• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬುಧವಾರ ಉಮೇಶ್ ಜಾಧವ್ ಬಿಜೆಪಿ ಸೇರಲಿದ್ದಾರೆ : ಆರ್.ಅಶೋಕ

|

ಕಲಬುರಗಿ, ಮಾರ್ಚ್ 05 : 'ಡಾ. ಉಮೇಶ್‌ ಜಾಧವ್‌ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸೇರಲಿದ್ದಾರೆ' ಎಂದು ಬಿಜೆಪಿ ನಾಯಕ ಆರ್.ಅಶೋಕ ಹೇಳಿದರು. ಕಲಬುರಗಿಯಲ್ಲಿ ಮಾ.6ರ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಕಲಬುರಗಿಯ ಎನ್‌.ವಿ.ಮೈದಾನದಲ್ಲಿ ಬುಧವಾರ ಬಿಜೆಪಿ ಬೃಹತ್ ಸಮಾವೇಶ ನಡೆಯಲಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. 1 ಲಕ್ಷಕ್ಕೂ ಅಧಿಕ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಡಾ.ಉಮೇಶ್ ಜಾಧವ್ ರಾಜೀನಾಮೆ : ಯಾರು, ಏನು ಹೇಳಿದರು?

ಸಮಾವೇಶದ ಕುರಿತು ಮಾಹಿತಿ ನೀಡಲು ಆರ್.ಅಶೋಕ ನೇತೃತ್ವದಲ್ಲಿ ಬೈಕ್‌ ಜಾಥಾ ನಡೆಸಲಾಯಿತು. ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ ಅವರು, 'ಬುಧವಾರ ಡಾ.ಉಮೇಶ್ ಜಾಧವ್ ಅವರು ಬಿಜೆಪಿ ಸೇರಲಿದ್ದಾರೆ' ಎಂದು ಹೇಳಿದರು.

ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜೀನಾಮೆ, ಮಾ.6 ರಂದು ಬಿಜೆಪಿಗೆ

ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಅವರು ಸೋಮವಾರ ಶಾಸಕ ಮತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಅವರು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಗುಲ್ಬರ್ಗಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.

ಖರ್ಗೆ ಪುತ್ರ ವ್ಯಾಮೋಹಕ್ಕೆ ಆದ್ಯತೆ ನೀಡಿದರು : ಉಮೇಶ್ ಜಾಧವ್

ಡಾ.ಉಮೇಶ್ ಜಾಧವ್ ಅವರು ಚಿಂಚೋಳಿ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಯಲ್ಲಿ 73,905 ಮತಗಳನ್ನು ಪಡೆದು ಜಯಗಳಿಸಿದ್ದರು. ಈಗ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನರೇಂದ್ರ ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.

English summary
Senior BJP leader R.Ashok said that Dr.Umesh Jadhav will join BJP on March 6, 2019. Dr.Umesh Jadhav who submitted resignation for the Chincholi MLA post and Congress primary membership.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X