ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖರ್ಗೆ ಪುತ್ರ ವ್ಯಾಮೋಹಕ್ಕೆ ಆದ್ಯತೆ ನೀಡಿದರು : ಉಮೇಶ್ ಜಾಧವ್

|
Google Oneindia Kannada News

ಕಲಬುರಗಿ, ಮಾರ್ಚ್ 05 : 'ಸಿದ್ದರಾಮಯ್ಯ ತಮ್ಮ ಮಗನನ್ನು ಮಂತ್ರಿ ಮಾಡದೇ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದರು. ಆದರೆ, ನಮ್ಮ ಜಿಲ್ಲೆಯಲ್ಲಿ ಹಿರಿಯ ನಾಯಕರು ಪುತ್ರ ವ್ಯಾಮೋಹಕ್ಕೆ ಆದ್ಯತೆ ನೀಡಿದರು' ಎಂದು ಡಾ.ಉಮೇಶ್ ಜಾಧವ್ ಅವರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.

ಚಿಂಚೋಳಿಯಲ್ಲಿ ಮಂಗಳವಾರ ಮಾತನಾಡಿದ ಡಾ.ಉಮೇಶ್ ಜಾಧವ್, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಟೀಕಾಪ್ರಹಾರ ನಡೆಸಿದರು. ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಉಮೇಶ್ ಜಾಧವ್ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉಮೇಶ್ ಜಾಧವ್ ಕಾಂಗ್ರೆಸ್ ತೊರೆಯಲು 3 ಕಾರಣಗಳುಉಮೇಶ್ ಜಾಧವ್ ಕಾಂಗ್ರೆಸ್ ತೊರೆಯಲು 3 ಕಾರಣಗಳು

'ಮೈತ್ರಿ ಸರ್ಕಾರದ‌ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಮ್ಮ ಮಗನನ್ನು ಮಂತ್ರಿ ಮಾಡದೇ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದರು. ಆದರೆ, ನಮ್ಮ ಜಿಲ್ಲೆಯಲ್ಲಿ ಹಿರಿಯ ನಾಯಕರು ಪುತ್ರ ವ್ಯಾಮೋಹಕ್ಕೆ ಆದ್ಯತೆ ನೀಡಿದರು' ಎಂದರು.

ಖರ್ಗೆ ಸೋಲಿಸಲು ಕಾಂಗ್ರೆಸ್ ಶಾಸಕನನ್ನು ಕಣಕ್ಕಿಳಿಸಲಿದೆ ಬಿಜೆಪಿ?ಖರ್ಗೆ ಸೋಲಿಸಲು ಕಾಂಗ್ರೆಸ್ ಶಾಸಕನನ್ನು ಕಣಕ್ಕಿಳಿಸಲಿದೆ ಬಿಜೆಪಿ?

Dr Umesh Jadhav upset with Mallikarjun Kharge

'ಹಿರಿಯ ಮುಖಂಡ ಧರಂಸಿಂಗ್ ಬದುಕಿದ್ದರೆ ಪಕ್ಷ ತೊರೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ರಾಜಕೀಯವಾಗಿ ತಮ್ಮ ಮುಂದಿನ ನಿರ್ಧಾರ ಏನು ಎಂದು ಕೇಳುತ್ತಿದ್ದರು. ಇದೀಗ ರಾಜೀನಾಮೆ ನೀಡಿದ್ದೇನೆ. ಮುಂದೇನಾಗುತ್ತದೆ? ಎಂಬುದು ನಿಮಗೆ ಗೊತ್ತಾಗುತ್ತದೆ. ಎಲ್ಲರ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಇಡುವುದಾಗಿ' ಉಮೇಶ್ ಜಾಧವ್ ಹೇಳಿದರು.

ಡಾ.ಉಮೇಶ್ ಜಾಧವ್ ರಾಜೀನಾಮೆ : ಯಾರು, ಏನು ಹೇಳಿದರು?ಡಾ.ಉಮೇಶ್ ಜಾಧವ್ ರಾಜೀನಾಮೆ : ಯಾರು, ಏನು ಹೇಳಿದರು?

'ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರವಾಗುತ್ತದೆ ಎಂಬ ವಿಶ್ವಾಸ ಹೊಂದಿದ್ದೇನೆ. ಸ್ಪೀಕರ್ ರಮೇಶ್ ಕುಮಾರ್ ಉತ್ತಮ ವ್ಯಕ್ತಿಯಾಗಿದ್ದಾರೆ. ಅವರು ರಾಜೀನಾಮೆ ಅಂಗೀಕಾರ ಮಾಡುತ್ತಾರೆ' ಎಂದು ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸಿದರು.

'ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ನಾನು ಇದೀಗ ಫ್ರೀ ಬರ್ಡ್ ಆಗಿದ್ದೇನೆ. ಯಾವುದೇ ನಿರ್ಧಾರ ಕೈಗೊಳ್ಳಬಹುದು. ಕಾಂಗ್ರೆಸ್ ನವರು ಕೀಳು ಮಟ್ಟದ ರಾಜಕೀಯ ಮಾಡಬಾರದು. ನಾನು ಯಾರಿಗೂ ಮಾರಾಟವಾಗಿಲ್ಲ' ಎಂದು ಉಮೇಶ್ ಜಾಧವ್ ಸ್ಪಷ್ಟಪಡಿಸಿದರು.

English summary
Dr.Umesh Jadhav who submitted resignation for the Chincholi MLA post upset with Congress senior leader Mallikarjun Kharge and his son Priyank Kharge.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X