ಕಲಬುರಗಿಯಲ್ಲಿ ಕಿಡಿಗೇಡಿಗಳಿಂದ 8 ಕಾರುಗಳಿಗೆ ಬೆಂಕಿ

Posted By: ಕಲಬುರಗಿ ಪ್ರತಿನಿಧಿ
Subscribe to Oneindia Kannada

ಕಲಬುರಗಿ, ಜನವರಿ 14 : ಕಲಬುರಗಿ ನಗರದ ವಿವಿಧ ಬಡಾವಣೆಗಳಲ್ಲಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ನಗರದಲ್ಲಿ ಒಂದೇ ದಿನ 8ಕ್ಕೂ ಅಧಿಕ ಕಾರುಗಳಿಗೆ ಬೆಂಕಿ ಹಚ್ಚಲಾಗಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.

ಸೇಡಂ ರಸ್ತೆಯ ಜಯನಗರದಲ್ಲಿ 2, ಬನಶಂಕರಿ ಕಾಲೋನಿಯಲ್ಲಿ 1, ವಿಶ್ವೇಶರಯ್ಯ ಕಾಲೋನಿಯಲ್ಲಿ 1, ಯುನೈಟೆಡ್ ಆಸ್ಪತ್ರೆ ಬಳಿ 1, ಲಾಲಗೇರಿ ಕ್ರಾಸ್ ಬಳಿ 1 ಕಾರು ಸೇರಿದಂತೆ ಎಂಟಕ್ಕೂ ಅಧಿಕ ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ.

ಶಿವಮೊಗ್ಗದಲ್ಲಿ ಬಸ್, ಆಟೋಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

ಒಂದೇ ದುಷ್ಕರ್ಮಿಗಳ ಗುಂಪು ಈ ಕೃತ್ಯವನ್ನು ಮಾಡಿರಬಹುದು ಎಂದು ಶಂಕಿಸಲಾಗಿದೆ. ಏಕಕಾಲಕ್ಕೆ ಎಲ್ಲಾ ಕಡೆ ಬೆಂಕಿ ಹಚ್ಚಿರುವ ಸಾಧ್ಯತೆ ಎಂದು ಸ್ಥಳೀಯರು ಹೇಳಿದ್ದಾರೆ.

ಮೆಡಿಕಲ್ ವಿದ್ಯಾರ್ಥಿನಿಯರ ಬೈಕ್ ಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

Car parked outside the house sets fire

ಕಿಡಿಗೇಡಿಗಳ ಕೃತ್ಯದಿಂದ ಕಲಬುರಗಿ ನಗರದ ಜನರು ಆತಂಕಗೊಂಡಿದ್ದಾರೆ. ಕಾರುಗಳಿಗೆ ಬೆಂಕಿ ಹಚ್ಚಿರುವುದು ಏಕೆ? ಎಂಬುದು ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಒಂದು ಕಾರು ವೈದ್ಯರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಆಸ್ಪತ್ರೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
More than 8 car's parked outside the house was set on fire by unidentified on Kagaluragi, Karnataka. Police visited the spot and investigating.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ