ಕಲಬುರಗಿ; ಶಹಾಬಾದ್ ಇಎಸ್‌ಐ ಆಸ್ಪತ್ರೆ ಶೀಘ್ರವೇ ಕೋವಿಡ್ ಕೇರ್ ಸೆಂಟರ್

ಕಲಬುರಗಿ, ಮೇ 12; ಕೋವಿಡ್ ಸೋಂಕಿತರಿಗೆ ಅಗತ್ಯ ಸಂದರ್ಭದಲ್ಲಿ ‌ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆ ಶಹಾಬಾದ್‌ನಲ್ಲಿ ಶಿಥಿಲಾವಸ್ಥೆಯಲ್ಲಿರುವ ಇಎಸ್ ಐ ಆಸ್ಪತ್ರೆಗೆ ಅತ್ಯಾಧುನಿಕ ಸೌಲಭ್ಯ ಕಲ್ಪಿಸಿ 'ಕೋವಿಡ್ ಕೇರ್ ಸೆಂಟರ್' ಆಗಿ ಪರಿವರ್ತಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಈ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಶಹಾಬಾದ್ ಪಟ್ಟಣದ ವಾಡಿ ರಸ್ತೆಯಲ್ಲಿರುವ ಇಎಸ್‌ಐ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ವಿ. ವಿ. ಜ್ಯೋತ್ಸ್ನಾ, ಶಹಾಬಾದ್ ತಹಶೀಲ್ದಾರ್ ಸುರೇಶ್ ವರ್ಮಾ, ಪುರಸಭೆ ಆಯುಕ್ತ ಕೆ. ಗುರುಲಿಂಗಪ್ಪ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಅತೀ ಶೀಘ್ರದಲ್ಲಿ ಕಾರ್ಯಾರಂಭ ಮಾಡುವಂತೆ ಸಚಿವರು ತಿಳಿಸಿದ್ದಾರೆ.

1994ರಲ್ಲಿ ಶಹಾಬಾದ್ ಪಟ್ಟಣದಲ್ಲಿ ಕಾರ್ಮಿಕರಿಗಾಗಿಯೇ ಇಎಸ್‍ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿತ್ತು. ಪ್ರಾರಂಭದಲ್ಲಿ ಈ ಆಸ್ಪತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು, ಜನಸಾಮಾನ್ಯರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದರು. ಈಗ ಆಸ್ಪತ್ರೆ ಪಾಳು ಬಿದ್ದಿದೆ.

ಅಧಿಕಾರಿಗಳ ತಂಡ ಭೇಟಿ

ಅಧಿಕಾರಿಗಳ ತಂಡ ಭೇಟಿ

ಸಚಿವರ ಸೂಚನೆ ಹಿನ್ನಲೆಯಲ್ಲಿ ಅಧಿಕಾರಿಗಳು ಪಾಳು ಬಿದ್ದಿರುವ ಆಸ್ಪತ್ರೆಗೆ ಭೇಟಿ ನೀಡಿ ಸ್ಥಳ ಪರಿಶೀಲಿನೆ ನಡೆಸಿದರು. ಆಸ್ಪತ್ರೆ ಆವರಣದಲ್ಲಿ ಬೆಳೆದು ನಿಂತಿರುವ ಗಿಡಗಳನ್ನು ತೆರವು ಮಾಡಬೇಕು. ಬಿರುಕು ಬಿಟ್ಟಿರುವ ಗೋಡೆಗಳನ್ನು ಸರಿಪಡಿಸಬೇಕು, ವಿದ್ಯುತ್ ಸಂಪರ್ಕ, ಚಿಕಿತ್ಸಾ ಕೊಠಡಿ, ರೋಗಿಗಳು ತಂಗುವ ಕೊಠಡಿಗಳು, ಶೌಚಾಲಯ, ಅಡುಗೆ ಮನೆ, ಶೌಚಾಲಯ ಎಲ್ಲವನ್ನೂ ಸರಿಪಡಿಸಬೇಕಿದೆ.

ಆದಷ್ಟು ಬೇಗ ಕೆಲಸ ನಡೆಯಲಿದೆ

ಆದಷ್ಟು ಬೇಗ ಕೆಲಸ ನಡೆಯಲಿದೆ

ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಈ ಆಸ್ಪತ್ರೆಯಲ್ಲಿ ಕಲ್ಪಿಸಲು ಉದ್ದೇಶಿಸಲಾಗಿದೆ. ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಪೂರೈಕೆ, ಕುಡಿಯುವ ನೀರು, ಅಡುಗೆ ಮನೆ, ಶೌಚಾಲಯ ಸೇರಿದಂತೆ ಆಧುನಿಕ ಆಸ್ಪತ್ರೆಗೆ ಇರಬೇಕಾದ ಎಲ್ಲಾ ಮೂಲ ಸೌಕರ್ಯಗಳನ್ನೂ ಕಲ್ಪಿಸಬೇಕು. ಸಮರೋಪಾದಿಯಲ್ಲಿ ಕಾರ್ಯ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಇಎಸ್‌ಐ ಆಸ್ಪತ್ರೆಯ ಹಿನ್ನೆಲೆ

ಇಎಸ್‌ಐ ಆಸ್ಪತ್ರೆಯ ಹಿನ್ನೆಲೆ

1994ರಲ್ಲಿ ಶಹಾಬಾದ್ ಪಟ್ಟಣದಲ್ಲಿ ಕಾರ್ಮಿಕರಿಗಾಗಿಯೇ ಇಎಸ್‍ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿತ್ತು. ಪ್ರಾರಂಭದಲ್ಲಿ ಈ ಆಸ್ಪತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು, ಜನಸಾಮಾನ್ಯರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದರು. ನುರಿತ ವೈದ್ಯರು ಉತ್ತಮ ಚಿಕಿತ್ಸೆ ಕೊಡುತ್ತಿದ್ದರಿಂದ ಇದೊಂದು ಉತ್ತಮ ಇಎಸ್‍ಐ ಆಸ್ಪತ್ರೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆಸ್ಪತ್ರೆ ಸುತ್ತಮುತ್ತ ಸಿಮೆಂಟ್ ಫ್ಯಾಕ್ಟರಿಗಳು ಇದ್ದವು. ಕಾರ್ಖಾನೆಗಳು ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಸ್ಥಳಾಂತರಗೊಂಡ ಬಳಿಕ ಆಸ್ಪತ್ರೆಗೆ ಬರುವ ಕಾರ್ಮಿಕರ ಸಂಖ್ಯೆಯೂ ಕುಸಿಯಿತು. ಬಳಿಕ ಸಂಪೂರ್ಣವಾಗಿ ಮುಚ್ಚಿ ಹೋಗಿ ಪಾಳು ಬಿದ್ದಿದೆ.

ಸಚಿವ ಮುರುಗೇಶ್ ನಿರಾಣಿ ಹೇಳಿಕೆ

ಸಚಿವ ಮುರುಗೇಶ್ ನಿರಾಣಿ ಹೇಳಿಕೆ

ಇಎಸ್‍ಐ ಆಸ್ಪತ್ರೆಯು ನಮಗೆ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆಯಾದರೆ ನೂರಾರು ಸಂಖ್ಯೆಯ ಸೋಂಕಿತರಿಗೆ ಇಲ್ಲಿ ಚಿಕಿತ್ಸೆ ನೀಡಬಹುದು. "ಪಾಳುಬಿದ್ದಿರುವ ಇಎಸ್‌ಐ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಭಾನುವಾರ ನಾನೇ ಖುದ್ದಾಗಿ ಭೇಟಿ ನೀಡಲಿದ್ದೇನೆ" ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+