ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿಗಳಿಗೆ ಕೊರೊನಾ: ಸರ್ಕಾರಕ್ಕೆ ವರದಿ ಸಲ್ಲಿಸಿದ ಡಿಡಿಪಿಐ!

|
Google Oneindia Kannada News

ಬೆಂಗಳೂರು, ಅ. 09: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅದು ಶಿಕ್ಷಕರಿಂದ ಮಕ್ಕಳಿಗೆ ಬಂದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು (ಡಿಡಿಪಿಐ) ರಾಜ್ಯ ಸರ್ಕಾರಕ್ಕೆ ವರದಿ ಕೊಟ್ಟಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕು ಮಕ್ಕಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಅದಕ್ಕೆ ಸಂಬಂಧಿಸಿದಂತೆ ಅಫಜಲಪುರ್ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಅವರು ವರದಿ ನೀಡಿದ್ದಾರೆ. ಕಳೆದ ಸೆಪ್ಟಂಬರ್ 22 ರಂದು random ಆಗಿ ಶಾಲೆಯ 203 ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿದಾಗ ನಾಲ್ಕು ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಪಾಸಿಟಿವ್ ಬಂದಿರುತ್ತದೆ. ಶಾಲೆಯ ಎಲ್ಲಾ ಶಿಕ್ಷಕರಿಗೆ ಕೊರೊನಾ ಪರೀಕ್ಷಾ ವರದಿ ನೆಗಟಿವ್ ಬಂದಿರುತ್ತದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.

ಮತ್ತೆ ಅಕ್ಟೋಬರ್ 5 ರಂದು ಶಾಲೆಯ 24 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಆ ವರದಿ ಇನ್ನೂ ಬಂದಿಲ್ಲ. ನಾಲ್ಕು ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದ್ದರಿಂದ ವಿದ್ಯಾಗಮ ಕೇಂದ್ರವನ್ನು ಮುಚ್ಚಲಾಗಿದೆ ಎಂದು ಬಿಇಓ ಅವರು ವರದಿ ನೀಡಿದ್ದಾರೆಂದು ಡಿಡಿಪಿಐ ಅ ವರು ಸರ್ಕಾರಕ್ಕೆ ತಿಳಿಸಿದ್ದಾರೆ.

Kalaburagi Ddpi Has Reported To State Govt That Covid Not Transmitted To Children By Teachers

ಕಲಬುರಗಿ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಟ್ಟು 9750 ಶಿಕ್ಷಕರು ವಿದ್ಯಾಗಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಒಟ್ಟು 1,03,934 ವಿದ್ಯಾರ್ಥಿಗಳಲ್ಲಿ 5,10,929 ವಿಧ್ಯಾರ್ಥಿಗಳು ವಠಾರ ಶಾಲೆಯಲ್ಲಿ ಹಾಜರಾಗಿರುತ್ತಾರೆ. ಆನ್‌ಲೈನ್ ಮೂಲಕ 15,492 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಉಳಿದ ವಿದ್ಯಾರ್ಥಿಗಳು ವಿದ್ಯಾಗಮ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ಸರ್ಕಾರಕ್ಕೆ ಡಿಡಿಪಿಐ ಅವರು ಕೊಟ್ಟಿರುವ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

English summary
The Deputy Director of Public Education Department (DDPI) has reported to the state government that four students have been diagnosed with Covid infection in Mashala village of Afzalapura taluk in Kalaburagi district. The DDPI has reported to the state government that the coronavirus infection has not been passed on to the children by teachers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X