• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸೆ.17ಕ್ಕೆ ಕಲ್ಯಾಣ ಕರ್ನಾಟಕ ಉತ್ಸವ; 1300 ಕೋಟಿ ರೂ. ಕಾಮಗಾರಿಗಳಿಗೆ ಸಿಎಂ ಚಾಲನೆ

By ಕಲಬುರಗಿ ಪ್ರತಿನಿಧಿ
|

ಕಲಬುರಗಿ, ಸೆಪ್ಟೆಂಬರ್ 16: ಸೆ.17ರಂದು ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜರುಗುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾಗವಹಿಸಲಿದ್ದು, ಕಲಬುರಗಿ ಜಿಲ್ಲೆಯ ಸುಮಾರು 1300 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ತಿಳಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಲಬುರಗಿ ನಗರದಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರು ಸರಬರಾಜು ಪೂರೈಕೆಯ 600 ಕೋಟಿ ರೂ. ಮೊತ್ತದ ಕಾಮಗಾರಿಗೆ ಸೆ.17ರಂದು ಚಾಲನೆ ನೀಡಲಾಗುತ್ತಿದೆ. ಡಿ.ಎಚ್.ಒ. ಕಚೇರಿ ಆವರಣದಲ್ಲಿ 150 ಕೋಟಿ ರೂ. ವೆಚ್ಚದ ಜಯದೇವ ಹೃದ್ರೋಗ ಸಂಸ್ಥೆಯ ನೂತನ ಕಟ್ಟಡಕ್ಕೆ ಅಡಿಗಲ್ಲು ಸೇರಿದಂತೆ ವಿವಿಧ ಇಲಾಖೆಯ ಒಟ್ಟಾರೆ 1300 ಕೋಟಿ ರೂ. ಬೃಹತ್ ಮೊತ್ತದ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ ಸಿಗಲಿದೆ ಎಂದರು.

 ಅಭಿವೃದ್ಧಿ ಮಂಡಳಿಗೆ 1500 ಕೋಟಿ ರೂ. ಅನುದಾನ

ಅಭಿವೃದ್ಧಿ ಮಂಡಳಿಗೆ 1500 ಕೋಟಿ ರೂ. ಅನುದಾನ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2020-21ನೇ ಸಾಲಿಗೆ ಘೋಷಿಸಿದ 1500 ಕೋಟಿ ರೂ. ಅನುದಾನದ ಪೈಕಿ 1100 ಕೋಟಿ ರೂ. ಮೊತ್ತಕ್ಕೆ ಕ್ರಿಯಾ ಯೋಜನೆ ರೂಪಿಸಲು ಸರ್ಕಾರದಿಂದ ನಿರ್ದೇಶನ ನೀಡಿ ಪ್ರಸ್ತುತ 282 ಕೊಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಸರ್ಕಾರದ ನಿರ್ದೇಶನದಂತೆ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುವುದು. ನಂತರ ಉಳಿದ 400 ಕೋಟಿ ರೂ. ಅನುದಾನ ಸಹ ಸರ್ಕಾರದಿಂದ ಬಿಡುಗಡೆಗೂ ಕ್ರಮ ವಹಿಸಲಾಗುವುದು ಎಂದರು.

ಆರು ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ; ಕನ್ನಡನಾಡಿಗೆ ಶ್ರಮಿಸುತ್ತೇನೆಂದ ಸಿಎಂ

 25 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಉಪಕರಣ ಪೂರೈಕೆ

25 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಉಪಕರಣ ಪೂರೈಕೆ

ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಕುರಿತಂತೆ ಮಾಹಿತಿ ನೀಡಿದ ಅವರು, "ಅಧಿವೇಶನದ ನಂತರ ಈ ಭಾಗದ ಶಾಸಕರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅವರ ಗಮನ ಸೆಳೆಯಲಾಗುವುದು" ಎಂದರು. ಇದೇ ಸಂದರ್ಭ, "ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯಿಂದ ಪ್ರದೇಶದ 6 ಜಿಲ್ಲೆಗಳಿಗೆ ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ವಿವಿಧ ವೈದ್ಯಕೀಯ ಉಪಕರಣಗಳನ್ನು ಪೂರೈಸಲಾಗಿದೆ" ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರು ಮಾಹಿತಿ ನೀಡಿದರು.

 ವಿದ್ಯಾರ್ಥಿಗಳಿಗೆ ವಸತಿ ನಿಲಯ ಸ್ಥಾಪನೆ

ವಿದ್ಯಾರ್ಥಿಗಳಿಗೆ ವಸತಿ ನಿಲಯ ಸ್ಥಾಪನೆ

ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಗೆಂದು ಬೆಂಗಳೂರಿಗೆ ತೆರಳುವ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅಲ್ಲಿ ವಾಸಿಸಲು ಅನುಕೂಲವಾಗುವಂತೆ 30 ಗುಂಟೆ ಪ್ರದೇಶದಲ್ಲಿ ವಸತಿ ನಿಲಯ ಸ್ಥಾಪನೆಗೆ ಬಿಡಿಎ ನಿವೇಶನ ಹಂಚಿಕೆ ಮಾಡಿದ್ದು, ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಹಂಚಿಕೆ ಪತ್ರವನ್ನು ಮಂಡಳಿಗೆ ಹಸ್ತಾಂತರಿಸಲಿದ್ದಾರೆ ಎಂದರು.

ಹೈದರಾಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕ

 ಕ್ರೀಡೆ ಮತ್ತು ಸಾಂಸ್ಕೃತಿಕ ಸಮುಚ್ಛಯಕ್ಕೆ ಡಿ.ಪಿ.ಆರ್. ತಯಾರಿಗೆ ಸೂಚನೆ

ಕ್ರೀಡೆ ಮತ್ತು ಸಾಂಸ್ಕೃತಿಕ ಸಮುಚ್ಛಯಕ್ಕೆ ಡಿ.ಪಿ.ಆರ್. ತಯಾರಿಗೆ ಸೂಚನೆ

ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾ ಅಭ್ಯರ್ಥಿಗಳಿಗೆ ಉತ್ತೇಜನ ನೀಡಲು ಮಂಡಳಿ ಮುಂದಾಗಿದೆ. ಕ್ರೀಡಾ ಚಟುವಟಿಕೆಗೆ ಮತ್ತು ಪ್ರತಿ ವರ್ಷ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಗೆ ಕಲಬುರಗಿ ನಗರದ ಹೊರವಲಯದ 60 ಎಕರೆ ಪ್ರದೇಶದಲ್ಲಿ ಮಂಡಳಿಯಿಂದ ಕ್ರೀಡೆ ಮತ್ತು ಸಾಂಸ್ಕೃತಿಕ ಸಮುಚ್ಛಯ ನಿರ್ಮಾಣಕ್ಕೆ ಚಿಂತನೆ ನಡೆದಿದ್ದು, ಈ ಕುರಿತಂತೆ ಡಿ.ಪಿ.ಆರ್. ತಯಾರಿಕೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ ಕಲಬುರಗಿಯಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ತರಕಾರಿ ಮಾರುಕಟ್ಟೆ ಸ್ಥಾಪನೆಗೂ ಮಂಡಳಿ ಮುಂದಾಗಿದೆ ಎಂದರು.

English summary
CM BS Yediyurappa will be participating in the Kalyana Karnataka Utsav on September 17 and We will be launching various development works
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X