• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ನಾಯಕನ ಪುತ್ರನಿಂದ ಪ್ರಾಂಶುಪಾಲರ ಮೇಲೆ ಹಲ್ಲೆ

|

ಕಲಬುರಗಿ, ನವೆಂಬರ್ 7: ಕಾಂಗ್ರೆಸ್ ನಾಯಕನ ಪುತ್ರನೊಬ್ಬ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನುವ ವಿಷಯ ಪ್ರಾಂಶುಪಾಲರು ನೀಡಿರುವ ದೂರಿನ ಮೂಲಕ ಬೆಳಕಿಗೆ ಬಂದಿದೆ.

ಕಲಬುರಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವಯ್ಯ ಗುತ್ತೇದಾರ್ ಅವರ ನಗ ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯ ರಾಜೇಶ್ ಖಾಸಗಿ ಕಾಲೇಜಿನ ಪ್ರಾಂಶುಪಾಲರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ.

ಉಡುಪಿಯಲ್ಲಿ ಕಾಂಗ್ರೆಸ್‌ ಮುಖಂಡನ ಗೂಂಡಾಗಿರಿ, ಯುವಕರಿಬ್ಬರ ಮೇಲೆ ಹಲ್ಲೆ

ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಸ್ವತಃ ಪ್ರಾಂಶುಪಾಲರೇ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್​ಐಆರ್​​ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪ್ರಾಂಶುಪಾಲ ಮಹೇಶ್​ ರಾಥೋಡ್​ ಆರೋಪಿಸಿದ್ದಾರೆ.

ನ.5ರಂದು ಗಣೇಶ್ ನಗರದಲ್ಲಿ ತನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದರ ಜತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪ್ರಾಂಶುಪಾಲರು ದೂರು ನೀಡಿದ್ದಾರೆ. ರಾಜೇಶ್ ಮನೆಗೆ ತೆರಳುವಾಗ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್​​ ತೆಗೆಯುವಂತೆ ಕಾಲೇಜು ಹುಡುಗರಿಗೆ ಸೂಚಿಸಿದ್ದಾರೆ. ಹಾರ್ನ್ ಮಾಡಿದ ತಕ್ಷಣ ಕಾರು ತೆಗೆದಿಲ್ಲ ಎಂದು ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಲು ಆರಂಭಿಸಿದ್ದಾರೆ.

ಕೆ.ಆರ್‌.ಪುರಂ ಕಾಂಗ್ರೆಸ್‌ ಮುಖಂಡನ ಗೂಂಡಾಗಿರಿ

ಕಾಲೇಜು ಹೊರಗೆ ನಡೆಯುತ್ತಿರುವ ಗಲಾಟೆ ಕಂಡು ಹೊರಗೆ ಬಂದು ವಿಚಾರಿಸಿದಾಗ ಅವಾಚ್ಯ ಶಬ್ದಗಳನ್ನು ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಪ್ರಾಂಶುಪಾಲರು ದೂರಿನಲ್ಲಿ ತಿಳಿಸಿದ್ದಾರೆ. ಆದರೂ ಘಟನೆಗೆ ಅವರ ವಯಕ್ತಿಕ ದ್ವೇಷ ಕಾರಣವೇ ಅಥವಾ ಇನ್ಯಾವುದೇ ಬಲವಾದ ಕಾರಣಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

English summary
Zp member Rajesh Guttedar, who is also son of district Congress president Jagadevaiah Guttedar has assaulted on a principal named Mahesh Rathod for a silly reason.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X