ಕಾಂಗ್ರೆಸ್ಸಿನವರೇ ನನ್ನನ್ನು ಗೆಲ್ಲಿಸುತ್ತಾರೆ: ಬಿಜೆಪಿ ಅಭ್ಯರ್ಥಿ ಉಮೇಶ್‌ ಜಾಧವ್

ಯಾದಗಿರಿ, ಮಾರ್ಚ್‌ 23: ಕಾಂಗ್ರೆಸ್‌ ಪಕ್ಷದವರೇ ನನ್ನನ್ನು ಗೆಲ್ಲಿಸುತ್ತಾರೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇರ್ಶ ಜಾಧವ್ ಅವರು ಹೇಳಿದ್ದಾರೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಯಾದಗಿರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಮೊದಿ ಪರ ಅಲೆ ಇದೆ. ನಾನು ಸಚಿವ ಆಗಬೇಕು ಎಂಬುದು ಚಿಂಚೋಳಿ ಕ್ಷೇತ್ರದ ಜನರ ಒತ್ತಾಯವಾಗಿತ್ತು, ಆದರೆ ಅದು ಆಗಲಿಲ್ಲ, ಹಾಗಾಗಿ ಬಿಜೆಪಿಗೆ ಸೇರಿದೆ ನಾನು ಮಾಡಿದ್ದು ಪಕ್ಷಾಂತರವಲ್ಲ ಎಂದು ಅವರು ಹೇಳಿದರು.

ರಾಜೀನಾಮೆ ಸ್ವೀಕಾರದ ಬಗ್ಗೆ ನನಗೆ ಯಾವುದೇ ಗೊಂದಲ ಇಲ್ಲ, ಆದರೆ ಕಾಂಗ್ರೆಸ್‌ನವರು ಕ್ಷೇತ್ರದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ, ಸ್ಪೀಕರ್ ಅವರು ಮಾರ್ಚ್‌ 24ಕ್ಕೆ ವಿಚಾರಣೆಗೆ ಕರೆದಿದ್ದು, ಮಾರ್ಚ್ 25ರಂದು ರಾಜೀನಾಮೆ ಅಂಗೀಕಾರವಾಗುತ್ತದೆ ಎಂದು ಹೇಳಿದರು.

Congress leaders will help me to win: BJP candidate Umesh Jadhav

ಕಾಂಗ್ರೆಸ್‌ನಲ್ಲಿ ಉಸಿರುಗಟ್ಟಿಸುವ ವಾತಾವರಣ ಇದೆ, ಹಾಗಾಗಿ ಹಲವು ಕಾಂಗ್ರೆಸ್ ಮುಖಂಡರು ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಬರುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಂದ ಕ್ಷೇತ್ರ ಅಭಿವೃದ್ಧಿ ಆಗಿಲ್ಲ, ನನ್ನನ್ನು ಗೆಲ್ಲಿಸಿದರೆ ಅಭಿವೃದ್ಧಿ ಮಾಡುತ್ತೇನೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದ ಉಮೇಶ್ ಜಾಧವ್ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು, ಅವರಿಗೆ ಕಲಬುರಗಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಹ ನೀಡಲಾಗಿದ್ದು, ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರು ಎದುರಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+