ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆ

ಕಲಬುರಗಿ, ಏಪ್ರಿಲ್ 16 : ಲೋಕಸಭಾ ಚುನಾವಣೆ 2019ರ ಜೊತೆಗೆ ವಿಧಾನಸಭೆ ಉಪ ಚುನಾವಣೆ ಎದುರಾಗಿದೆ. ಮೇ 19ರಂದು ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಮೇ 23ರಂದು ಫಲಿತಾಂಶ ಘೋಷಣೆಯಾಗಲಿದೆ.

ಚುನಾವಣಾ ಆಯೋಗ ಮಂಗಳವಾರ ಸಂಜೆ ಉಪ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಮತದಾನ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಿಂದ ಡಾ.ಉಮೇಶ್ ಜಾಧವ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಗಳಿಸಿದ್ದರು. ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಆದ್ದರಿಂದ, ಉಪ ಚುನಾವಣೆ ಎದುರಾಗಿದೆ. ಲೋಕಸಭಾ ಚುನಾವಣೆಯಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಮೇ 19ರಂದು ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ. ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಯಾಗಲಿದ್ದು, ಅಂದೇ 2 ಕ್ಷೇತ್ರದ ಉಪ ಚುನಾವಣೆಗಳ ಫಲಿತಾಂಶ ಪ್ರಕಟವಾಗಲಿದೆ...

ಗುಲ್ಬರ್ಗ ಕ್ಷೇತ್ರದ ಚುನಾವಣಾ ಪುಟ

ಡಾ.ಉಮೇಶ್ ಜಾಧವ್ ಗೆದ್ದಿದ್ದರು

ಡಾ.ಉಮೇಶ್ ಜಾಧವ್ ಗೆದ್ದಿದ್ದರು

2018ರ ವಿಧಾನಸಭೆ ಚುನಾವಣೆಯಲ್ಲಿ ಡಾ.ಉಮೇಶ್ ಜಾಧವ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿಂಚೋಳಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. 73,905 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಸುನೀಲ್ ವಲ್ಯಾಪುರೆ ಅವರು 54,693 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.

ಮಾ.4ರಂದು ರಾಜೀನಾಮೆ

ಮಾ.4ರಂದು ರಾಜೀನಾಮೆ

2018ರ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದಿದ್ದ ಡಾ.ಉಮೇಶ್ ಜಾಧವ್ ಅವರು 2018ರ ಮಾರ್ಚ್ 4ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಏಪ್ರಿಲ್ 1ರಂದು ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದರು.

ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರ್ಪಡೆ

ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರ್ಪಡೆ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಡಾ.ಉಮೇಶ್ ಜಾಧವ್ ಅವರು ಕಾಂಗ್ರೆಸ್ ಬಿಟ್ಟು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಣಕ್ಕಿಳಿದಿದ್ದಾರೆ.

ಉಪ ಚುನಾವಣೆ ಘೋಷಣೆ

ಉಪ ಚುನಾವಣೆ ಘೋಷಣೆ

ಚುನಾವಣಾ ಆಯೋಗ ಲೋಕಸಭಾ ಚುನಾವಣೆ ಜೊತೆಗೆ ವಿಧಾನಸಭೆ ಉಪ ಚುನಾವಣೆ ನಡೆಸುತ್ತಿದೆ. ಮಂಗಳವಾರ ಉಪ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದೆ. ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಮತದಾನ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+