ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ ಡಾ.ಉಮೇಶ್ ಜಾಧವ್
Recommended Video

ಕಲಬುರಗಿ, ಮಾರ್ಚ್ 06 : ಕಾಂಗ್ರೆಸ್ ತೊರೆದಿದ್ದ ಚಿಂಚೋಳಿ ಕ್ಷೇತ್ರದ ಶಾಸಕ ಡಾ.ಉಮೇಶ್ ಜಾಧವ್ ಅವರು ಅಧಿಕೃತವಾಗಿ ಬಿಜೆಪಿ ಸೇರಿದರು. 'ನನಗೆ ನೀವೆಲ್ಲರೂ ಒಂದು ಅವಕಾಶ ನೀಡಬೇಕು' ಎಂದು ಅವರು ಜನರಲ್ಲಿ ಮನವಿ ಮಾಡಿದರು.
ಕಲಬುರಗಿಯ ಎನ್.ವಿ.ಮೈದಾನದಲ್ಲಿ ಬುಧವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಡಾ.ಉಮೇಶ್ ಜಾಧವ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಸೇರಿದ ಬಳಿಕ ಹಿಂದಿಯಲ್ಲಿ ಭಾಷಣ ಮಾಡಿದ ಡಾ.ಉಮೇಶ್ ಜಾಧವ್ ಅವರು, 'ನಾನು ಸಂತೋಷದಿಂದ ಬಿಜೆಪಿ ಸೇರಿದ್ದೇನೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದು ನನ್ನ ಕನಸು' ಎಂದು ಹೇಳಿದರು.

ತಮ್ಮ ಭಾಷಣದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಮಾತುಗಳನ್ನು ನೆನೆಪು ಮಾಡಿಕೊಂಡ ಡಾ.ಉಮೇಶ್ ಜಾಧವ್ ಬಿಜೆಪಿ ಸೇರಲು ಅವಕಾಶ ಮಾಡಿಕೊಟ್ಟ ನಾಯಕರುಗಳಿಗೆ ಅಭಿನಂದನೆ ಸಲ್ಲಿಸಿದರು.
ನಂತರ ಕನ್ನಡದಲ್ಲಿ ಭಾಷಣ ಮಾಡಿದ ಡಾ.ಉಮೇಶ್ ಜಾಧವ್, 'ನಾನೊಬ್ಬ ಸಾಮಾನ್ಯ ನಾಯಕ ನನಗೆ ಜನರು ಒಂದು ಅವಕಾಶ ನೀಡಬೇಕು' ಎಂದು ಜನರಲ್ಲಿ ಮನವಿ ಮಾಡಿದರು.
ಸೋಮವಾರ ಡಾ.ಉಮೇಶ್ ಜಾಧವ್ ಅವರು ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇಂದು ಬಿಜೆಪಿ ಸೇರುವ ಮೂಲಕ ಹೊಸ ರಾಜಕೀಯ ಹೆಜ್ಜೆ ಇಟ್ಟಿದ್ದಾರೆ.
2019ರ ಲೋಕಸಭಾ ಚುನಾವಣೆಗೆ ಡಾ.ಉಮೇಶ್ ಜಾಧವ್ ಅವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಗುಲ್ಬರ್ಗಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.












Click it and Unblock the Notifications