Breaking: ಪಿಎಸ್ಐ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನು

ಕಲಬುರಗಿ ಜನವರಿ 5: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣದಲ್ಲಿ ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ನ್ಯಾಯಾಲಯದಿಂದ ಜಾಮೀನು ನೀಡಲಾಗಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣದ 26 ಆರೋಪಿಗಳಿಗೆ ನ್ಯಾಯಾಲಯದಿಂದ ಜಾಮೀನು ಸಿಕ್ಕಿದ್ದು ಈ ಪೈಕಿ ದಿವ್ಯಾ ಹಾಗರಗಿ ಅವರೂ ಸೇರಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿದ್ದ ಪಿಎಸ್​ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಕಲಬುರಗಿ ಸೆಷನ್ಸ್ ಕೋರ್ಟ್​ ಜಡ್ಜ್​ ಕೆ.ಬಿ.ಪಾಟೀಲ್ ಅವರು ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿದ್ದಾರೆ.

ಕಿಂಗ್​ಪಿನ್ ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಡಿವೈಎಸ್​ಪಿ ಮಲ್ಲಿಕಾರ್ಜುನ ಸೇರಿದ್ದಾರೆ. ಪಿಎಸ್​ಐ ನೇಮಕಾತಿ ಹಗರಣದಲ್ಲಿ ಈವರೆಗೆ 36 ಜನರಿಗೆ ಜಾಮೀನು ಸಿಕ್ಕಿದೆ. 8 ಅಭ್ಯರ್ಥಿಗಳು, 5 ಪರೀಕ್ಷಾ ಮೇಲ್ವಿಚಾರಕಿಯರು, 3 ಪೊಲೀಸ್ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು ಸೇರಿ 26 ಜನರಿಗೆ ಜಾಮೀನು ನೀಡಲಾಗಿದೆ.

Divya Hagaragi along with other 25 accused in PSI recruitment scam get bail from court

2021 ರ ಅಕ್ಟೋಬರ್ ತಿಂಗಳಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆದಿತ್ತು. ಈ ಅವಧಿಯಲ್ಲಿ ಆಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಬೆಳಕಿಗೆ ಬಂದ ಬೆನ್ನಲ್ಲೆ ದಿವ್ಯಾ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿತ್ತು. 2022 ರ ಎಪ್ರಿಲ್ 8 ರಂದು ಕಲಬುರಗಿ ಚೌಕ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ತನಿಖೆ ಆರಂಭಿಸಿದ್ದ ಸಿಐಡಿ ಪೊಲೀಸರು ಇಲ್ಲಿವರಗೆ 53 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು.

ದಿವ್ಯಾ ಹಾಗರಗಿ ಕರ್ನಾಟಕ ಪಿಎಸ್‌ಐ ನೇಮಾಕಾತಿ ಅಕ್ರಮದ ಕಿಂಗ್ ಪಿನ್‌ಗಳಲ್ಲಿ ಒಬ್ಬರು. ದಿವ್ಯಾ ಹಾಗರಗಿ 18 ದಿನಗಳಿಂದ ತಲೆ ಮರೆಸಿಕೊಂಡದ್ದರು. ಕಳೆದ 18 ದಿನಗಳಿಂದ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಪಾತಾಳಗರಡಿಯನ್ನು ಹಾಕಿ ಹುಡುಕುತ್ತಿದ್ದರು. ಮೇ ತಿಂಗಳಲ್ಲಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಪುಣೆಯಲ್ಲಿ ಪತ್ತೆ ಮಾಡಿ ಬಂಧಿಸಿದ್ದರು. ಸಿಐಡಿ ಎಸ್ಪಿ ರಾಘವೇಂದ್ರ ನೇತೃತ್ವದ ತಂಡ ದಿವ್ಯಾ ಹಾಗರಗಿಯನ್ನು ಬಂಧಿಸಿ ಕಲ್ಬುರ್ಗಿಗೆ ಕರೆತರಲಾಗಿತ್ತು.

ಪಿಎಸ್​ಐ ಪರೀಕ್ಷೆ ಅಕ್ರಮ ನಡೆದಿದ್ದು ಹೇಗೆ?

ಪಿಎಸ್​ಐ ಪರೀಕ್ಷೆ ಅಕ್ರಮ ನಡೆದಿದ್ದು ಹೇಗೆ?

ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪಿಎಸ್​ಐ ಪರೀಕ್ಷೆ ಅಕ್ರಮ ನಡೆದಿತ್ತು. ಅಕ್ರಮ ಬಯಲಿಗೆ ಬಂದ ಬಳಿಕ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಹುಡುಕುತ್ತಿದ್ದರು. ದಿವ್ಯಾರ ಮನೆಯ ಮೇಲೆ ದಾಳಿ ಮಾಡಿ ಹುಡುಕಾಟ ನಡೆಸಿದಾಗಲೂ ಆಕೆ ಪತ್ತೆಯಾಗಿರಲಿಲ್ಲ. ತನಿಖೆಯ ವೇಳೆ ಅಸಹಕಾರ ತೋರಿದ ದಿವ್ಯಾರ ಪತಿ ರಾಜೇಶ್ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ದಿವ್ಯಾರ ಶಾಲೆಯಲ್ಲಿಯೇ ಅಕ್ರಮ ನಡೆದಿದ್ದ ಹಿನ್ನೆಲೆಯಲ್ಲಿ ದಿವ್ಯಾ ಹಾಗರಗಿ ಬಂಧನ ಮತ್ತು ವಿಚಾರಣೆ ಬಹಳ ಪ್ರಮುಖವಾಗಿತ್ತು.

ದಿವ್ಯ ಪ್ರಭಾವಿ ಬಿಜೆಪಿ ಮುಖಂಡೆ

ದಿವ್ಯ ಪ್ರಭಾವಿ ಬಿಜೆಪಿ ಮುಖಂಡೆ

ಕಲಬುರ್ಗಿ ಜಿಲ್ಲೆಯಲ್ಲಿ ಈಕೆ ಪ್ರಭಾವಿ ಬಿಜೆಪಿ ಮುಖಂಡೆ. ದಿಶಾ ಕಮಿಟಿಯ ಸದಸ್ಯೆ, ರಾಜ್ಯ ನರ್ಸಿಂಗ್ ಬೋರ್ಡ್ ಸದಸ್ಯೆ ಕೂಡಾ ಆಗಿದ್ದಾರೆ. ಈ ಹಿಂದೆ ಕಲಬುರಗಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು. ಕಳೆದ ಫೆಬ್ರವರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಾ ದಿವ್ಯಾ ಹಾಗರಗಿ ಮನೆಗೆ ಹೋಗಿ ಆತಿಥ್ಯ ಸ್ವೀಕರಿಸಿದ್ದರು. ಈ ಫೋಟೋವನ್ನು ಕಾಂಗ್ರೆಸ್ ಬಿಡುಗಡೆ ಮಾಡಿ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ದ ವಾಗ್ಯುದ್ದ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಕರ್ನಾಟಕ ಬಿಜೆಪಿ ದಿವ್ಯಾ ಹಾಗರಗಿ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇರುವ ಫೋಟೋವನ್ನು ಹಾಕಿ ಟ್ವೀಟ್ ಮಾಡಿ ಹಗರಣ ರೂವರಿ ಡಿಶಿ ಎಂದು ಮೂದಲಿಸಿತ್ತು. ಇದೇ ರೀತಿ ಪ್ರಿಯಾಂಕ್ ಖರ್ಗೆ ವಿರುದ್ದವು ಬಿಜೆಪಿ ತಿರುಗಿ ಬಿದ್ದಿತ್ತು. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಗ್ಯುದ್ದಕ್ಕೆ ಕಾರಣವಾಗಿತ್ತು.

ದಿವ್ಯಾ ಒಡೆತನದ ಶಾಲೆಯಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ

ದಿವ್ಯಾ ಒಡೆತನದ ಶಾಲೆಯಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ

ದಿವ್ಯಾ ಹಾಗರಗಿ ಜ್ಯೋತಿ ಇಂಗ್ಲಿಷ್ ಶಾಲೆಯ ಮುಖ್ಯಸ್ಥೆಯಾಗಿದ್ದವರು. ಪಿಎಸ್‌ಐ ನೇಮಕಾತಿ ಪರೀಕ್ಷೆಯ ಕೇಂದ್ರಗಳಲ್ಲಿ ಈ ಶಾಲೆಯು ಒಂದಾಗಿತ್ತು. ದಿವ್ಯಾ ಹಾಗರಗಿಯೇ ತಮ್ಮ ಸಿಬ್ಬಂದಿ ಮೇಲೆ ಒತ್ತಡ ಹೇರಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು. ಪರೀಕ್ಷೆ ಮುಗಿದ ಮೇಲೆ ಒಎಂಆರ್ ಶೀಟ್​ನಲ್ಲಿ ಖಾಲಿ ಬಿಟ್ಟಿರೋ ಪ್ರಶ್ನೆಗಳಿಗೆ ಉತ್ತರ ಬರೆಸಿದ್ದಾರೆ ಎನ್ನುವುದು ಇವರ ವಿರುದ್ಧ ಕೇಳಿ ಬಂದಿದ್ದ ಪ್ರಮುಖ ದೂರು. ಇದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಹತ್ತು ಜನ ಅಭ್ಯರ್ಥಿಗಳು ಪಿಎಸ್​ಐ ಆಗಿ ನೇಮಕವಾಗಿದ್ದರು. ಹತ್ತು ಅಭ್ಯರ್ಥಿಗಳು ಅಕ್ರಮವಾಗಿ ಪರೀಕ್ಷೆ ಬರೆದಿರೋ ಆರೋಪವಿದೆ. ಈ ಪೈಕಿ ಈಗಾಗಲೇ ನಾಲ್ವರು ಅಭ್ಯರ್ಥಿಗಳು ಮತ್ತು ಮೂರು ಜನ ಕೊಠಡಿ ಮೇಲ್ವಿಚಾರಕಿಯರನ್ನು ಪೊಲೀಸರು ಬಂಧಿಸಿ ತೀವ್ರವಾದ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಶಾಲೆಯಲ್ಲಿ ಅಕ್ರಮ ನಡೆದಿದ್ದು ಹೇಗೆ?

ಶಾಲೆಯಲ್ಲಿ ಅಕ್ರಮ ನಡೆದಿದ್ದು ಹೇಗೆ?

ಕರ್ನಾಟಕ ಪಿಎಸ್‌ಐ ನೇಮಕಾತಿ ಪರೀಕ್ಷೆಯು 2021 ರ ಆಗಸ್ಟ್ 3 ರಂದು ರಾಜ್ಯಾದ್ಯಂತ ಪರೀಕ್ಷೆ ನಡೆದಿತ್ತು. 2022ರ ಜನವರಿ 19 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕೂಡಾ ಪ್ರಕಟ ಮಾಡಲಾಗಿತ್ತು. ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ದೂರು ನೀಡಿದ್ದರು. ದೂರು ಬಂದ ಹಿನ್ನೆಲೆ ಗೃಹ ಇಲಾಖೆಯಿಂದ ತನಿಖೆಯನ್ನು ಸಿಐಡಿಗೆ ನೀಡಿತ್ತು. ಸಿಐಡಿ ಅಧಿಕಾರಿ ಗಳು ಎಲ್ಲಾ ಅಭ್ಯರ್ಥಿಗಳನ್ನು ಕರೆದು ವಿಚಾರಣೆಯನ್ನು ನಡೆಸಿದ್ದರು. ಹಲವರನ್ನು ಬಂಧಿಸಿ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಇದೀಗ ದಿವ್ಯಾ ಹಾಗರಗಿ ಮತ್ತು ಸುನಿತಾ ಹಾಗೂ ಅರ್ಚನಾರನ್ನು ಬಂಧಿಸುವಲ್ಲಿ ಎಸ್ ಪಿ ರಾಘವೇಂದ್ರ, ಡಿವೈಎಸ್ ಪಿ ಪ್ರಕಾಶ್ ರಾಥೋಡ್, ಡಿವೈಎಸ್ ಪಿ ಶಂಕರ್ ಗೌಡ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+