ಕಲಬುರಗಿಯಲ್ಲಿ ಕೊಡಲಿಯಿಂದ ಕೊಚ್ಚಿ ತಂದೆ ಮಕ್ಕಳ ಹತ್ಯೆ
ಕಲಬುರಗಿ, ಜೂನ್ 12: ಜಮೀನು ಹಂಚಿಕೆ ವಿವಾದ ತಾರಕಕ್ಕೇರಿ ದಾಯಾದಿಗಳ ನಡುವೆ ನಡೆದ ಕಲಹ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಮೇದಕ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಜರುಗಿದೆ.
ಮೇದಕ ಗ್ರಾಮದ ಹೊಲವೊಂದರಲ್ಲಿ ಮೂರು ಜನರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡ ಮತ್ತೋರ್ವ ಮಗ ಸೇಡಂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೊಲೆಯಾದವರನ್ನು ಮಲ್ಕಪ್ಪ ಚಿನ್ನಯ್ಯ (60), ಶಂಕ್ರಪ್ಪ ಮಲ್ಕಪ್ಪ (26) ಮತ್ತು ಚಿನ್ನಪ್ಪ ಮಲ್ಕಪ್ಪ (27) ಎಂದು ಗುರುತಿಸಲಾಗಿದೆ.

ಕೊಲೆಗೆ ನಿಖರ ಮಾಹಿತಿ ದೊರೆತಿಲ್ಲವಾದರೂ ಜಮೀನು ವಿವಾದ ಹಿನ್ನೆಲೆಯಲ್ಲಿ ನಡೆದ ದಾಯಾದಿಗಳ ಕಲಹವೇ ಕೊಲೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಸಿಪಿಐ ತಮ್ಮರಾಯ ಪಾಟೀಲ ಭೇಟಿ ನೀಡಿದ್ದು, ಘಟನೆಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪ್ರಕರಣ ಮುಧೋಳ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.











Click it and Unblock the Notifications