ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ ಡಾ.ಉಮೇಶ್ ಜಾಧವ್

|
Google Oneindia Kannada News

Recommended Video

ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ ಡಾ.ಉಮೇಶ್ ಜಾಧವ್ | Oneindia Kannada

ಕಲಬುರಗಿ, ಮಾರ್ಚ್ 06 : ಕಾಂಗ್ರೆಸ್‌ ತೊರೆದಿದ್ದ ಚಿಂಚೋಳಿ ಕ್ಷೇತ್ರದ ಶಾಸಕ ಡಾ.ಉಮೇಶ್ ಜಾಧವ್ ಅವರು ಅಧಿಕೃತವಾಗಿ ಬಿಜೆಪಿ ಸೇರಿದರು. 'ನನಗೆ ನೀವೆಲ್ಲರೂ ಒಂದು ಅವಕಾಶ ನೀಡಬೇಕು' ಎಂದು ಅವರು ಜನರಲ್ಲಿ ಮನವಿ ಮಾಡಿದರು.

ಕಲಬುರಗಿಯ ಎನ್‌.ವಿ.ಮೈದಾನದಲ್ಲಿ ಬುಧವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಡಾ.ಉಮೇಶ್ ಜಾಧವ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಡಾ.ಉಮೇಶ್ ಜಾಧವ್ ರಾಜೀನಾಮೆ : ಯಾರು, ಏನು ಹೇಳಿದರು?ಡಾ.ಉಮೇಶ್ ಜಾಧವ್ ರಾಜೀನಾಮೆ : ಯಾರು, ಏನು ಹೇಳಿದರು?

ಬಿಜೆಪಿ ಸೇರಿದ ಬಳಿಕ ಹಿಂದಿಯಲ್ಲಿ ಭಾಷಣ ಮಾಡಿದ ಡಾ.ಉಮೇಶ್ ಜಾಧವ್ ಅವರು, 'ನಾನು ಸಂತೋಷದಿಂದ ಬಿಜೆಪಿ ಸೇರಿದ್ದೇನೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದು ನನ್ನ ಕನಸು' ಎಂದು ಹೇಳಿದರು.

ಉಮೇಶ್ ಜಾಧವ್ ಕಾಂಗ್ರೆಸ್ ತೊರೆಯಲು 3 ಕಾರಣಗಳುಉಮೇಶ್ ಜಾಧವ್ ಕಾಂಗ್ರೆಸ್ ತೊರೆಯಲು 3 ಕಾರಣಗಳು

Dr Umesh Jadhav joins BJP

ತಮ್ಮ ಭಾಷಣದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಮಾತುಗಳನ್ನು ನೆನೆಪು ಮಾಡಿಕೊಂಡ ಡಾ.ಉಮೇಶ್ ಜಾಧವ್ ಬಿಜೆಪಿ ಸೇರಲು ಅವಕಾಶ ಮಾಡಿಕೊಟ್ಟ ನಾಯಕರುಗಳಿಗೆ ಅಭಿನಂದನೆ ಸಲ್ಲಿಸಿದರು.

ಖರ್ಗೆ ಪುತ್ರ ವ್ಯಾಮೋಹಕ್ಕೆ ಆದ್ಯತೆ ನೀಡಿದರು : ಉಮೇಶ್ ಜಾಧವ್ಖರ್ಗೆ ಪುತ್ರ ವ್ಯಾಮೋಹಕ್ಕೆ ಆದ್ಯತೆ ನೀಡಿದರು : ಉಮೇಶ್ ಜಾಧವ್

ನಂತರ ಕನ್ನಡದಲ್ಲಿ ಭಾಷಣ ಮಾಡಿದ ಡಾ.ಉಮೇಶ್ ಜಾಧವ್, 'ನಾನೊಬ್ಬ ಸಾಮಾನ್ಯ ನಾಯಕ ನನಗೆ ಜನರು ಒಂದು ಅವಕಾಶ ನೀಡಬೇಕು' ಎಂದು ಜನರಲ್ಲಿ ಮನವಿ ಮಾಡಿದರು.

ಸೋಮವಾರ ಡಾ.ಉಮೇಶ್ ಜಾಧವ್ ಅವರು ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇಂದು ಬಿಜೆಪಿ ಸೇರುವ ಮೂಲಕ ಹೊಸ ರಾಜಕೀಯ ಹೆಜ್ಜೆ ಇಟ್ಟಿದ್ದಾರೆ.

2019ರ ಲೋಕಸಭಾ ಚುನಾವಣೆಗೆ ಡಾ.ಉಮೇಶ್ ಜಾಧವ್ ಅವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಗುಲ್ಬರ್ಗಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

English summary
Dr.Umesh Jadhav joined BJP in the presence of Karnataka BJP president B.S.Yeddyurappa on March 6, 2019. Umesh Jadhav who submitted resignation for the Chincholi MLA post on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X