Coronavirus Effect: ಕಲಬುರಗಿಯಲ್ಲಿ 46ಕ್ಕೂ ಅಧಿಕ ಮಂದಿ ಮೇಲೆ ನಿಗಾ
ಕಲಬುರಗಿ, ಮಾರ್ಚ್.13: ಕರ್ನಾಟಕದ ಕಲಬುರಗಿಯಲ್ಲಿ ಮಾರಣಾಂತಿಕ ಸೋಂಕು ಕೊರೊನಾ ವೈರಸ್ ನಿಂದ 76 ವರ್ಷದ ಮಹ್ಮದ್ ಹುಸೇನ್ ಸಿದ್ಧಿಕಿ ಪ್ರಾಣ ಬಿಟ್ಟಿದ್ದು ಆಗಿದೆ. ರಾಜ್ಯದಲ್ಲಿ ಮಾರಕ ಸೋಂಕು ಹರಡುವ ಭೀತಿ ಹೆಚ್ಚಾಗಿದ್ದು, 46 ಜನರ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ.
ಶುಕ್ರವಾರ ತುರ್ತು ಸುದ್ಧಿಗೋಷ್ಠಿ ನಡೆಸಿದ ಕಲಬುರಗಿ ಜಿಲ್ಲಾಧಿಕಾರಿ ಶರತ್.ಬಿ. ಮೃತ ವೃದ್ಧನ ಜೊತೆಗೆ ಸಂಪರ್ಕದಲ್ಲಿದ್ದ 46 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದರು. 46 ಜನರ ಪೈಕಿ 31 ಜನರನ್ನು ಹೈ ರಿಸ್ಕ್ ಹಾಗೂ 15 ಜನರನ್ನು ಲೋ ರಿಸ್ಕ್ ಪಟ್ಟಿಯಲ್ಲಿ ಸೇರಿಸಲಾಗಿದೆ.
76 ವರ್ಷದ ಕಲಬುರಗಿಯ ವಯೋವೃದ್ಧ ಕೊರೊನಾ ವೈರಸ್ ಸೋಂಕಿನಿಂದ ನಿಧನ ಹೊಂದಿರುವುದು ದೃಢಪಟ್ಟಿರುವ ಹಿನ್ನೆಲೆ ಕಲಬುರ್ಗಿ ಜಿಲ್ಲೆಯಾದ್ಯಂತ ರೋಗ ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೆಮ್ಮು ನೆಗಡಿ ಜ್ವರ ಉಸಿರಾಟ ತೊಂದರೆಯಿಂದ ಯಾರೇ ದಾಖಲಾದರೂ ಅದರ ಬಗ್ಗೆ ಪ್ರತಿದಿನ ಮೂರು ಬಾರಿ ಜಿಲ್ಲಾಡಳಿತಕ್ಕೆ ಮತ್ತು ಆರೋಗ್ಯ ಇಲಾಖೆಗೆ ಖಾಸಗಿ ಆಸ್ಪತ್ರೆಗಳು ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.

ಜಿಲ್ಲೆಯ ಗಡಿಯಲ್ಲಿ ತಪಾಸಣಾ ಕೇಂದ್ರಗಳ ಸ್ಥಾಪನೆ
ಕಲಬುರಗಿಯಲ್ಲಿ ಎಲ್ಲ ಗಡಿ ಪ್ರದೇಶಗಳಲ್ಲೂ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸುವಂತಾ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುತ್ತಿದ್ದು, ಕಲಬುರಗಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗುತ್ತಿದೆ ಎಂದರು.

ಐಸೋಲೇಟೆಡ್ ವಾರ್ಡ್ ಗಳಲ್ಲಿ ವೈದ್ಯಕೀಯ ತಪಾಸಣೆ
ಕಲಬುರಗಿಯ ಇಎಸ್ ಯುಸಿ ಆಸ್ಪತ್ರೆಯಲ್ಲಿ 200 ಬೆಡ್ ಗಳ ಕ್ವಾರಂಟಯನ್ ವಾರ್ಡ್, 50 ಬೆಡ್ ಐಸೋಲೇಷನ್ ವಾರ್ಡ್ ಸ್ಥಾಪಿಸಲಾಗಿದೆ. ಈ ಐಸೋಲೇಟೆಡ್ ವಾರ್ಡ್ ಗಳಲ್ಲಿ ಶಂಕಿತ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಕುರಿತು ಪರೀಕ್ಷಿಸಲು ಲ್ಯಾಬ್ ತೆರೆಯಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದಕ್ಕೆ ಅಗತ್ಯವಿರುವ ಕಿಟ್ಸ್ ಕೂಡಲೆ ಸರಬರಾಜು ಮಾಡುವಂತೆ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಅವರು ಕೇಂದ್ರ ಆರೋಗ್ಯ ಸಚಿವರನ್ನು ಮಾತನಾಡಿದ್ದಾರೆ ಎಂದರು.

ಕಲಬುರಗಿಯಲ್ಲಿ ಶ್ರೀ ಶರಣ ಬಸವೇಶ್ವರ ಜಾತ್ರೆ ರದ್ದು
ಕೊರೊನಾ ವೈರಸ್ ಭೀತಿಯಿಂದ ಶುಕ್ರವಾರ ನಡೆಯಬೇಕಿದ್ದ ಪ್ರಸಿದ್ಧ ಶ್ರೀಶರಣಬಸವೇಶ್ವರ ಜಾತ್ರೆಯನ್ನು ರದ್ದು ಪಡಿಸಲಾಗಿದ್ದು, ಇದೇ ಮಾದರಿಯನ್ನು ಎಲ್ಲಾ ಧಾರ್ಮಿಕ ಸಂಸ್ಥೆಗಳು ಜನಸಂದಣಿ ಸೇರುವುದನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಒಂದು ವಾರ ಸಿನಿಮಾ ಮಂದಿರ, ಶಾಲಾ-ಕಾಲೇಜು ಬಂದ್
ಕಲಬುರಗಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜು (ಪರೀಕ್ಷೆಗಳನ್ನು ನಡೆಯುವುದನ್ನು ಹೊರತುಪಡಿಸಿ) ಒಂದು ವಾರಗಳ ಕಾಲ ಮುಚ್ಚಲು ಆದೇಶಿಸಿದೆ. ನಗರದ ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್ ಮಾಲ್ ಗಳ ಸಹ ಒಂದು ವಾರ ಮುಚ್ಚಲು ಸೂಚಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications