ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಪರಾರಿಯಾಗಿರುವ ರುದ್ರಗೌಡ ಪಾಟೀಲ್‌ಗೆ ಸಿಐಡಿ ನೋಟಿಸ್

|
Google Oneindia Kannada News

ಕಲಬುರಗಿ, ಜನವರಿ 22; ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್‌ಗೆ ನೋಟಿಸ್ ನೀಡಿದೆ. ಜನವರಿ 18ರಂದು ಸಿಐಡಿ ಪೊಲೀಸರು ಬಂಧಿಸಲು ಬಂದಾಗ ಆತ ಪರಾರಿಯಾಗಿದ್ದಾನೆ.

ಕಲಬುರಗಿ ಸಿಐಡಿ ಘಟಕದ ಡಿವೈಎಸ್‌ಪಿ ಪ್ರಕಾಶ್ ರಾಥೋಡ್‌ ಭಾನುವಾರ ರುದ್ರಗೌಡ ಪಾಟೀಲ್‌ಗೆ ನೋಟಿಸ್ ನೀಡಿದ್ದಾರೆ. ಜನವರಿ 23ರಂದು ಕಲಬುರಗಿ ಸಿಐಡಿ ಕಚೇರಿಗೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.

PSI ನೇಮಕಾತಿ ಅಕ್ರಮ ಪ್ರಕರಣ: ಅಮೃತ್ ಪೌಲ್ ಮತ್ತೆ ಪೊಲೀಸ್ ಕಸ್ಟಡಿಗೆPSI ನೇಮಕಾತಿ ಅಕ್ರಮ ಪ್ರಕರಣ: ಅಮೃತ್ ಪೌಲ್ ಮತ್ತೆ ಪೊಲೀಸ್ ಕಸ್ಟಡಿಗೆ

ರುದ್ರಗೌಡ ಪಾಟೀಲ್ ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್ ಪಿನ್. ಜನವರಿ 18ರ ಗುರುವಾರ ರಾತ್ರಿ ಆರೋಪಿಯನ್ನು ಬಂಧಿಸಲು ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ನಿವಾಸಕ್ಕೆ ಸಿಐಡಿ ಪೊಲೀಸರು ತೆರಳಿದ್ದರು.

Rudragowda Patil : ಪಿಎಸ್‌ಐ ಹಗರಣ; ಕಿಂಗ್‌ಪಿನ್ ರುದ್ರಗೌಡ ಪಾಟೀಲ್ ಪರಾರಿ! Rudragowda Patil : ಪಿಎಸ್‌ಐ ಹಗರಣ; ಕಿಂಗ್‌ಪಿನ್ ರುದ್ರಗೌಡ ಪಾಟೀಲ್ ಪರಾರಿ!

CID Issues Notice To Rudragowda Patil To Appear On January 23rd

ಆಗ ಪಿಎಸ್‌ಐ ಆನಂದ್‌ ತಳ್ಳಿ ಆರೋಪಿ ರುದ್ರಗೌಡ ಪಾಟೀಲ್ ಪರಾರಿಯಾಗಿದ್ದಾನೆ. ಭಾನುವಾರವೂ ಆತನ ಪತ್ತೆಯಾಗದ ಹಿನ್ನಲೆಯಲ್ಲಿ ಸಿಐಡಿ ಪೊಲೀಸರು ನೋಟಿಸ್ ನೀಡಿ, ಸೋಮವಾರ ವಿಚಾರಣೆಗೆ ಬರಲು ಸೂಚನೆ ನೀಡಿದ್ದಾರೆ.

ಪಿಎಸ್ಐ ಹಗರಣ: ಇನ್ಸ್‌ಪೆಕ್ಟರ್‌ ಹರೀಶ್‌ಗೆ ಜಾಮೀನು ನೀಡದ ಹೈಕೋರ್ಟ್ ಪಿಎಸ್ಐ ಹಗರಣ: ಇನ್ಸ್‌ಪೆಕ್ಟರ್‌ ಹರೀಶ್‌ಗೆ ಜಾಮೀನು ನೀಡದ ಹೈಕೋರ್ಟ್

ಆರೋಪಿ ರುದ್ರಗೌಡ ಮನೆ ಮೇಲೆ ಗುರುವಾರ ಇಡಿ ಅಧಿಕಾರಿಗಳು ಸಹ ದಾಳಿ ಮಾಡಿದ್ದರು. ತುಮಕೂರು ಠಾಣೆಯಲ್ಲಿ ರುದ್ರಗೌಡ ವಿರುದ್ಧ ದೂರು ದಾಖಲಾಗಿತ್ತು. ಈ ದೂರಿನ ವಿಚಾರಣೆ ನಡೆಸಲು ಪೊಲೀಸರು ಆತನನ್ನು ಬಂಧಿಸಲು ಕಲಬುರಗಿಗೆ ಆಗಮಿಸಿದ್ದರು.

ಈ ಸಮಯದಲ್ಲಿ ಆರೋಪಿ ರುದ್ರಗೌಡ ಪರಾರಿಯಾಗಿದ್ದ. ಈ ಕುರಿತು ಸಿಐಡಿ ಪೊಲೀಸರು ಕಲಬುರಗಿಯ ಅಶೋಕ ನಗರ ಪೊಲೀಸ್ ಠಾಣೆಗೆ ದೂರು ಸಹ ಸಲ್ಲಿಕೆ ಮಾಡಿದ್ದಾರೆ. ಆದರೆ ಇನ್ನೂ ಆತ ಪತ್ತೆಯಾಗಿಲ್ಲ.

ರುದ್ರಗೌಡ ಪಾಟೀಲ್ ಪಿಎಸ್‌ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಬಳಿಕ ಪರಾರಿಯಾಗಿದ್ದ. ಬಳಿಕ ಸಿಐಡಿ ಪೊಲೀರು ಪುಣೆಯಲ್ಲಿ ಆತನನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಆತ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ, ಪದೇ ಪದೇ ವಿಚಾರಣೆಗೆ ಗೈರಾಗುತ್ತಿದ್ದಾನೆ ಎಂಬುದು ಆರೋಪ.

ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಬ್ಲೂಟುಥ್ ಡಿವೈಸ್‌ ನೀಡಿ, ಅವರಿಂದ ಹಣ ಪಡೆದು ಅಕ್ರಮ ಎಸಗಲು ಸಹಕಾರ ನೀಡಿದ ಗಂಭೀರ ಆರೋಪ ರುದ್ರಗೌಡ ಪಾಟೀಲ್ ಮೇಲೆ ಇದೆ. ಈ ಪ್ರಕರಣದಲ್ಲಿ ಅಕ್ರಮ ಹಣದ ವ್ಯವಹಾರ ನಡೆದ ಆರೋಪದ ಹಿನ್ನಲೆಯಲ್ಲಿ ಇಡಿ ಸಹ ಪ್ರಕರಣದ ತನಿಖೆ ಕೈಗೊಂಡಿದೆ.

English summary
CID issues notice to Karnataka PSI recruitment scam prime accused Rudragowda Patil to appear on January 23rd. He escaped form CID police in his house at Kalaburagi on January 19th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X