ರಾಜ್ಯ ರಾಜಕಾರಣ ದಿಕ್ಕು ಬದಲಾಯಿಸಲು ಮತ ನೀಡಿ : ಜಾಧವ್

ಚಿಂಚೋಳಿ, ಮೇ 17: ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಅವಿನಾಶ್ ಜಾಧವ್ ಅವರು ಬಿರು ಬಿಸಿಲನ್ನೂ ಲೆಕ್ಕಿಸದೆ ಬಿರುಸಿನ ಪ್ರಚಾರ ನಡೆಸಿದರು.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಕ್ಷೇತ್ರದ ಅಭಿವೃದ್ದಿ ಮಾಡುವುದು ನನ್ನ ಮೂಲ ಉದ್ದೇಶವಾಗಿದೆ. ಕ್ಷೇತ್ರದ ಮತದಾರರ ಮನೆಯ ಮಗನಾಗಿ ದುಡಿಯಲಿದ್ದೇನೆ. ಈ ಚುನಾವಣೆ ಕೇವಲ ನನ್ನ ಭವಿಷ್ಯ ಅಷ್ಟೇ ಅಲ್ಲ ರಾಜ್ಯ ರಾಜಕಾರಣದ ದಿಕ್ಕು ಬದಲಾಗಲಿದೆ. ಈ ಬದಲಾವಣೆಗೆ ಸಹಕಾರ ನೀಡಿ ಎಂದು ಮನವಿ ಮಾಡಿದರು.

ಮೇಘಾ ಗ್ರಾಮ, ಮೋಘ ತಾಂಡಾ, ನಾರನಲ್ ತಾಂಡಾ, ಸಾಸರ್ಗಾವ್ ಸೇರಿದಂತೆ ಅನೇಕ ಹಳ್ಳಿಗಳಿಗೆ ತೆರಳಿದ ಅವಿನಾಶ್ ಜಾಧವ್ ಬಿರುಸಿನ ಪ್ರಚಾರದಲ್ಲಿ ಪಾಲ್ಗೊಂಡರು. ದೇಶಾದ್ಯಂತ ಮೋದಿ ಅಲೆ ಇದೆ. ಕ್ಷೇತ್ರದ ಅಭಿವೃದ್ದಿಗೆ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಆಗಿದ್ದರಿಂದ ನನ್ನ ತಂದೆ ಉಮೇಶ್ ಜಾಧವ್ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ ಎಂದರು.

Chincholi BJP Candidate Avinash Jadhav Election Campaign

ಚಿಂಚೋಳಿ ಉಪಚುನಾವಣೆಯಲ್ಲಿ ಸಮಾಜ ಕಲ್ಯಾಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆಯವರು ಹಾಗೂ ಮಲ್ಲಿಕಾರ್ಜುನ ಖರ್ಗೆರವರು ಪೊಲೀಸ್ ಪೈಲೆಟ್ ಬಳಸಿಕೊಂಡು ಅಕ್ರಮ ಎಸಗಿದ್ದಾರೆ. ಈ ಕ್ಷೇತ್ರದಲ್ಲಿ ಅಕ್ರಮ, ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+