ಕಲಬುರಗಿ: ಸೆಪ್ಟಂಬರ್ 17ರಂದು ಸಚಿವ ಸಂಪುಟ ಸಭೆ, ನಿಷೇಧಾಜ್ಞೆ ಜಾರಿ
ಕಲಬುರಗಿ, ಸೆಪ್ಟೆಂಬರ್ 16: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಸೆಪ್ಟೆಂಬರ್ 17ರ ಮಂಗಳವಾರ ಸಚಿವ ಸಂಪುಟ ಸಭೆ ನಡೆಯಲಿದೆ. ಕಲಬುರಗಿ ಮಿನಿ ವಿಧಾನಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ, ನಗರ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಸಿದ್ದರಾಮಯ್ಯ ಸೋಮವಾರ ಸಂಜೆಯೇ ಕಲಬುರಗಿ ನಗರಕ್ಕೆ ಆಗಮಿಸಿ, ವಾಸ್ತವ್ಯ ಹೂಡಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸಂಪುಟ ಸಭೆಯಲ್ಲಿ ಯಾವ-ಯಾವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕಾದು ನೋಡಬೇಕಿದೆ.
ಮಂಗಳವಾರ ಕಲಬುರಗಿ ನಗರದ ಮಿನಿ ವಿಧಾನಸೌಧ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ 19ನೇ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಿ.ಎನ್.ಎಸ್.ಎಸ್ ಕಾಯ್ದೆ 1973ರ ಕಲಂ 163 ಅನ್ವಯ ಜಿಲ್ಲಾಧಿಕಾರಿಗಳ ಕಛೇರಿಯ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.

ಈ ಕುರಿತು ಉಪ ಪೊಲೀಸ್ ಆಯುಕ್ತು (ಕಾ&ಸು) ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಕಲಬುರಗಿ ನಗರ ಆದೇಶವನ್ನು ಹೊಡಿಸಿದ್ದಾರೆ. ಪೊಲೀಸ್ ಆಯುಕ್ತರು ಹಾಗೂ ದಂಡಾಧಿಕಾರಿಗಳು, ಕಲಬುರಗಿ ನಗರ ಅವರ ನಡಾವಳಿಗಳ ಅನ್ವಯ ಈ ಆದೇಶವನ್ನು ಹೊರಡಿಸಲಾಗಿದೆ. ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 12 ಗಂಟೆಯ ತನಕ ಆದೇಶ ಜಾರಿಯಲ್ಲಿರುತ್ತದೆ.
ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್. ಡಿ. ಕಲಬುರಗಿ ನಗರದಲ್ಲಿ ಸೋಮವಾರ ಅಧಿಕಾರಿ ಹಾಗೂ ಸಿಬ್ಬಂದಿಗಳ ರೂಲ್ ಕಾಲ್ ತೆಗೆದುಕೊಂಡರು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಬಂದೋಬಸ್ತ್ ಸಮಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಿದರು.
ಆದೇಶದ ವಿವರ: 19ನೇ ಸಚಿವ ಸಂಪುಟದ ಸಭೆ ನಡೆಲಿರುವ ದಿನಾಂಕ 17/09/2024 ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 12 ಗಂಟೆಯ ವರೆಗೆ ಬಿ.ಎನ್.ಎಸ್.ಎಸ್ ಕಾಯ್ದೆ 1973ರ ಕಲಂ:163 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸುವ ಕುರಿತು ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.
ಕಲಬುರಗಿ ನಗರದಲ್ಲಿ 19ನೇ ಸಚಿವ ಸಂಪುಟದ ಸಭೆ ನಡೆಲಿದ್ದು ದಿನಾಂಕ 17/09/2024ರಂದು ಮಿನಿವಿಧಾನ ಸೌಧ ಜಿಲ್ಲಾಧಿಕಾರಿಗಳ ಕಛೇರಿಯ (ಪ್ರದೇಶದಲ್ಲಿ) ವ್ಯಾಪ್ತಿಯ ಸುತ್ತ ಮುತ್ತಲು 200 ಮೀಟರ್ ಬಿ.ಎನ್.ಎಸ್.ಎಸ್ ಕಾಯ್ದೆ 1973 ರ ಕಲಂ:163 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ನಿಷೇಧಾಜ್ಞೆ ಜಾರಿಗೊಳಸಲು ಸಹಾಯಕ ಪೊಲೀಸ್ ಆಯಕ್ತರು, ದಕ್ಷಿಣ ಉಪ ವಿಭಾಗ ಕಲಬುರಗಿ ನಗರ ಅವರು ಕೋರಿರುತ್ತಾರೆ. ಮೇಲಿನ ವಿಷಯ ಕುರಿತು ಪೀಠಿಕೆಯಲ್ಲಿ ವಿವರಿಸಿದ. ಎಲ್ಲಾ ಅಂಶಗಳು ಮನವರಿಕೆಯಾಗಿದ್ದು, ಈ ಕೆಳಗಿನಂತೆ ಆದೇಶವನ್ನು ಹೊರಡಿಸಿರುತ್ತೇನೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪೀಠಿಕೆಯಲ್ಲಿ ವಿವರಿಸಿದ ಅಂಶಗಳ ಹಿನ್ನಲೆಯಲ್ಲಿ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 163ನೇ ಪ್ರಕರಣದ ಅನ್ವಯ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ ಸಚಿವ ಸಂಪುಟದ ಸಭೆಯ ಕಾಲಕ್ಕೆ ವಿವಿಧ ಸಂಘಟನೆಗಳು, ಪ್ರತಿಭಟನೆ ಮತ್ತು ಮುಷ್ಕರ ಮಾಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಕಾನೂನು & ಸುವ್ಯವಸ್ಥೆ ಕಾಪಾಡಿಕೊಂಡು ಬರಲು ಮತ್ತು ಸುಗಮ ಸಚಿವ ಸಂಪುಟ ಸಭೆ ನಡೆಸಲು ಮಿನಿವಿಧಾನ ಸೌಧ ಜಿಲ್ಲಾಧಿಕಾರಿಗಳ ಕಛೇರಿಯ (ಪ್ರದೇಶದಲ್ಲಿ) ವ್ಯಾಪ್ತಿಯ 200 ಮೀಟರ್ ಸುತ್ತಲೂ ಬಿ.ಎನ್.ಎಸ್.ಎಸ್ ಕಾಯ್ದೆ ಪಕ್ರಿಯಾ ಸಂಹಿತೆ ಕಾಯ್ದೆ 1973ರ ಕಲಂ: 163 ರನ್ವಯ ನಿಬಂಧನೆಗಳಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ತಿಳಿಸಿದೆ.
* ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ 5 ಆಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು ನಿಷೇಧಿಸಿದೆ.
* ಮೆರವಣಿಗೆ, ಪ್ರತಿಭಟನೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ.
* ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
* ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
* ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜೆ ಮಾಡುವುದು, ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.
ಸಚಿವ ಸಂಪುಟ ಸಭೆಯ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝೀಯಾ ತರುನ್ನುಮ್ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಂಪುಟ ಸಭೆ ಸಂದರ್ಭದಲ್ಲಿ ಶಿಷ್ಟಚಾರ ಪಾಲನೆ ಹಾಗೂ ಕಾರ್ಯಕ್ರಮಗಳ ಬಗ್ಗೆ ಸಚಿವರು ಸೂಚನೆಗಳನ್ನು ನೀಡಿದರು.












Click it and Unblock the Notifications