• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಂಪುಟ ವಿಸ್ತರಣೆ: ಸಚಿವ ಬಿ.ಸಿ. ಪಾಟೀಲ್ ಮಹತ್ವದ ಹೇಳಿಕೆ

|

ಕಲಬುರಗಿ, ಸೆ. 16: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನುಡಿದಂತೆ ನಡೆಯುತ್ತಾರೆ. ನಂಬಿ ಬಂದ ಯಾರನ್ನೂ ಅವರು ಕೈಬಿಟ್ಟಿಲ್ಲ. ಹದಿನೇಳು ಜನರಿಗೆ ಯಡಿಯೂರಪ್ಪ ನ್ಯಾಯ ಒದಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಂಟಿಬಿ ನಾಗರಾಜ್, ಆರ್. ಶಂಕರ್ ಅವರಿಗೂ ಸಚಿವ ಸ್ಥಾನ ಕೊಡುವ ಮೂಲಕ ನ್ಯಾಯ ಒದಗಿಸುತ್ತಾರೆಂಬ ವಿಶ್ವಾಸವಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ. ಡ್ರಗ್ಸ್ ಮಾಫಿಯಾ ಕುರಿತು ಮಾತನಾಡಿದ ಅವರು, ಚಿತ್ರರಂಗ ಮೊದಲು ಈ ಹೀಗೆ ಇರಲಿಲ್ಲ. ಆದರೆ ಇತ್ತೀಚೆಗೆ ಯುವಜನಾಂಗ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ. ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗುವ ಮೂಲಕ ತಮ್ಮ ಆರೋಗ್ಯದ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಸಹ ಹಾಳು ಮಾಡುತ್ತಿದ್ದಾರೆ. ಡ್ರಗ್ ವ್ಯಸನಿ ಕಲಾವಿದರನ್ನು ಅನುಕರಿಸಿದರೆ ದೇಶಕ್ಕೆ ಮಾರಕವಾಗಲಿದೆ. ಡ್ರಗ್ಸ್ ವ್ಯಸನ ಚಿತ್ರರಂಗಕ್ಕೆ ಪೂರಕವಲ್ಲ. ಚಿತ್ರರಂಗದಲ್ಲೀಗ ನಮಸ್ಕಾರ ಸಂಸ್ಕೃತಿ ಬಿಟ್ಟುಹೋಗಿ ಹಾಯ್, ಬಾಯ್ ಸಂಸ್ಕೃತಿ ಬಂದಿದೆ. ಆದರೆ ತಮ್ಮ ಅವಧಿಯಲ್ಲಿ ಕ್ಯಾಮೆರಾ ಮತ್ತು ಕ್ಯಾಮೆರಾಮೆನ್ ಗಳಿಗೂ ನಮಸ್ಕಾರ ಮಾಡುತ್ತಿದ್ದೆವು. ಹಿಂದಿನಂತಹ ಸಂಸ್ಕೃತಿ ಈಗ ಚಿತ್ರರಂಗದಲ್ಲಿ ಕಾಣಲಾಗುತ್ತಿಲ್ಲ. ಎಂದಿಗೂ ನಮ್ಮ ಸಂಸ್ಕೃತಿ ಪಾವಿತ್ರ್ಯತೆಯನ್ನು ಕೈಬಿಡಬಾರದು ಎಂದರು.

ಕ್ಯಾಸಿನೋಗೆ ಹೊರದೇಶದಲ್ಲಿ ಅನುಮತಿ ನೀಡಲಾಗಿದೆ. ಗೋವಾದಲ್ಲಿಯೂ ಇದೆ. ಕ್ಯಾಸಿನೋಗೆ ಹೋದ ಮಾತ್ರಕ್ಕೆ ಡ್ರಗ್ಸ್ ಸೇವಿಸುತ್ತಾರೆ ಎಂದರ್ಥವಲ್ಲ. ಜಮೀರ್ ಡ್ರಗ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದಾರೆಯೋ ಇಲ್ಲವೋ ಎಂಬುದು ತನಿಖೆಯಿಂದ ತಿಳಿಯಲಿದೆ. ಜಮೀರ್ ಆಗಾಗ ಪ್ರಚಾರಕ್ಕಾಗಿ ಹೇಳಿಕೆಗಳನ್ನು ಕೊಡುವುದು ಸಹಜ. ಮೊದಲು ಸಿಎಂ ಯಡಿಯೂರಪ್ಪ ಅವರ ಮನೆಗೆ ಕಾವಲುಗಾರನಾಗುತ್ತೇನೆ ಎಂದಿದ್ದರು. ಇದೀಗ ಆರೋಪ ಸಾಬೀತಾದರೆ ತಮ್ಮ ಆಸ್ತಿಯನ್ನು ಸರ್ಕಾರಕ್ಕೆ ಬರೆದುಕೊಡುವುದಾಗಿ ಹೇಳಿದ್ದಾರಷ್ಟೆ ಎಂದು ಬಿ.ಸಿ. ಪಾಟೀಲ್ ಹೇಳಿದರು.

English summary
Chief minister BS Yediyurappa will give ministership to MTB Nagraj and R Shankar also says Agriculture minister B C Patil in Kalaburgi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X