Kalaburagi: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು- ಕಾಂಗ್ರೆಸ್ ಮೇಲೆ ಕಿರುಕುಳದ ಆರೋಪ!

ಕಲಬುರಗಿ ಅಕ್ಟೋಬರ್ 19: ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ಚಿಂಚೊಳ್ಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ.

35 ವರ್ಷದ ಶಿವಕುಮಾರ್ ಎಂಬುವವರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ನಿನ್ನೆ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣರಾಗಿದ್ದಾರೆ. ಶಿವಕುಮಾರ್ ಸಂಬಂಧಿ ನರಸಪ್ಪ ಎಂಬುವರ ಹೊಲಕ್ಕೆ ಹೋಗಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದರು. ಇದರಿಂದ ಬೇಸತ್ತು ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇವರು ಸಾವಿಗೆ ಶರಣಾಗುವ ಮುನ್ನ ಮೂರು ಆಡಿಯೋ ರೆಕಾರ್ಡ್ ಮಾಡಿದ್ದಾರೆ. ಅದರಲ್ಲಿ ಶಿವಕುಮಾರ್ ತಮ್ಮ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಿದ್ದಾರೆ.

bjp-worker-commits-suicide

ಆಡಿಯೋದಲ್ಲಿ ಶಿವಕುಮಾರ್, 'ನಾನು ಹಿಂದೂ ಹುಲಿಯಾಗಿದ್ದೇನೆ, ಹಿಂದೂ ಹುಲಿಯಾಗೇ ಸಾಯುತ್ತೇನೆ' ಎಂದು ಹೇಳಿದ್ದಾರೆ. ಜೊತೆಗೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ತಮ್ಮ ಸಾವಿಗೆ ಕಾರಣ ಎಂದು ಹೇಳಿದ್ದಾರೆ. 'ಯಾವುದೇ ಕಾರಣಕ್ಕೂ ಹಿಂದುಗಳ ಬಗ್ಗೆ ಮಾತನಾಡಬಾರದು. ಮಾತನಾಡಿದರೆ ಅವರಿಗೆ ಬೆಂಕಿ ಬೀಳುತ್ತದೆ' ಎಂದು ಆಡಿಯೋದಲ್ಲಿ ಶಿವಕುಮಾರ್ ಹೇಳಿದ್ದಾರೆ.

ಇನ್ನೂ ಆತ್ಮಹತ್ಯೆಗೂ ಮುನ್ನ ಆತನನ್ನು ಥಳಿಸಲಾಗಿದೆ ಎಂದು ಪಕ್ಷ ಆರೋಪಿಸಿದೆ. ಘಟನೆಯ ಸತ್ಯಾಸತ್ಯತೆಗಳನ್ನು ಪರೀಶೀಲಿಸಲಾಗುತ್ತಿದ್ದು ಕಲಬುರಗಿಯ ಸುಲೆಪೇಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+