'ಗಾಂಧಿ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ'

ಕಲಬುರಗಿ, ಮಾರ್ಚ್ 9: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ನಡೆದ ನಂತರ, ಆತನ ಕುಟುಂಬಕ್ಕೆ ಸರಕಾರದ ವತಿಯಿಂದ 25ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗಿತ್ತು. ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪನವರೇ ಚೆಕ್ ಅನ್ನು ಹರ್ಷನ ಕುಟುಂಬಕ್ಕೆ ಹಸ್ತಾಂತರಿಸಿದರು.

"ಇತ್ತೀಚಿಗೆ ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಶ್ರೀ ಹರ್ಷ ಅವರ ಭಾವಚಿತ್ರಕ್ಕೆ ಇಂದು ಪುಷ್ಪನಮನ ಸಲ್ಲಿಸಲಾಯಿತು. ನಂತರ ಅವರ ಮನೆಗೆ ಭೇಟಿ ನೀಡಿ, ಹರ್ಷ ಅವರ ತಂದೆ, ತಾಯಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರ್ಕಾರದ ವತಿಯಿಂದ 25 ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಲಾಯಿತು"ಎಂದು ಖುದ್ದು ಯಡಿಯೂರಪ್ಪ ಟ್ವೀಟ್ ಮಾಡಿದ್ದರು.

ಈ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಕಾಂಗ್ರೆಸ್ಸಿನ ಹಲವು ಮುಖಂಡರು ಆಕ್ಷೇಪವನ್ನು ವ್ಯಕ್ತ ಪಡಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ಎಂದು ಟ್ವೀಟ್ ಮಾಡಿದ್ದಾರೆ.

"ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಯಾವ ನಿಯಮಗಳ ಅಡಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ನೀಡಲಾಗಿದೆ? ರಾಜ್ಯದಲ್ಲಿ ವೈಯುಕ್ತಿಕ ದ್ವೇಷಗಳಿಗೆ ಮೃತಪಟ್ಟವರಿಗೆ ಇದೇ ರೀತಿ ಪರಿಹಾರ ನೀಡುತ್ತದೆಯೇ ಈ ಸರ್ಕಾರ?" ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

 ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು

ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು

"ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂಬ ವಿಷಯ ತಿಳಿದುಬಂದಿದೆ. 2020ರಲ್ಲಿ ಇವರದ್ದೇ ಸರ್ಕಾರ ಆತನನ್ನು ಜೈಲಿಗಟ್ಟಿತ್ತು, ಶಿವಮೊಗ್ಗದ ಉಸ್ತುವಾರಿ ಸಚಿವ ನಾರಾಯಣಗೌಡರೇ ವೈಯುಕ್ತಿಕ ಕಾರಣಗಳಿಗೆ ನಡೆದ ಕೊಲೆ ಎಂದಿದ್ದಾರೆ. ಪೊಲೀಸರ ತನಿಖಾ ವರದಿಯೂ ಬಂದಿಲ್ಲ. ಹೀಗಿರುವಾಗ ಈ ಪರಿಹಾರ ಹಣ ಕೊಟ್ಟಿದ್ದು ಏಕೆ? ಹೇಗೆ?" ಎಂದು ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ.

 ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್

ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್

"ನೆರೆ ಸಂತ್ರಸ್ತರಿಗೆ, ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸತಾಯಿಸುವ ಈ ಸರ್ಕಾರ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಹಣ ನೀಡಿರುವುದು ಆಶ್ಚರ್ಯಕರ! ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಏಕಿಲ್ಲ? ಕೊಡಗಿನ ಯೋಧನ ಕುಟುಂಬಕ್ಕೆ ಏಕಿಲ್ಲ?" ಎಂದು ಪ್ರಿಯಾಂಕ್ ಸರಕಾರವನ್ನು ಪ್ರಶ್ನಿಸಿದ್ದಾರೆ.

 ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ

ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ

"ಅನಾರೋಗ್ಯ ಪೀಡಿತರಿಗೆ, ಬಡವರ ನೆರವಿಗೆ, ಯೋಧರ ಕುಟುಂಬಗಳಿಗೆ ಬಳಸಬಹುದಾದ 'ವಿವೇಚನೆ'ಯನ್ನು ತಮ್ಮ ಪಕ್ಷದ ಕೆಡರ್ ಒಬ್ಬನಿಗೆ ಬಳಸಿದ್ದು ಮುಖ್ಯಮಂತ್ರಿಗಳ ಯೋಚನೆ, ವಿವೇಚನೆ ಎಂತದ್ದು ಎಂದು ತಿಳಿಸುತ್ತದೆ. ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ, ಆದರೆ ಸರ್ಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು?" ಎಂದು ಪ್ರಿಯಾಂಕ್ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ

"ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‌ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರ್ಕಾರ? ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ? ಸಿಎಂ ಉತ್ತರಿಸಬೇಕು"ಎಂದು ಸರಣಿ ಟ್ವೀಟ್ ಮೂಲಕ ಪ್ರಿಯಾಂಕ್ ಖರ್ಗೆ ಸರಕಾರವನ್ನು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+