ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೋಂ ಕ್ವಾರಂಟೈನ್ ಉಲ್ಲಂಘಿಸಿದರೆ FIR; ಕಲಬುರಗಿ ಡಿ.ಸಿ. ಎಚ್ಚರಿಕೆ

By ಕಲಬುರಗಿ ಪ್ರತಿನಿಧಿ
|
Google Oneindia Kannada News

ಕಲಬುರಗಿ, ಮೇ 25: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಹೋಂ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಗೃಹ ಬಂಧನ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಿದಲ್ಲಿ ಅಂತಹವರ ಮೇಲೆ ಎಫ್ ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್-19 ಸೋಂಕಿತ ವ್ಯಕ್ತಿಯ ಎರಡನೇ ಸಂಪರ್ಕದಲ್ಲಿ ಬಂದ ವ್ಯಕ್ತಿಗಳಲ್ಲಿ ಹೊರ ರಾಜ್ಯದಿಂದ ಬಂದ ಗರ್ಭಿಣಿಯರ, 10 ವರ್ಷದೊಳಗಿನ ಮಕ್ಕಳ, 65 ವರ್ಷ ಮೇಲ್ಪಟ್ಟ ಹಿರಿಯರ ಹಾಗೂ ಇನ್ನಿತರ ರೋಗಗಳಿಂದ ಬಳಲುತ್ತಿರುವವರನ್ನು ಹಿತದೃಷ್ಟಿಯಿಂದ ಸಾಂಸ್ಥಿಕ ಕ್ವಾರಂಟೈನ್ ಬದಲಾಗಿ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗುತ್ತಿದೆ.

FIR For Violation Of Home Quarantine Warned Kalaburagi DC

 ಚಿಕನ್ ಊಟ ಕೊಟ್ಟಿಲ್ಲವೆಂದು ಆಶಾಕಾರ್ಯಕರ್ತೆಯ ಕೈ ಮುರಿದ ಭೂಪ ಚಿಕನ್ ಊಟ ಕೊಟ್ಟಿಲ್ಲವೆಂದು ಆಶಾಕಾರ್ಯಕರ್ತೆಯ ಕೈ ಮುರಿದ ಭೂಪ

ಆದರೆ ಕೆಲವರು ಹೋಂ ಕ್ವಾರಂಟೈನ್ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡುತ್ತಿರುವುದು ಗಮನಕ್ಕೆ ಬಂದಿದ್ದು, ಮೊದಲ ಬಾರಿಗೆ ಈ ರೀತಿಯಾಗಿ ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಕೂಡಲೇ ಅಂಥವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ದಾಖಲಿಸಲಾಗುತ್ತದೆ. ನಂತರ‌ವೂ ಮೇಲಿಂದ‌ ಮೇಲೆ ಇದೇ ರೀತಿ ತಪ್ಪು ಮರುಕಳಿಸಿದಲ್ಲಿ ಅಂತಹವರ ಮೇಲೆ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗುವುದು ಎಂದು ಡಿ.ಸಿ. ಶರತ್ ಬಿ. ಎಚ್ಚರಿಕೆ ನೀಡಿದ್ದಾರೆ.

English summary
FIR would be lodged against those who violate home quarantine, warned kalaburagi dc Sharath B today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X