ಕಲಬುರಗಿ: ಹುತಾತ್ಮ ಯೋಧ ಮಹದೇವ ಪಾಟೀಲ್ ಅಂತ್ಯಕ್ರಿಯೆ
ಕಲಬುರಗಿ, ಜೂನ್ 29: ಛತ್ತೀಸ್ಗಡ ಜಿಲ್ಲೆಯಲ್ಲಿ ನಕ್ಸಲರ ಅಟ್ಟಹಾಸಕ್ಕೆ ಬಲಿಯಾಗಿದ್ದ ಕಲಬುರಗಿಯ ಹುತಾತ್ಮ ಯೋಧ ಮಹದೇವ ಪಾಟೀಲ ಅವರ ಅಂತ್ಯಕ್ರಿಯೆಯನ್ನು ಶನಿವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು.
ಮಹದೇವ ಪಾಟೀಲ ಅವರ ಸ್ವಂತ ಊರಾದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು.
ಛತ್ತೀಸಗಡದಿಂದ ತರಲಾದ ಅವರ ಪಾರ್ಥಿವ ಶರೀರವನ್ನು ತರುವ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಅವರ ಮೃತದೇಹವಿದ್ದ ವಾಹನ ಬರುವ ಸಂದರ್ಭದಲ್ಲಿ ನೂರಾರು ಮಂದಿ ದೇಶದ ಧ್ವಜ ಹಿಡಿದು ಬೈಕ್ನಲ್ಲಿ ಮೆರವಣಿಗೆ ಸಾಗಿ ಹುತಾತ್ಮ ಯೋಧನಿಗೆ ಗೌರವ ಸಲ್ಲಿಸಿದರು.

ಮಹದೇವ ಪಾಟೀಲ್ (50) ಅವರು ಜುಲೈ 1ರಂದು ನಡೆಯಬೇಕಿದ್ದ ಮಗಳ ಸೀಮಂತ ಸಮಾರಂಭದಲ್ಲಿ ಭಾಗವಹಿಸಲು ಶನಿವಾರ ಸ್ವಗ್ರಾಮಕ್ಕೆ ಬರಬೇಕಿತ್ತು. ಆದರೆ, ಅವರು ಹುತಾತ್ಮರಾಗಿ ಬಂದಿದ್ದಾರೆ.
ಶುಕ್ರವಾರ ಬೆಳಿಗ್ಗೆ ಛತ್ತೀಡಗಡದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರೊಂದಿಗೆ ನಡೆದ ಕಾದಾಟದಲ್ಲಿ ಮಹದೇವ ಪಾಟೀಲ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಹೈದರಾಬಾದ್ನ ಸಿಆರ್ಪಿಎಫ್ನಲ್ಲಿ 15 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಅವರನ್ನು ಕಳೆದ ಮೂರು ವರ್ಷದ ಹಿಂದಷ್ಟೇ ಛತ್ತೀಸಗಡಕ್ಕೆ ವರ್ಗಾವಣೆ ಮಾಡಲಾಗಿತ್ತು.
ಅವರಿಗೆ ಮೂವರು ಮಕ್ಕಳಿದ್ದು, ಒಬ್ಬ ಮಗಳ ಮದುವೆಯಾಗಿದೆ. ಇನ್ನಿಬ್ಬರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications