Get Updates
Get notified of breaking news, exclusive insights, and must-see stories!

Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ

ಕಲಬುರಗಿ, ಏಪ್ರಿಲ್. 24: ಲೋಕಸಭಾ ಚುನಾವಣೆಗೆ ರಾಜ್ಯ ಸಿದ್ಧವಾಗಿದೆ. ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26 ಮತ್ತು ಮೇ 7 ರಂದು ಮತದಾನ ಮಾಡಲಿದೆ. ಮೊದಲ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆಬೀಳಲಿದೆ. ಇದರ ಜೊತೆಗೆ ಸೋಲು ಗೆಲುವು, ವಿಶ್ಲೇಷಣೆ ಚೆನ್ನಾಗಿಯೇ ನಡೆಯುತ್ತಿದೆ.

ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಾಕ್ ನೀಡಿದ್ದ ತವರು ಕ್ಷೇತ್ರವನ್ನು ಈ ಬಾರಿ ಮತ್ತೆ ಹಿಂಪಡೆಯುವ ಕಠಿಣ ಪ್ರಯತ್ನದಲ್ಲಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ. ಆದರೆ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತ ಈ ಎಸ್‌ಸಿ ಮೀಸಲು ಕ್ಷೇತ್ರವನ್ನು ಗೆಲ್ಲಲು ಅವರು ತಮ್ಮ ಎಲ್ಲಾ ಶಕ್ತಿಯನ್ನು ಮಿತಿ ಮೀರಿ ಹಾಕುತ್ತಿದ್ದಾರೆ.

Congress chief Mallikarjun Kharge prestige at stake in son-in-law Radhakrishna Doddamani s fight

ಕಲಬುರಗಿ ವಾಪಸ್ ಪಡೆಯಲು ಪಣತೊಟ್ಟ 'ಸೋಲಿಲ್ಲದ ಸರದಾರ'!

2019 ರ ಲೋಕಸಭಾ ಚುನಾವಣೆಯ ಆ ಆಘಾತಕಾರಿ ಸೋಲು ಅವರ ಸೋಲಿಲ್ಲದ ಸರದಾರ ಎಂಬ ಬಿರುದನ್ನು ಕಸಿದುಕೊಂಡಿದೆ. ತಮ್ಮ ಸ್ಥಾನ ಮತ್ತು ಪ್ರತಿಷ್ಠಿಯನ್ನು ಮರಳಿ ಪಡೆಯಲು ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕಣಕ್ಕಿಳಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಯನ್ನು 10 ಬಾರಿ ವಿಧಾನಸಭೆಗೆ ಮತ್ತು ಎರಡು ಬಾರಿ ಲೋಕಸಭೆಯಲ್ಲಿ ಪ್ರತಿನಿಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ ಸಕತ್ ಜೋರಾಗಿಯೇ ನಡೆಯುತ್ತಿದೆ. ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿರುವ ಅವರು, ಕಳೆದ ಒಂದು ತಿಂಗಳಲ್ಲಿ ಕಲಬುರಗಿಯಲ್ಲಿ ಎರಡು ಬಾರಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಏಪ್ರಿಲ್ 24 ರಂದು ಮತ್ತೊಮ್ಮೆ ಭೇಟಿ ನೀಡುತ್ತಿದ್ದಾರೆ.

ಕೇವಲ ಮಲ್ಲಿಕಾರ್ಜುನ ಖರ್ಗೆ ಮಾತ್ರವಲ್ಲದೆ, ಅವರ ಮಗ ಪ್ರಿಯಾಂಕ್ ಖರ್ಗೆ ಮತ್ತು ಪ್ರಬಲ ಅನುಯಾಯಿ ಡಾ. ಶರಣಪ್ರಕಾಶ ಪಾಟೀಲ್ ಅವರು ರಾಧಾಕೃಷ್ಣ ದೊಡ್ಡಮನಿ ಗೆಲುವನ್ನು ಖಚಿತಪಡಿಸಿಕೊಳ್ಳಲು ಸುಡುವ ಬೇಸಿಗೆಯಲ್ಲಿ ಬೆವರು ಹರಿಸಿ ಪ್ರಚಾರ ಮಾಡುತ್ತಿದ್ದಾರೆ. ಏನಾದರೂ ಸರಿ ಈ ಬಾರಿ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬಾರದು ಎಂಬ ಪಣ ತೊಟ್ಟಿದ್ದಾರೆ.

Congress chief Mallikarjun Kharge prestige at stake in son-in-law Radhakrishna Doddamani s fight

ತಮ್ಮ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಚುನಾವಣಾ ಪ್ರಚಾರವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಪ್ಲ್ಯಾನ್ ಮಾಡಿದೆ. ಪಕ್ಷದ ಐದು ಗ್ಯಾರಂಟಿಗಳು ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371-ಜೆ ಕಲಂಗೆ ತಿದ್ದುಪಡಿ ಮಾಡಿದ ಕೀರ್ತಿಯನ್ನು ಪ್ರಚಾರ ಸಮಾವೇಶಗಳಲ್ಲಿ ಹೇಳಿಕೊಂಡಿದೆ. ಪ್ರಿಯಾಂಕ್ ಖರ್ಗೆ ಮತ್ತು ಶರಣಪ್ರಕಾಶ್ ಪಾಟೀಲ್ ಹಲವು ಸಮುದಾಯಗಳು ಮತ್ತು ಕಾರ್ಮಿಕ ವರ್ಗಗಳನ್ನು ಪ್ರತ್ಯೇಕವಾಗಿ ಭೇಟಿಯಾಗುತ್ತಿದ್ದು, ಮತಯಾಚನೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ಗೆಲುವಿಗೆ ಸಹಾಯವಾಗುತ್ತಾ ರಾಧಾಕೃಷ್ಣ ದೊಡ್ಡಮನಿ ವ್ಯಕ್ತಿತ್ವ?

ಅಲ್ಲದೆ, ರಾಧಾಕೃಷ್ಣ ದೊಡ್ಡಮನಿ ಅವರ ಮೃದು ಸ್ವಭಾವದ ಬಗ್ಗೆ ಕೂಡ ಜನರು ಸಹಾನುಭೂತಿ ಹೊಂದಿದ್ದಾರೆ. ಕಳೆದ ಬಾರಿ ಖರ್ಗೆ ಅವರನ್ನು ಸೋಲಿಸಿದ ಬೇಸರ ಕೂಡ ಅವರಲ್ಲಿದೆ. ಇದರ ಜೊತೆಗೆ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸಭೆ ಮತ್ತು ಸಂಸತ್ ಚುನಾವಣೆಗಳನ್ನು ಗೆಲ್ಲಲು ಬಳಸಿದ ತಂತ್ರಗಳನ್ನು ಬಳಸುತ್ತಿದ್ದಾರೆ.

ಇತ್ತ, ಬಿಜೆಪಿ ಕೂಡ ಕಲಬುರಗಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡುತ್ತಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಹಾಲಿ ಸಂಸದ ಉಮೇಶ್ ಜಾಧವ್ ಅವರನ್ನು ಈ ಬಾರಿಯೂ ಬಿಜೆಪಿ ಕಣಕ್ಕಿಳಿಸಿದೆ. ಜೊತೆಗೆ ಮಾರ್ಚ್ 16 ರಿಂದ ರಾಜ್ಯದಲ್ಲಿ ಪ್ರಧಾನಿ ಮೋದಿ ಪ್ರಚಾರ ಆರಂಭಿಸಿದ್ದಾರೆ.

ಕಲಬುರಗಿ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳನ್ನು ಕಾಂಗ್ರೆಸ್ ಶಾಸಕರೇ ಪ್ರತಿನಿಧಿಸುತ್ತಿದ್ದಾರೆ. ಉಳಿದ ಎರಡು ಕ್ಷೇತ್ರಗಳಲ್ಲಿ ಒಂದನ್ನು ಬಿಜೆಪಿ, ಮತ್ತೊಂದರಲ್ಲಿ ಜೆಡಿಎಸ್‌ ಶಾಸಕರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+