• search
 • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯ ಸರ್ಕಾರದ ಮುಂದೆ ಸಂಪುಟ ವಿಸ್ತರಣೆ ಪ್ರಸ್ತಾಪವೇ ಇಲ್ಲ: ಯಡಿಯೂರಪ್ಪ

|
Google Oneindia Kannada News

ಕಲಬುರಗಿ, ಜುಲೈ 10: ರಾಜ್ಯ ಸರ್ಕಾರದ ಮುಂದೆ ಸಂಪುಟ ವಿಸ್ತರಣೆಯ ಯಾವುದೇ ಪ್ರಸ್ತಾಪವಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಯಾವುದೇ ಚಿಂತನೆಗಳೂ ಇಲ್ಲ ಎಂದಿದ್ದಾರೆ.

ಜು.16ರಂದು ಕಾರವಾರಕ್ಕೆ ಸಿಎಂ ಯಡಿಯೂರಪ್ಪ ಆಗಮನಜು.16ರಂದು ಕಾರವಾರಕ್ಕೆ ಸಿಎಂ ಯಡಿಯೂರಪ್ಪ ಆಗಮನ

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗುವ ಸಾಧ್ಯತೆಗಳಿದ್ದು, ಮೂರನೇ ಅಲೆ ತಡೆಯನ್ನು ಪರಿಣಾಮಕಾರಿಯಾಗಿ ತಡೆಯಲು ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಕೇಂದ್ರ ಸಂಪುಟದಲ್ಲಿ ರಾಜ್ಯದ ನಾಲ್ವರು ನಾಯಕರಿಗೆ ಸ್ಥಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಕೆಆರ್‌ಎಸ್ ಅಣೆಕಟ್ಟು ಬಿರುಕು ವಿಚಾರ ಕುರಿತು ಮಂಡ್ಯ ಸಂಸದೆ ಸುಮಲತಾ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ನಡುವೆ ಮುಂದುವರೆದಿರುವ ವಾಕ್ಸಮರ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ.

ಕೆಲವು ದಿನಗಳ ಹಿಂದೆ ರಾಜ್ಯದ ನಾಯಕತ್ವ ಬದಲಾವಣೆ ಕುರಿತು ಎಲ್ಲೆಡೆ ಸುದ್ದಿ ಹರಿದಾಡುತ್ತಿತ್ತು, ಈಗ ಕೆಲವು ದಿನಗಳಿಂದ ಆ ವಿಚಾರ ಸ್ವಲ್ಪ ತಣ್ಣಗಾಗಿದೆ.

   ಮಾತು ಪಕ್ಷವನ್ನೇ ಕೆಡಿಸುತ್ತೆ ಸುಮ್ಮನಿರಿ ಎಂದು ಸೂಚನೆ ಕೊಟ್ಟ HD Devegowda | Oneindia Kannada
   ಬಿ.ಎಸ್. ಯಡಿಯೂರಪ್ಪ
   Know all about
   ಬಿ.ಎಸ್. ಯಡಿಯೂರಪ್ಪ
   English summary
   Chief Minister BS Yediyurappa Says No Proposal Before The Govt To Either Expand Of Reshuffle The Cabinet.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X