ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿ : ತೊಗರಿಗೆ ಬೆಂಬಲ ಬೆಲೆ ಘೋಷಿಸಿದ ಕೇಂದ್ರ ಸರ್ಕಾರ

|
Google Oneindia Kannada News

ಕಲಬುರಗಿ, ನವೆಂಬರ್ 28 : ಕರ್ನಾಟಕದ ತೊಗರಿ ಕಣಜ ಕಲಬುರಗಿ ಜಿಲ್ಲೆ. ಪ್ರಸ್ತುತ 2018-19ನೇ ಸಾಲಿನ ಮುಂಗಾರು ಹಂಗಾಮಿನ ತೊಗರಿ ಬೆಳೆಗೆ ಕೇಂದ್ರ ಸರ್ಕಾರವು 5,675 ರೂ. ಬೆಂಬಲ ಬೆಲೆ ಘೋಷಣೆ ಮಾಡಿದೆ.

ಕಲಬುರಗಿ ಜಿಲ್ಲೆಯಲ್ಲಿ 451999 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಿಂದ ಬರುವ ಸುಮಾರು 2653672 ಕ್ವಿಂಟಾಲ್ ತೊಗರಿಯನ್ನು ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ.

10 ಪ್ರಗತಿಪರ ರೈತರಿಗೆ 'ಸರಳ ಜೀವನ 'ಮಣ್ಣಿನ ಮಗ ಪ್ರಶಸ್ತಿ ಪ್ರದಾನ10 ಪ್ರಗತಿಪರ ರೈತರಿಗೆ 'ಸರಳ ಜೀವನ 'ಮಣ್ಣಿನ ಮಗ ಪ್ರಶಸ್ತಿ ಪ್ರದಾನ

'ಈ ವರ್ಷ ಸಕಾಲದಲ್ಲಿ ಮಳೆ ಬಾರದ ಕಾರಣ ಹೆಚ್ಚು ಪ್ರಮಾಣದಲ್ಲಿ ಬೆಳೆ ನಾಶವಾಗಿ ಇಳುವರಿ ಕಡಿಮೆ ಬರಬಹುದು ಎಂದು ಅಂದಾಜಿಸಲಾಗಿದೆ. ಒಟ್ಟಾರೆ ಬರುವ ತೊಗರಿ ಇಳುವರಿಯನ್ನು ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಗೆ ಸೂಕ್ತ ಏಜೆನ್ಸಿಗಳನ್ನು ನೇಮಿಸಿ ಖರೀದಿ ಪ್ರಕ್ರಿಯೆ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು' ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಅಪಪ್ರಚಾರಕ್ಕೆ ಕಿವಿಗೊಡಬೇಡಿ, ಸಾಲಮನ್ನಾ ಮಾಡೇ ಮಾಡ್ತೀನಿ: ಸಿಎಂಅಪಪ್ರಚಾರಕ್ಕೆ ಕಿವಿಗೊಡಬೇಡಿ, ಸಾಲಮನ್ನಾ ಮಾಡೇ ಮಾಡ್ತೀನಿ: ಸಿಎಂ

ಕಳೆದ ವರ್ಷ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಸಂದರ್ಭದಲ್ಲಿ ಕಂಡು ಬಂದಿರುವ ನ್ಯೂನ್ಯತೆಗಳು ಈ ವರ್ಷ ಮರುಕಳಿಸದಂತೆ ಅಗತ್ಯ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಕುಮಾರಸ್ವಾಮಿ-ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಮುಖ್ಯಾಂಶಗಳುಕುಮಾರಸ್ವಾಮಿ-ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಮುಖ್ಯಾಂಶಗಳು

Central government fixed supporting price for Tur Dal

ತೊಗರಿ ಖರೀದಿ ಪ್ರಮಾಣಕ್ಕನುಗುಣವಾಗಿ ಖಾಲಿ ಚೀಲಗಳ ಕೊರತೆಯಾಗದಂತೆ ಎಚ್ಚರವಹಿಸಬೇಕು. ದಾಸ್ತಾನು ಮಾಡಿಕೊಳ್ಳಲು ಸ್ಥಳಾವಕಾಶ ಇಟ್ಟುಕೊಳ್ಳಬೇಕು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಖರೀದಿ ಪ್ರಕ್ರಿಯೆಗೆ ಬೇಕಾಗಿರುವ ಅಗತ್ಯ ಸಾಮಗ್ರಿಗಳನ್ನು ಇರುವ ಬಗ್ಗೆ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಎ.ಪಿ.ಎಂ.ಸಿ. ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ರಾಜ್ಯ ಉಗ್ರಾಣ ನಿಗಮದಲ್ಲಿ 15 ಲಕ್ಷ ಕ್ವಿಂಟಾಲ್ ಹಾಗೂ ಕೇಂದ್ರ ಸರ್ಕಾರದ ಉಗ್ರಾಣದಲ್ಲಿ 3 ಲಕ್ಷ ಕ್ವಿಂಟಾಲ್ ತೊಗರಿ ಸಂಗ್ರಹಣೆಗೆ ಸ್ಥಳ ಇರುವುದಾಗಿ ಉಗ್ರಾಣ ವ್ಯವಸ್ಥಾಪಕರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಭತ್ತಕ್ಕೆ ಬೆಂಬಲ ಬೆಲೆ : 2018-19ನೇ ಸಾಲಿಗೆ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದಂತೆ ರೈತರಿಂದ ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‍ಗೆ 1750/- ರೂ.ಗಳಂತೆ ಖರೀದಿಸಲು ನವೆಂಬರ್ 24 ರಂದು ರಾಜ್ಯ ಸರ್ಕಾರ ಆದೇಶ ನೀಡಿದೆ.

English summary
Central government announced supporting price for Tur Dal in Kalaburagi district. Farmers will get 5675 Rs supporting price.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X