ಅಭ್ಯರ್ಥಿ ಬಳಿ 50 ಸಾವಿರಕ್ಕಿಂತ ಹೆಚ್ಚು ನಗದು ಇರುವಂತಿಲ್ಲ

ಕಲಬುರಗಿ, ಅಕ್ಟೋಬರ್ 06: ವಿಧಾನ ಪರಿಷತ್ ಚುನಾವಣೆ ಅಕ್ಟೋಬರ್ 28ರಂದು ನಡೆಯಲಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನದ ಆಯ್ಕೆಗಾಗಿಯೂ ಮತದಾನ ನಡೆಯಲಿದೆ.

ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ನಡೆಸಿದರು. "ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ತಮ್ಮ ಬಳಿ ನಗದಾಗಿ 50 ಸಾವಿರ ರೂ. ಕ್ಕಿಂತ ಹೆಚ್ಚಿನ ಹಣ ಇಟ್ಟುಕೊಳ್ಳುವಂತಿಲ್ಲ" ಎಂದರು.

"ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಚುನಾವಣಾ ಖರ್ಚಿಗೆ ಯಾವುದೇ ಮಿತಿ ಇಲ್ಲ. ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಶಾಂತಿ ರೀತಿಯ ಚುನಾವಣೆಗೆ ಸಹಕರಿಸಬೇಕು" ಎಂದು ಮನವಿ ಮಾಡಿದರು.

Candidates Can Carry Cash Less Than 50 Thousand

ಮತದಾರರು: ಕಲಬುರಗಿ ಜಿಲ್ಲೆಯಲ್ಲಿ 7329 ಮತದಾರರಿದ್ದಾರೆ. ಇದರಲ್ಲಿ 4,333 ಪುರುಷರು ಮತ್ತು 2,996 ಮಹಿಳೆಯರು ಇದ್ದಾರೆ. ಮತದಾನಕ್ಕೆ 41 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಪ್ರಚಾರ, ಸಭೆ-ಸಮಾರಂಭ ಆಯೋಜನೆಗೆ ಎಲ್ಲಾ ರಾಜಕೀಯ ಪಕ್ಷಗಳು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಚುನಾವಣೆ ಅಧಿಸೂಚನೆಯನ್ನು ಈಗಾಗಲೇ ಪ್ರಕಟಿಸಲಾಗಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 8 ಕೊನೆ ದಿನವಾಗಿದೆ. ಅಕ್ಟೋಬರ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 12 ಕೊನೆಯ ದಿನವಾಗಿರುತ್ತದೆ.

ಅಕ್ಟೋಬರ್ 28 ರಂದು ಬೆಳಗ್ಗೆ 8 ರಿಂದ ಸಾಯಂಕಾಲ 5 ಗಂಟೆ ವರೆಗೆ ಮತದಾನ ನಡೆಯಲಿದ್ದು, ನವೆಂಬರ್ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಮಾಡಲು ಅರ್ಹರಿರುವ ಮತದಾರರು ಅಕ್ಟೋಬರ್ 8ರ ಮಧ್ಯಾಹ್ನ 3 ಗಂಟೆ ವರೆಗೆ ನಮೂನೆ 19ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+