• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೋನಾ ಸೋಂಕಿತರ ಸ್ಥಿತಿಗತಿ ತಿಳಿಯಲು ಟ್ಯಾಬ್ ಫೋನ್

|

ಕಲಬುರಗಿ, ಮೇ.3: ಕೊರೋನಾ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಮತ್ತು ಅವರ ಆರೋಗ್ಯ ಸ್ಥಿತಿಗತಿಯನ್ನು ರೋಗಿಯ ಅಟೆಂಡರ್ ವಿಡಿಯೋ ಕಾಲ್ ಮೂಲಕ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಮಾತನಾಡಿ ವಿಚಾರಿಸಲೆಂದೇ ಪರಿಚಯಿಸಿರುವ ಟ್ಯಾಬ್‍ಗಳನ್ನು ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ, ಸಮಾಜ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಅವರು ಕಲಬುರಗಿಯಲ್ಲಿ ಬಿಡುಗಡೆಗೊಳಿಸಿದರು.

ತಂತ್ರಜ್ಞಾನದ ಸಹಾಯದೊಂದಿಗೆ ಕೊರೋನಾ ಸೋಂಕಿತರನ್ನು ಮತ್ತು ಕ್ವಾಂಟೈನ್‍ದಲ್ಲಿದ್ದವರ ಆರೋಗ್ಯದ ಸ್ಥಿತಿಗತಿ ಅಟೆಂಡರ್ ಗಗಳಿಗೆ ತಿಳಿಸಲು ಟ್ಯಾಬ್ ಪರಿಚಯಿಸಿದ ಕಲಬುರಗಿ ಜಿಲ್ಲಾಡಳಿತ ಕಾರ್ಯಕ್ಕೆ ಡಿ.ಸಿ.ಎಂ. ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಬುರ್ಗಿಯಲ್ಲಿ ಗುಣಮುಖರಾದರು ಇಬ್ಬರು ಕೊರೊನಾ ರೋಗಿಗಳು

ಕಲಬುರಗಿಯ ಜಿಮ್ಸ್ ಮತ್ತು ಇ.ಎಸ್.ಐ.ಸಿ. ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯೆಂದು ಘೋಷಿಸಲಾಗಿದೆ. ಇಲ್ಲಿ ವಿಶೇಷ ವಾರ್ಡ್‍ಗಳಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಈ ಸಂಸ್ಥೆಗಳಲ್ಲಿ ಹಲವರಿಗೆ ಕ್ವಾರಂಟೈನ್‍ನಲ್ಲಿಯೂ ಇಡಲಾಗಿದೆ. ಐಸೋಲೇಷನ್ ಮತ್ತು ಕ್ವಾರಂಟೈನ್ ಸೆಂಟರ್‍ನಲ್ಲಿ ಆರೋಗ್ಯ ಸಿಬ್ಬಂದಿ ಹೊರತುಪಡಿಸಿ ರೋಗಿಗಳ ಅಟೆಂಡರ್ ಗಳಿಗೆ ವಾರ್ಡ್‍ನೊಳಗೆ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.

ವಿಡಿಯೋ ಕಾಲ್ ಮಾಡಿ ವಿಚಾರಣೆ: ಈ ಹಿನ್ನೆಲೆಯಲ್ಲಿ ಸ್ಮಾರ್ಟ್ ಫೋನ್ ಹೊಂದಿದ ಅಟೆಂಡರ್ ಗಳು ವಿಡಿಯೋ ಕಾಲ್ ಮೂಲಕ ರೋಗಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ರೋಗಿಯ ಆರೋಗ್ಯ ಚೇತರಿಕೆ ಮತ್ತು ಸ್ಥಿತಿಗತಿ ಬಗ್ಗೆ ದಿನದಲ್ಲಿ ಒಮ್ಮೆ ವಿಡಿಯೋ ಕಾಲ್ ಮಾಡಿ ವಿಚಾರಿಸಬಹುದಾಗಿದೆ.

ಮಗುವಿಗೆ ಚಿಕಿತ್ಸೆ ನೀಡಿ ಕೊರೊನಾಗೆ ತುತ್ತಾಗಿದ್ದ ಸರ್ಜನ್ ಗುಣಮುಖ

ಆಸ್ಪತ್ರೆ ಮತ್ತು ಕ್ವಾರಂಟೈನ್ ಸೆಂಟರ್‍ನಲ್ಲಿ ಈ ಟ್ಯಾಬ್‍ಗಳನ್ನು ವೈದ್ಯರು ಮತ್ತು ಅರೋಗ್ಯ ಸಿಬ್ಬಂದಿ ನಿರ್ವಹಣೆ ಮಾಡಲಿದ್ದಾರೆ. ಈ ಟ್ಯಾಬ್ ಸಂಖ್ಯೆಯನ್ನು ಸಂಪೂರ್ಣವಾಗಿ ಆರೋಗ್ಯ ಸಿಬ್ಬಂದಿ ಮತ್ತು ರೋಗಿಗಳ ಸಂವಹನಕ್ಕೆ ಮಾತ್ರ ಬಳಸಲಾಗುತ್ತಿದ್ದು, ಈ ಟ್ಯಾಬ್ ಸಂಖ್ಯೆಯನ್ನು ರೋಗಿಗೆ ಮಾತ್ರ ನೀಡಲಾಗುತ್ತದೆ. ಪ್ರಸ್ತುತ 4 ಟ್ಯಾಬ್ ಈ ಕಾರ್ಯಕ್ಕೆ ಉಪಯೋಗಿಸಲಾಗುತ್ತಿದೆ. ಇದಲ್ಲದೆ ವೈದ್ಯರು ರೋಗಿಗೆ ಚಿಕಿತ್ಸೆ ನೀಡಲು ಅವಶ್ಯಕತೆ ಇದ್ದಲ್ಲಿ ವಿವಿಧ ವೈದ್ಯಕೀಯ ತಜ್ಞರ ಸಲಹೆಯನ್ನು ಪಡೆಯಲು ಸಹ ಈ ಟ್ಯಾಬ್ ಸಹಕಾರಿಯಾಗಲಿದೆ ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ. ಡಾ.ಪಿ.ರಾಜಾ ಅವರು ಟ್ಯಾಬ್ ಕಾರ್ಯನಿರ್ವಹಣೆ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ಸಂಸದ ಡಾ.ಉಮೇಶ ಜಾಧವ, ಬೀದರ ಸಂಸದ ಭಗವಂತ ಖೂಬಾ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಎಂ.ವೈ. ಪಾಟೀಲ, ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮೂಡ, ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಶಾಸಕರಾದ ಬಿ.ಜಿ. ಪಾಟೀಲ್, ತಿಪ್ಪಣಪ್ಪ ಕಮಕನೂರ, ಮೂಲಸೌಕರ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪೀಲ್ ಮೋಹನ, ಜಿಲ್ಲಾಧಿಕಾರಿ ಶರತ್ ಬಿ., ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಐ.ಎ.ಎಸ್.ಪ್ರೊಬೇಷನರ್ ಅಧಿಕಾರಿ ಡಾ. ಗೋಪಾಲಕೃಷ್ಣ ಬಿ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

English summary
Karnataka Deputy CM DCM Govind Karjol released a newly developed Tab Phone which monitor Covid19 infected.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X