ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಸರಾ ರಜೆ; ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ಹೆಚ್ಚುವರಿ ಬಸ್

|
Google Oneindia Kannada News

ಕಲಬುರಗಿ, ಅಕ್ಟೋಬರ್ 08; ದಸರಾ ಮತ್ತು ವಿಜಯದಶಮಿ ಅಂಗವಾರಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚುವರಿ ಬಸ್‌ಗಳನ್ನು ವಿವಿಧ ಸ್ಥಳಗಳಿಗೆ ಓಡಿಸುತ್ತಿದೆ. ಜನರು ಬಸ್‌ಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಅಕ್ಟೋಬರ್ 12ರಂದು ಬೆಂಗಳೂರಿಗೆ, ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಅಕ್ಟೋಬರ್ 13 ರಂದು ಬೆಂಗಳೂರಿನಿಂದ ಜನರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹೇಳಿದ್ದಾರೆ.

ದಸರಾ ಪ್ರಯುಕ್ತ ಕೆಎಸ್ಆರ್‌ಟಿಸಿಯಿಂದ 1000 ಹೆಚ್ಚುವರಿ ಬಸ್ ದಸರಾ ಪ್ರಯುಕ್ತ ಕೆಎಸ್ಆರ್‌ಟಿಸಿಯಿಂದ 1000 ಹೆಚ್ಚುವರಿ ಬಸ್

ಅಕ್ಟೋಬರ್ 20ರಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಿಂದ ಬೆಂಗಳೂರಿಗೆ ಮತ್ತು ಇತರೆ ಸ್ಥಳಗಳಿಗೆ ಬೇಡಿಕೆಗನುಸಾರ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ನಿಗಮದ ವ್ಯಾಪ್ತಿಯಲ್ಲಿ ಬರುವ ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಿಂದ ಬೆಂಗಳೂರಿಗೆ ಹಾಗೂ ಹೈದರಾಬಾದ್, ಶ್ರೀಶೈಲಂ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಹೊಸಪೇಟೆ ಮತ್ತು ಬೆಳಗಾವಿ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‍ ಓಡಿಸಲಾಗುತ್ತದೆ.

ಮೈಸೂರು ದಸರಾ; ಕ.ರಾ.ರ.ಸಾ. ನಿಗಮದ ಪ್ರವಾಸಿ ಪ್ಯಾಕೇಜ್ ಮೈಸೂರು ದಸರಾ; ಕ.ರಾ.ರ.ಸಾ. ನಿಗಮದ ಪ್ರವಾಸಿ ಪ್ಯಾಕೇಜ್

 Dasara Holidays Additional Bus Service From KKRTC

ಹೆಚ್ಚುವರಿ ಬಸ್‍ಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿ ಇರುವ 16 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಟಿಕೆಟ್ ಕಾಯ್ದಿರಿಸಬಹುದು.

ಬಿಎಂಟಿಸಿ ಪ್ರಯಾಣಿಕರಿಗೆ ಸಿಹಿಸುದ್ದಿ: ಹೆಚ್ಚುವರಿ ಬಸ್ ಸಂಚಾರ

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯತಿ ನೀಡಲಾಗುತ್ತದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದ್ದಲ್ಲಿ ಬರುವ ಪ್ರಯಾಣ ದರದಲ್ಲಿ ಶೇ 10 ರಷ್ಟು ರಿಯಾಯತಿ ನೀಡಲಾಗುತ್ತದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗುವ ಟಿಕೆಟ್‌ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ ಪಿಕ್ ಅಪ್ ಪಾಯಿಂಟ್‍ ಹೆಸರನ್ನು ಗಮನಿಸಬೇಕು ಎಂದು ಮನವಿ ಮಾಡಲಾಗಿದೆ.

ನಿಗಮದ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಕೋವಿಡ್-19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.

1000 ಹೆಚ್ಚುವರಿ ಬಸ್; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ದಸರಾ ಅಂಗವಾಗಿ 1000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರು ನಗರದಿಂದ 13/10/2021 ರಿಂದ 21/10/2021ರ ತನಕ ಹೆಚ್ಚುವರಿ ಬಸ್‌ಗಳು ಸಂಚಾರ ನಡೆಸಲಿವೆ. ಕರ್ನಾಟಕದ ವಿವಿಧ ಜಿಲ್ಲೆ, ಅಂತರರಾಜ್ಯಕ್ಕೆ ಸಹ ಬಸ್‌ಗಳನ್ನು ಓಡಿಸಲಾಗುತ್ತದೆ.

ಬೆಂಗಳೂರು ನಗರದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ಗೆ ಬಸ್ ಸಂಚಾರ ನಡೆಸಲಿದೆ.

ತಿರುವತಿ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪುಣೆ, ಪಣಜಿ ಮುಂತಾದ ಸ್ಥಳಗಳಿಗೆ ಬಸ್‌ಗಳು ಸಂಚಾರ ನಡೆಸಲಿವೆ. ಹೆಚ್ಚುವರಿ ವಿಶೇಷ ಬಸ್‌ಗಳ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೆಎಸ್ಆರ್‌ಟಿಸಿ ಸ್ಪಷ್ಟಪಡಿಸಿದೆ.

ದಸರಾ ಪ್ಯಾಕೇಜ್; 2021ರ ದಸರಾ ಮಹೋತ್ಸವಕ್ಕೆ ಗುರುವಾರ ಚಾಲನೆ ಸಿಕ್ಕಿದೆ. ಪ್ರತಿ ವರ್ಷದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಸರಾ ಪ್ಯಾಕೇಜ್ ಟೂರ್ ಘೋಷಣೆ ಮಾಡಿದೆ. ಮೈಸೂರು ಮತ್ತು ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ನೋಡಲು ಅನುಕೂಲವಾಗುವಂತೆ ಪ್ಯಾಕೇಜ್ ದರವನ್ನು ನಿಗದಿ ಮಾಡಲಾಗಿದೆ.

ದಸರಾ ಸಮಯದಲ್ಲಿ ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರು ಕೆಎಸ್ಆರ್‌ಟಿಸಿಯ ಟೂರ್ ಪ್ಯಾಕೇಜ್‌ಗಳ ಮೂಲಕ ಪ್ರವಾಸಿ ತಾಣಗಳನ್ನು ಅಕ್ಟೋಬರ್ 9ರಿಂದ 24ರ ತನಕ ವೀಕ್ಷಿಸಬಹುದು. ಗಿರಿ ದರ್ಶನಿ, ದೇವ ದರ್ಶಿನಿ, ಜಲದರ್ಶನಿ ಎಂದು ಮೂರು ಪ್ಯಾಕೇಜ್‌ ಘೋಷಣೆ ಮಾಡಲಾಗಿದೆ.

Recommended Video

ಡೊಳ್ಳು ಹೊಟ್ಟೆ ಇರೋ ಪೊಲೀಸರಿಗೆ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ | Oneindia Kannada

English summary
Kalyana Karnataka Road Transport Corporation announced it will run additional buses on October 12 and 13, 2021 due to dasara holidays.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X