ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂರೂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೇ ಜಯ: ಕಟೀಲ್

By ಕಲಬುರಗಿ ಪ್ರತಿನಿಧಿ
|
Google Oneindia Kannada News

ಕಲಬುರಗಿ, ಆಗಸ್ಟ್ 21: ಸೆಪ್ಟಂಬರ್ 3ರಂದು ನಡೆಯಲಿರುವ ರಾಜ್ಯದ ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

"ಈ ಮೂರೂ ಮಹಾನಗರ ಪಾಲಿಕೆಗಳು ಬಿಜೆಪಿ ತೆಕ್ಕೆಗೆ ಬರಲಿದ್ದು, ಸೂಕ್ತ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು," ಎಂದು ತಿಳಿಸಿದರು.

 ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

"ಇನ್ನು ಕಲಬುರಗಿ ಮಹಾನಗರ ಪಾಲಿಕೆಯ ದಕ್ಷಿಣ ಮತ್ತು ಉತ್ತರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾಲಿಕೆಯ ಅತೀ ಹೆಚ್ಚು ವಾರ್ಡ್‌ಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ," ಎಂದು ಭರವಸೆ ವ್ಯಕ್ತಪಡಿಸಿದರು.

Kalaburagi: BJP Will Wins All Three Corporation Election: Nalin Kumar Kateel

"ಈಗಾಗಲೇ ಬಿಜೆಪಿ ಪಕ್ಷವು ಶನಿವಾರ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದು, ಭಾನುವಾರ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತದೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕೊಟ್ಟಿದೆ. ಹೀಗಾಗಿ ಜನರು ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ."

"ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅವಧಿ ಪೂರ್ಣ ಮಾಡಲ್ಲ ಎನ್ನುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ನಳಿನ್‌ಕುಮಾರ್ ಕಟೀಲ್, ಸಿದ್ದರಾಮಯ್ಯನವರು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಇರುವುದು ಕನ್ಫರ್ಮ್ ಆಗಿದೆ. ಹಾಗಾಗಿ ಸಿದ್ದರಾಮಯ್ಯ ಜೋತಿಷ್ಯ ಹೇಳುವುದಕ್ಕೆ ಮುಂದಾಗಿದ್ದಾರೆ," ಎಂದು ವ್ಯಂಗ್ಯವಾಡಿದರು.

ಇತ್ತ ಈಗಾಗಲೇ ಅತೃಪ್ತ ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆಯುತ್ತಿದ್ದು, ಶನಿವಾರ ಬಿಜೆಪಿ ಮಾಜಿ ಪಾಲಿಕೆ ಸದಸ್ಯ ಬಸವರಾಜ ನಾಶಿ ಕಾಂಗ್ರೆಸ್ ಸೇರುವ ಮೂಲಕ ಪಕ್ಷಾಂತರ ಪರ್ವಕ್ಕೆ ನಾಂದಿ ಹಾಡಿದ್ದಾರೆ. ಟಿಕೆಟ್ ಸಿಗದ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿರುವ ಬಗ್ಗೆ ಸುಳಿವು ಸಿಕ್ಕಿದೆ.

Kalaburagi: BJP Will Wins All Three Corporation Election: Nalin Kumar Kateel

ಉತ್ತಮ ದರ್ಜೆ ಶಾಲೆ, ಉಚಿತ ಲ್ಯಾಪ್​ಟಾಪ್: ಆಪ್ ಪ್ರಣಾಳಿಕೆ
ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (ಆಪ್) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್​ಟಾಪ್, ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ ಎಂದು ಹೇಳಿದೆ. ಸ್ಮಾರ್ಟ್ ಸಿಟಿ, ಬಿಆರ್​ಟಿಸಿ​ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಆಪ್ ಮಾಹಿತಿ ನೀಡಿದೆ.

ಈಗಾಗಲೇ ಅಭ್ಯರ್ಥಿಗಳ 3 ಪಟ್ಟಿಗಳನ್ನು ಬಿಡುಗಡೆ ಮಾಡಿದ್ದು, ಇನ್ನೊಂದು ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ. ಉತ್ತಮ ದರ್ಜೆಯ ಶಾಲೆಯ ಜೊತೆ ಪ್ರತಿ ಮಕ್ಕಳಿಗೆ ಉಚಿತ ಲ್ಯಾಪ್​ಟಾಪ್ ನೀಡುತ್ತೇವೆ. ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಮ್ ಆದ್ಮಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ಚುನಾವಣಾ ಅಧಿಸೂಚನೆ ಪ್ರಕಾರ ಮೂರು ಮಹಾನಗರ ಪಾಲಿಕೆಯಲ್ಲಿ ಇಂದಿನಿಂದ (ಆಗಸ್ಟ್ 16) ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಆಗಸ್ಟ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಚುನಾವಣೆ ನಡೆಯುವ ಮಹಾನಗರ ಪಾಲಿಕೆಗಳು
1. ಬೆಳಗಾವಿ ಮಹಾನಗರ ಪಾಲಿಕೆ- 58 ವಾರ್ಡ್‌ಗಳು
2. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ- 83 ವಾರ್ಡ್‌ಗಳು
3. ಕಲಬುರಗಿ ಮಹಾನಗರ ಪಾಲಿಕೆ- 55 ವಾರ್ಡ್‌ಗಳು

English summary
BJP State President Nalin Kumar Kateel expressed confidence that the BJP will take the helm of the power in Hubballi-Dharawad, Belagavi and Kalaburagi Corporation Election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X