• search
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಈಶಾನ್ಯ ಪಧವೀಧದರ ಕ್ಷೇತ್ರ 30 ವರ್ಷಗಳ ಬಳಿಕ 'ಕೈ' ವಶ

By Gururaj
|

ಕಲಬುರಗಿ, ಜೂನ್ 13 : ಶಿಕ್ಷಕ ಮತ್ತು ಪಧವೀಧರ ಕ್ಷೇತ್ರದಿಂದ ವಿಧಾನಪರಿಷತ್‌ ಸದಸ್ಯರ ಆಯ್ಕೆಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. 30 ವರ್ಷಗಳ ಬಳಿಕ ಈಶಾನ್ಯ ಪಧವೀಧದರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದಾರೆ.

ಈಶಾನ್ಯ ಪಧವೀಧದರ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿತ್ತು. 30 ವರ್ಷಗಳಿಂದ ಬಿಜೆಪಿ ನಿರಾಯಸವಾಗಿ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಡಾ.ಚಂದ್ರಶೇಖರ ಪಾಟೀಲ ಅವರು ಗೆಲುವು ಸಾಧಿಸುವ ಮೂಲಕ ಬಿಜೆಪಿಯಿಂದ ಕ್ಷೇತ್ರವನ್ನು ಕಸಿದುಕೊಂಡಿದ್ದಾರೆ.

ಪರಿಷತ್ ಚುನಾವಣೆ: ಕಾಂಗ್ರೆಸ್ 1, ಜೆಡಿಎಸ್ 2, ಬಿಜೆಪಿ 3 ಸ್ಥಾನಗಳಲ್ಲಿ ಗೆಲುವು

ಚುನಾವಣೆಯಲ್ಲಿ ಕಾಂಗ್ರೆಸ್‌ನ ಡಾ.ಚಂದ್ರಶೇಖರ ಪಾಟೀಲ 18,768 ಮತಗಳನ್ನು ಪಡೆದು ಜಯಗಳಿಸಿದ್ದಾರೆ., ಬಿಜೆಪಿಯ ಕೆ.ಬಿ.ಶ್ರೀನಿವಾಸ್ 18,447 ಮತ ಪಡೆದು, 2ನೇ ಸ್ಥಾನಗಳಿಸಿದ್ದಾರೆ. ಜೆಡಿಎಸ್‌ನ ಪ್ರತಾಪ್ ರೆಡ್ಡಿ ಅವರು 13,311 ಮತಗಳನ್ನು ಪಡೆದು 3ನೇ ಸ್ಥಾನ ಪಡೆದಿದ್ದಾರೆ.

Congress bags North-East Graduates constituency in council election

ಹೈದರಾಬಾದ್-ಕರ್ನಾಟಕ ಭಾಗದ 6 ಜಿಲ್ಲೆಗಳು ಈಶಾನ್ಯ ಪಧವೀಧದರ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತವೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತವೆ. ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರಗಳು ಕಾಂಗ್ರೆಸ್‌ ಪ್ರಾಬಲ್ಯಕ್ಕೆ ಒಳಪಟ್ಟಿವೆ. ಆದರೆ, ಪರಿಷತ್ ಚುನಾವಣೆಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿತ್ತು.

ಈ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿತ್ತು. ಹಾಲಿ ಸದಸ್ಯ ಅಮರನಾಥ ಪಾಟೀಲ ಅವರಿಗೆ ಟಿಕೆಟ್ ನೀಡದೇ ಕೆ.ಬಿ.ಶ್ರೀನಿವಾಸ್ ಅವರನ್ನು ಕಣಕ್ಕಿಳಿಸಲಾಗಿತ್ತು. 321 ಮತಗಳ ಅಂತರದಿಂದ ಅವರು ಸೋಲು ಕಂಡಿದ್ದಾರೆ.

ನೈಋತ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಪಾರುಪತ್ಯ ಅಂತ್ಯ

ಡಾ.ಚಂದ್ರಶೇಖರ ಪಾಟೀಲ ಅವರು ಬೀದರ್ ಜಿಲ್ಲೆಯ ಹುಮನಾಬಾದ್‌ನವರು. ವೃತ್ತಿಯಿಂದ ವೈದ್ಯರಾಗಿರುವ ಡಾ.ಚಂದ್ರಶೇಖರ ಪಾಟೀಲ ಅವರು ಈ ಬಾರಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರವನ್ನು 'ಕೈ' ವಶ ಮಾಡಿಕೊಂಡಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ಇನ್ನಷ್ಟು ಕಲಬುರಗಿ ಸುದ್ದಿಗಳುView All

English summary
Congress registered the victory in the North-East Graduates constituency in Karnataka Legislative Council elections 2018. Party candidate Chandrashekhar B.Patil ended the 30-year dominance of Bharatiya Janata Party (BJP) in constituency.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more