ಕಲಬುರಗಿ ಜನರ ಕನಸು ನನಸು; ಒಂದು ತಿಂಗಳಿನಲ್ಲಿ ವಿಮಾನ ಹಾರಾಟ

ಕಲಬುರಗಿ, ಸೆಪ್ಟೆಂಬರ್ 18 : ಕಲಬುರಗಿಯ ಜನರಿಗೆ ಸಿಹಿ ಸುದ್ದಿಯನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕೊಟ್ಟಿದ್ದಾರೆ. ದಶಕಗಳ ಕನಸು ನನಸಾಗುವ ಸಮಯ ಬಂದಿದ್ದು, ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಸಂಚಾರ ಆರಂಭವಾಗಲಿದೆ.

"ರಾಜ್ಯ ಸರ್ಕಾರವೇ 175.57 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕಲಬುರಗಿ ವಿಮಾನ ನಿಲ್ದಾಣವು ವಾಣಿಜ್ಯ ಹಾರಾಟಕ್ಕೆ ಸಜ್ಜಾಗಿದ್ದು, ಇದರ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ" ಎಂದು ಯಡಿಯೂರಪ್ಪ ಹೇಳಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಪ್ರಾಯೋಗಿಕ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ವಿಮಾನ ನಿಲ್ದಾಣ ಮತ್ತು ನಿಲ್ದಾಣಕ್ಕೆ ಸೇರಿದ 742.23 ಎಕರೆ ಜಾಗವನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರ ಮಾಡಲಾಗಿದೆ.

ಕರ್ನಾಟಕ ಸರ್ಕಾರದ ಸಂಪೂರ್ಣ ವೆಚ್ಚದಲ್ಲಿ ಕಲಬುರಗಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. 3725 ಮೀಟರ್‌ ರನ್‌ವೇಯನ್ನು ವಿಮಾನ ನಿಲ್ದಾಣಹೊಂದಿದೆ. ಇನ್ನೊಂದು ತಿಂಗಳಿನಲ್ಲಿ ನಿಲ್ದಾಣ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗಲಿದೆ.

ಯಡಿಯೂರಪ್ಪ ಹೇಳಿದ್ದೇನು?

ಯಡಿಯೂರಪ್ಪ ಹೇಳಿದ್ದೇನು?

"ವಿಮಾನದಲ್ಲಿ ಹಾರಾಡಬೇಕೆಂಬ ಇಲ್ಲಿನ ಜನರ ದಶಕದ ಕನಸು ಈಡೇರಲಿದೆ. ವಿಮಾನಯಾನ ಸೇವೆ ಆರಂಭದಿಂದ ಕೈಗಾರಿಕೋದ್ಯಮಿಗಳು ಇಲ್ಲಿ ಹೂಡಿಕೆ ಮಾಡಲಿದ್ದು, ದುಡಿಯುವ ಕೈಗಳಿಗೆ ಕೆಲಸ ಸಿಗಲಿದೆ. ಆ ಮೂಲಕ ಇಲ್ಲಿ ನಿರುದ್ಯೋಗ ನಿವಾರಣೆಯಾಗಿ ಜನರ ಕಲ್ಯಾಣವಾಗಲಿದೆ" ಎಂದು ಯಡಿಯೂರಪ್ಪ ಹೇಳಿದರು.

ಪ್ರಾಯೋಗಿಕ ಸಂಚಾರ ಯಶಸ್ವಿ

ಪ್ರಾಯೋಗಿಕ ಸಂಚಾರ ಯಶಸ್ವಿ

2018ರ ಆಗಸ್ಟ್‌ನಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದ್ದು ಯಶಸ್ವಿಯಾಗಿದೆ. ಹೈದರಾಬಾದ್‌ನಿಂದ ಆಗಮಿಸಿದ್ದ ವಿಮಾನಗಳನ್ನು ಯಶಸ್ವಿಯಾಗಿ ಲ್ಯಾಂಡ್ ಮಾಡಲಾಗಿತ್ತು. ಆದರೆ, ಒಂದು ವರ್ಷ ಕಳೆದರೂ ವಾಣಿಜ್ಯ ಸಂಚಾರ ಆರಂಭವಾಗಿಲ್ಲ.

ಎಲ್ಲಿದೆ ವಿಮಾನ ನಿಲ್ದಾಣ?

ಎಲ್ಲಿದೆ ವಿಮಾನ ನಿಲ್ದಾಣ?

ಕಲಬುರಗಿ ಸೇಡಂ ರಸ್ತೆಯಲ್ಲಿ 175.57 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. 3725 ಮೀಟರ್‌ ರನ್‌ವೇಯನ್ನು ವಿಮಾನ ನಿಲ್ದಾಣಹೊಂದಿದ್ದು, ದೊಡ್ಡ ವಿಮಾನಗಳನ್ನು ಸಹ ಲ್ಯಾಂಡ್ ಮಾಡಲು ಅವಕಾಶವಿದೆ.

ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರ

ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರ

ಕಲಬುರಗಿ ವಿಮಾನ ನಿಲ್ದಾಣವನ್ನು ಒಟ್ಟು 742.23 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗಿದೆ. ಇಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಚಟುವಟಿಕೆ ನಿರಂತರವಾಗಿ ನಡೆಯಲು ಅನುಕೂಲವಾಗುವಂತೆ ವಿಮಾನ ಹಾರಾಟ ನಡೆಸುವ ಕುರಿತು ತರಬೇತಿ ನೀಡಲು ಶಾಲೆಯನ್ನು ಸ್ಥಾಪನೆ ಮಾಡುವ ಪ್ರಸ್ತಾವನೆಯೂ ಇದೆ. ವಿಮಾನ ನಿಲ್ದಾಣವನ್ನು ಈಗಾಗಲೇ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+