ವೈದ್ಯಕೀಯ ಕ್ಷೇತ್ರ ಬಿಟ್ಟು ಚುನಾವಣಾ ಅಖಾಡಕ್ಕಿಳಿದ ಡಾ.ಅವಿನಾಶ್ ಜಾಧವ್

ಕಲಬುರಗಿ, ಏಪ್ರಿಲ್ 29 : ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ನಾಮಪತ್ರ ಸಲ್ಲಿಸಿದರು. ಮೇ 19ರಂದು ಉಪ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಡಾ.ಅವಿನಾಶ್ ಜಾಧವ್ ಅಭ್ಯರ್ಥಿ ಎಂದು ಬಿಜೆಪಿ ಭಾನುವಾರ ಅಧಿಕೃತವಾಗಿ ಘೋಷಣೆ ಮಾಡಿತ್ತು. ಇಂದು ಅವಿನಾಶ್ ಜಾಧವ್ ನಾಮಪತ್ರವನ್ನು ಸಲ್ಲಿಕೆ ಮಾಡಿದರು.

ಚಿಂಚೋಳಿ ತಹಶೀಲ್ದಾರ್‌ ಕಚೇರಿಗೆ ಆಗಮಿಸಿದ ಡಾ.ಅವಿನಾಶ್ ಜಾಧವ್ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ, ಬಾಬೂರಾವ್ ಚಿಂಚನಸೂರು, ಬೀದರ್ ಸಂಸದ ಭಗವಂತ ಖೂಬಾ ಮುಂತಾದ ನಾಯಕರು ಉಪಸ್ಥಿತರಿದ್ದರು.

ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದಾಗಿ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಬಿಜೆಪಿ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್‌ಗೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ನಿಂದ ಸುಭಾಷ್ ರಾಥೋಡ್ ಅವರು ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್‌ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ನೀಡಿದೆ...

ದೇವಾಲಯಕ್ಕೆ ಭೇಟಿ

ದೇವಾಲಯಕ್ಕೆ ಭೇಟಿ

ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ಡಾ.ಅವಿನಾಶ್ ಜಾಧವ್ ಅವರು ಪತ್ನಿ ಜೊತೆಗೆ ಶ್ರೀ ರೇವಣಸಿದ್ದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಬಳಿಕ ಚಿಂಚೋಳಿ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಉಪ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಿದರು.

ಯಾರು ಡಾ.ಅವಿನಾಶ್ ಜಾಧವ್?

ಯಾರು ಡಾ.ಅವಿನಾಶ್ ಜಾಧವ್?

ಡಾ.ಅವಿನಾಶ್ ಜಾಧವ್ ಚಿಂಚೋಳಿ ಶಾಸಕರಾಗಿದ್ದ ಡಾ.ಉಮೇಶ್ ಜಾಧವ್ ಪುತ್ರ. 2018ರ ವಿಧಾನಸಭೆ ಚುನಾವಣೆಯಲ್ಲಿ ಡಾ.ಉಮೇಶ್ ಜಾಧವ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿಂಚೋಳಿಯಿಂದ ಕಣಕ್ಕಿಳಿದು 73, 905 ಮತಗಳನ್ನು ಪಡೆದು ಜಯಗಳಿಸಿದ್ದರು.

ಬಿಜೆಪಿ ಸೇರಿದ ಜಾಧವ್

ಬಿಜೆಪಿ ಸೇರಿದ ಜಾಧವ್

2019ರ ಮಾರ್ಚ್‌ನಲ್ಲಿ ಶಾಸಕ ಸ್ಥಾನಕ್ಕೆ, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಡಾ.ಉಮೇಶ್ ಜಾಧವ್ ಅವರು ಬಿಜೆಪಿ ಸೇರಿದರು. 2019ರ ಲೋಕಸಭಾ ಚುನಾವಣೆಗೆ ಅವರು ಗುಲ್ಬರ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಣಕ್ಕಿಳಿದಿದ್ದರು. ಏ.23ರಂದು ಮತದಾನ ಮುಗಿದಿದೆ.

ಮೇ 8ರಂದು ಪರೀಕ್ಷೆ ಇದೆ

ಮೇ 8ರಂದು ಪರೀಕ್ಷೆ ಇದೆ

ಡಾ.ಅವಿನಾಶ್ ಜಾಧವ್ ಅವರು ಎಂಬಿಬಿಎಸ್ ಪೂರ್ಣಗೊಳಿಸಿದ್ದಾರೆ. ಎಂಡಿ ಜನರಲ್ ಮೆಡಿಸಿನ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಾರೆ. ಮೇ 8ರಂದು ಅವರ ಪರೀಕ್ಷೆ ಇದೆ. ಮೇ 19ರಂದು ಚಿಂಚೋಳಿ ಉಪ ಚುನಾವಣೆ ನಡೆಯಲಿದೆ. 'ಡಾ.ಅವಿನಾಶ್ ಜಾಧವ್ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ' ಎಂದು ಡಾ.ಉಮೇಶ್ ಜಾಧವ್ ಹೇಳಿದ್ದಾರೆ.

ಮಾವನ ಮನೆಯಲ್ಲಿ ಒಪ್ಪಿಗೆ ಇಲ್ಲ

ಮಾವನ ಮನೆಯಲ್ಲಿ ಒಪ್ಪಿಗೆ ಇಲ್ಲ

ಡಾ.ಅವಿನಾಶ್ ಜಾಧವ್ ವಿವಾಹವಾಗಿ ಕೇವಲ 6 ತಿಂಗಳು ಕಳೆದಿದೆ. ಮಾನವ ಮನೆಯಲ್ಲಿ ಅಳಿಯ ರಾಜಕೀಯಕ್ಕೆ ಬರುವುದಕ್ಕೆ ಒಪ್ಪಿಗೆ ಇಲ್ಲ. ಆದರೆ, ಕ್ಷೇತ್ರದ ಜನರ ಹಿತಕ್ಕಾಗಿ ಶಿಕ್ಷಣವನ್ನು ಮೊಟಕುಗೊಳಿಸಿ ಉಪ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+