನು ಅಫಜಲಪುರ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಕಾಂಗ್ರೆಸ್ ತವರು ಮನೆ : 'ಕಾಂಗ್ರೆಸ್ ನನ್ನ ತವರು ಮನೆ. ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರಿದ್ದರಿಂದ ನಾನು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದೆ. ಈಗ ಮಾತೃಪಕ್ಷಕ್ಕೆ ವಾಪಸ್ ಆಗಿದ್ದೇನೆ' ಎಂದು ಎಂ.ವೈ.ಪಾಟೀಲ ಹೇಳಿದ್ದಾರೆ.
ಉಚ್ಛಾಟನೆ ಮಾಡಬೇಕಾಯಿತು : 'ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ನಾನು, ಸಿದ್ದರಾಮಯ್ಯ ಬಹಳ ಪ್ರಯತ್ನ ನಡೆಸಿದೆವು. ಅವರು ಪಕ್ಷ ತೊರೆಯಲು ಕಾರಣಗಳೇ ಇರಲಿಲ್ಲ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಕಾರಣ ಉಚ್ಛಾಟನೆ ಮಾಡಬೇಕಾಯಿತು' ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದ್ದರು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications