ಕಾಂಗ್ರೆಸ್ ಪ್ರಚೋದನೆ ನೀಡಿದೆ, ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ ಮಾಡಲಾಗಿದೆ: ಸಿಎಂ ಬೊಮ್ಮಾಯಿ
ಕಲಬುರಗಿ, ಮಾರ್ಚ್ 28: ಕಾಂಗ್ರೆಸ್ ಪಕ್ಷವು ವ್ಯವಸ್ಥಿತವಾಗಿ ಪ್ರಚೋದನೆ ನೀಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ಕಲಬುರಗಿಯಲ್ಲಿ ಸುದ್ದಿಗಾರರು, ಬಿಎಸ್‌ವೈ ಮನೆ ಮೇಲಿನ ಕಲ್ಲು ತೂರಾಟ ಬಿಜೆಪಿ ಕುತಂತ್ರ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪನವರ ಮನೆ ಬಳಿ ಕ್ಯಾಮರಾದಲ್ಲಿ ಸೆರೆಸಿಕ್ಕವರು ಕಾಂಗ್ರೆಸ್ ನಾಯಕರು. ಅವರು ಹಿಂದಿನ ದಿನ ಜನಾಂಗದವರನ್ನು ತಪ್ಪು ದಾರಿಗೆ ಎಳೆದು, ಪರಿಶಿಷ್ಟ ಜಾತಿ (ಎಸ್.ಸಿ) ಪಟ್ಟಿಯಿಂದ ಜನಾಂಗವನ್ನು ತೆಗೆಯುತ್ತಾರೆ ಎಂದು ಸುಳ್ಳು ಹೇಳಿ ಪ್ರಚೋದಿಸಿದ್ದಾರೆ.

ಅಷ್ಟೇ ಅಲ್ಲದೇ ರಾತ್ರೋ ರಾತ್ರಿ ಅವರು ಸಭೆ ಕರೆದು ಎಲ್ಲವನ್ನು ವ್ಯವಸ್ಥಿತವಾಗಿ ಕಾಂಗ್ರೆಸ್ ಮಾಡಿದೆ. ಇದೆಲ್ಲವು ನಾವು ಸಾಕ್ಷಿ ಸಮೇತವಾಗಿ ಹೇಳುತ್ತಿದ್ದೇವೆ. ಸುಳ್ಳು ಹೇಳುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಡಬೇಕು ಎಂದು ಹೇಳಿದರು.
ವಿಪಕ್ಷ ಕಾಂಗ್ರೆಸ್ ನಾಯಕರಿಗೆ ಹೊಟ್ಟೆ ಕಿಚ್ಚು
ಜವಳಿ ಪಾರ್ಕ್ ಬಗ್ಗೆ ಒಂದೂವರೆ ವರ್ಷಗಳಿಂದ ಮಾತನಾಡುತ್ತಿದ್ದೇವೆ. ಜವಳಿ ಪಾರ್ಕ್ ನೂತನ ಜವಳಿ ನೀತಿಯಲ್ಲಿ ಬಂದಿದ್ದು, ಪ್ರಧಾನಿಮಂತ್ರಿಗಳು ಜವಳಿ ಪಾರ್ಕ್ ನಿರ್ಮಾಣದ ಮೂಲಕ ಹೆಚ್ಚು ಉದ್ಯೋಗ ಮತ್ತು ರಫ್ತು ಆಗಬೇಕೆಂಬ ಹಿನ್ನೆಲೆಯ ಮಹತ್ವವಾದ ಯೋಜನೆ ಕೈಗೆತ್ತಕೊಳ್ಳಲಾಗಿದೆ. ಕಲಬುರಗಿಗೆ ಬಂದಿರುವುದಕ್ಕೆ ಅಭಿನಂದನೆ ಸಲ್ಲಿಸಬೇಕು. ಕಾಂಗ್ರೆಸ್ ನವರಿಗೆ ಹೊಟ್ಟೆಕಿಚ್ಚು. ಅವರು ಮಾಡಲು ಸಾಧ್ಯವಾಗದೆ ಇದ್ದುದನ್ನು ನಾವು ಮಾಡಿದ್ದೇವೆ. ಏನೆಯಾದರೂ ಎಲ್ಲವನ್ನು ಜನರು ಗಮನಿಸುತ್ತಿರುತ್ತಾರೆ ಎಂದು ಅವರು ಟಾಂಗ್ ನೀಡಿದರು.

ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಅವರು ಚುನಾವಣೆ ಘೋಷಣೆ ಯಾದ ನಂತರ ವಲಸೆ ಬರಲಿದ್ದಾರೆ ಎಂದು ಚೆಲುವ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ ಚೆಲುವ ನಾರಾಯಣಸ್ವಾಮಿಯವರೇ ಒಬ್ಬ ವಲಸಿಗರು. ಅಂತವರ ಮಾರು ಮಾತು ನಂಬಲು ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.
ರಾಜ್ಯದ ಹಳೇ ಮೈಸೂರು ಭಾಗದಲ್ಲಿ ಹೊಂದಾಣಿಕೆ ಜೆಡಿಎಸ್ ಜೊತೆ ಮಾಡಿಕೊಳ್ಳಗುವುದಿಲ್ಲ. ಹೀಗೆಂದು ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೇಶ್ವರ್ ಅವರು ಹೇಳಿರುವುದು ಸರಿಯಾಗಿಯೇ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊಂದಾಣಿಕೆ ಇಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ತಿಳಿಸಿದರು.
ಎಸ್‌ಡಿಪಿಐ ಹೇಳಿಕೆ ಆಧಾರದಲ್ಲಿ ಕ್ರಮ
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಅಲ್ಪಸಂಖ್ಯಾತರ ವಿರೋಧಿಯಾದ ಒಂದು ದೇಶದ್ರೋಹಿ ಸಂಸ್ಥೆ. ಅವರಿಂದ ನಾವು ಮೆಚ್ಚುಗೆ ಬಯಸುವುದೂ ಇಲ್ಲ.ಅವರು ಸದಾ ನಮ್ಮ ಚಿಂತನೆ, ವಿಚಾರಗಳಿಗೆ ವಿರುದ್ಧವಾಗಿಯೇ ಇದ್ದಾರೆ. ಅದಕ್ಕೆಲ್ಲ ಸೊಪ್ಪು ಹಾಕಲ್ಲ. ಆ ಎಸ್‌ಡಿಪಿಐ ಹೇಳಿಕೆ ಗಮನಿಸಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.
ಏಪ್ರಿಲ್ ಆರಂಭದಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆ ಮಾಡುವುದು ಬಹುತೇಕ ಪಕ್ಕ ಎನ್ನಲಾಗಿದೆ ಎಂದು ಬೊಮ್ಮಾಯಿ ಹೇಳಿದರು.
ಕಳೆದ 2-3 ದಿನಗಳಿಂದ ಬಿಜೆಪಿ ಶಾಸಕರಿಗೆ ಫೋನ್ ಮಾಡಿ ಟಿಕೆಟ್ ಕೊಡುವುದಾಗಿ ಕಾಂಗ್ರೆಸ್‌ನವರು ಹೇಳಿದ್ದಾರೆ. ಕಾಂಗ್ರೆಸ್ ಬಳಿ ಸರಿಯಾದ ಅಭ್ಯರ್ಥಿ ಇಲ್ಲದೆ ಹತಾಶರಾಗಿದ್ದಾರೆ. ಹಾಗಾಗಿ ನಮ್ಮ ಪಕ್ಷದವರಿಗೆ ಫೋನ್ ಮಾಡುತ್ತಿದ್ದಾರೆ. ಕಾಂಗ್ರೆಸ್ ದಿವಾಳಿಯಾಗಿದೆ ಎಂದು ಅವರು ಕಿಡಿ ಕಾರಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications