ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೌಲಭ್ಯಗಳಿಗೆ ಆದ್ಯತೆ: ಸಿಎಂ

|
Google Oneindia Kannada News

ಕಲಬುರಗಿ ಜನವರಿ 4: ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು, ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಲಬುರಗಿಯಲ್ಲಿ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ, ಲೇಖನ, ಅಂಕಣಗಳ ಮೌಲ್ಯ ದೊಡ್ಡದು. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ. ಜೊತೆಗೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3 ಸಾವಿರ ಕೋಟಿ ರೂ.ಕ್ರಿಯಾ ಯೋಜನೆಯನ್ನು ಒಂದು ವರ್ಷದ ಅವಧಿಯೊಳಗೆ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

basavaraj bommai

ಪತ್ರಿಕಾ ರಂಗಕ್ಕೆ ಸಿಎಂ ನೆರವು

ಕಲಬುರಗಿಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ರಂಗ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಖಾಸಗೀಕರಣ, ಉದಾರೀಕರಣ, ಜಾಗತೀಕರಣದ ಮಾರುಕಟ್ಟೆ ಆಧಾರಿತ ವ್ಯವಹಾರದ ನಡುವೆ ಜನಪರ ಆದ್ಯತೆಗಳನ್ನು, ಅಂತಃಕರಣವನ್ನು ಪತ್ರಿಕೆಗಳು ಕಾಯ್ದುಕೊಳ್ಳುವುದು ಬಹಳ ಮುಖ್ಯ. ಸಮಾಜದಲ್ಲಿ ದೊಡ್ಡ ಬದಲಾವಣೆಗಳನ್ನು ತರಲು ಸಾಧ್ಯ. ಪತ್ರಿಕಾರಂಗ ಸದಾ ಜಾಗೃತವಾಗಿದ್ದರೆ, ಸಮಾಜ, ಸರ್ಕಾರಗಳೂ ಜಾಗೃತವಾಗಿರುತ್ತವೆ. ಪತ್ರಿಕೆಗಳಿಗೆ ಅಗತ್ಯವಿರುವ ಜಾಹೀರಾತು, ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೌಕರ್ಯಗಳನ್ನು ನೀಡಲು ಬರುವ ಬಜೆಟ್‌ನಲ್ಲಿ ಕ್ರಮವಹಿಸಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ. ತಿಂಗಳಾಂತ್ಯದೊಳಗೆ ಈ ಭಾಗದ ಶಾಸಕರ ಸಭೆ ನಡೆಸಿ ಅಂತಿಮಗೊಳಿಸಲಾಗುವುದು. ಅನುದಾನ ಒದಗಿಸಿ ಒಂದೇ ವರ್ಷದಲ್ಲಿ ಯೋಜನೆಗಳ ಅನುಷ್ಠಾನ ಮಾಡಲಾಗುವುದು‌ ಎಂದರು.

ಪತ್ರಕರ್ತರಿಗೆ ಸಮಾಜದಲ್ಲಿ ಮಹತ್ವದ ಸ್ಥಾನ

ಕಲ್ಯಾಣದ ಪುಣ್ಯಭೂಮಿ ಕಲಬುರಗಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಮ್ಮೇಳನ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಪತ್ರಕರ್ತರಿಗೆ, ಪತ್ರಿಕೋದ್ಯಮಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ. ಸ್ವಾತಂತ್ರ್ಯ ಚಳವಳಿಗೆ ಕೈಬರಹದ ಹಾಗೂ ಮೊಳೆ ಜೋಡಣೆ ಮುದ್ರಣ ಆಧಾರಿತ ಹಲವಾರು ಪತ್ರಿಕೆಗಳು ಭೂಗತವಾಗಿ ಕಾರ್ಯ ಮಾಡಿ, ದೇಶಭಕ್ತಿ, ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿವೆ. ಪಾಶ್ಚಿಮಾತ್ಯ ಪತ್ರಿಕೋದ್ಯಮ ಪ್ರಭಾವದ ನಡುವೆಯೂ ವಸಾಹತೋತ್ತರ ಕಾಲದಲ್ಲಿ ಭಾರತೀಯ ಪತ್ರಿಕೆಗಳು ಸ್ವಂತಿಕೆ ರೂಢಿಸಿಕೊಂಡಿವೆ.ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಪತ್ರಿಕೆಗಳ ಮೇಲೆ ದೊಡ್ಡ ಪ್ರಹಾರ ನಡೆಯಿತು.ಪತ್ರಕರ್ತರು ಅದನ್ನು ಗಟ್ಟಿಯಾಗಿ ಎದುರಿಸಿದರು. ಪತ್ರಿಕೋದ್ಯಮಿ ಸದಾ ಜಾಗೃತವಾಗಿ ಕೆಲಸ ಮಾಡಿದರೆ ಸರ್ಕಾರ, ಸಮಾಜ ಎಚ್ಚರವಾಗಿರುತ್ತದೆ ಎಂದರು.

basavaraj bommai

ಲಾಕ್‌ಡೌನ್ ಸಂದರ್ಭದಲ್ಲಿ ಪತ್ರಕರ್ತರ ಕಾರ್ಯ ಶ್ಲಾಘನೀಯ

ಕೋವಿಡ್ ಸಂದರ್ಭದಲ್ಲಿ ಆರೋಗ್ಯ, ಅಂಗನವಾಡಿ, ಆಶಾ, ಪೊಲೀಸ್, ಪೌರಕಾರ್ಮಿಕರೊಂದಿಗೆ ಪತ್ರಕರ್ತರು ಕೂಡ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿ ಕಾರ್ಯನಿರ್ವಹಿಸಿದ್ದಾರೆ. ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ, ಬಹುತೇಕ ಕುಟುಂಬದವರಿಗೆ ಈಗಾಗಲೇ ತಲಾ 5 ಲಕ್ಷ ರೂ.ಪರಿಹಾರ ನೀಡಲಾಗಿದೆ. ಇನ್ನೂ ಬಾಕಿ ಇರುವ ವ್ಯಕ್ತಿಗಳ ಕುಟುಂಬಕ್ಕೂ ಒದಗಿಸಲಾಗುವುದು. ಪತ್ರಕರ್ತರು-ರಾಜಕಾರಣಿಗಳು ಪರಸ್ಪರ ಅವಿನಾಭಾವ ಸಂಬಂಧ ಹೊಂದಿರುತ್ತಾರೆ. ಸಮಾಜದ ಒಳಿತಿಗೆ ಅದು ಬಳಕೆಯಾಗಬೇಕು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಕುರಿತು ಈ ಸಮ್ಮೇಳನದಲ್ಲಿ ಚರ್ಚೆಗಳಾಗಲಿ ಅವುಗಳ ನಿರ್ಣಯಗಳ ಕರಡನ್ನು ಸರಕಾರಕ್ಕೆ ಕಳುಹಿಸಿಕೊಡಿ ಅವುಗಳ ಜಾರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

Recommended Video

ರೋಹಿತ್ ಶರ್ಮಾಗೆ ಇದು ಕೊನೆ ಅವಕಾಶ! | Oneindia Kannada

ಪತ್ರಕರ್ತರಿಗೂ ರಾಜಕಾರಣಿಗಳಿಗೆ ಬಿಡಿಸಲಾಗದ ನಂಟಿದೆ. ಒಳ್ಳೆಯ ಉದ್ದೇಶಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಿದರೆ ಜನಕಲ್ಯಾಣ ಸಾಧ್ಯ ಎಂದರು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್‌ಸಿಂಗ್, ಸಂಸದ ಡಾ.ಉಮೇಶ ಜಾಧವ ಭಾಗಿಯಾಗಿದ್ದರು.

English summary
Chief Minister Basavaraja Bommai said the health card and buspass facilities of rural journalists will be given priority in the budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X