ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಕಲಬುರಗಿಯಲ್ಲಿ ಮೊದಲ ವೈಮಾನಿಕ ತರಬೇತಿ ಕೇಂದ್ರ ಆರಂಭ

|
Google Oneindia Kannada News

ಕಲಬುರಗಿ, ಜೂನ್ 30; ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮೊದಲ ವೈಮಾನಿಕ ತರಬೇತಿ ಕೇಂದ್ರ ಆರಂಭವಾಗಿದೆ. ತರಬೇತಿ ಕೇಂದ್ರ ಆರಂಭಿಸುವ ಉದ್ದೇಶದಿಂದಲೇ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಜಾಗ ಮೀಸಲಾಗಿಡಲಾಗಿತ್ತು.

ಗುರುವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಏಷ್ಯಾ ಫೆಸಿಫಿಕ್ ಫ್ಲೈಟ್ ಟ್ರೈನಿಂಗ್ ಅಕಾಡಮಿ ವೈಮಾನಿಕ ತರಬೇತಿ ಕೇಂದ್ರ ಆರಂಭಿಸಿದೆ. ಕಲಬುರಗಿ ವಿಮಾನ ನಿಲ್ದಾಣ ಪ್ರಾಧಿಕಾರ 5000 ಚದರ ಮೀಟರ್ ಜಾಗವನ್ನು ನೀಡಲಾಗಿದೆ.

ಕಲಬುರಗಿಯಲ್ಲಿ ವೈಮಾನಿಕ ತರಬೇತಿ ಶಾಲೆಗೆ ಎಎಐ ಒಪ್ಪಿಗೆ ಕಲಬುರಗಿಯಲ್ಲಿ ವೈಮಾನಿಕ ತರಬೇತಿ ಶಾಲೆಗೆ ಎಎಐ ಒಪ್ಪಿಗೆ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ವೈಮಾನಿಕ ತರಬೇತಿ ಕೇಂದ್ರ ಆರಂಭಿಸಲು ಅನುಮತಿ ನೀಡಿತ್ತು. ಅಲ್ಲದೇ ಈ ಕೇಂದ್ರಕ್ಕೆ ಟ್ಯಾಕ್ಸಿ ವೇ ಸಂಪರ್ಕವನ್ನು ಕಲ್ಪಿಸಿದೆ.

ಹುಬ್ಬಳ್ಳಿ; ವೈಮಾನಿಕ ತರಬೇತಿ ಕೇಂದ್ರಕ್ಕೆ ಸೇರಲು ಅರ್ಹತೆಗಳು ಹುಬ್ಬಳ್ಳಿ; ವೈಮಾನಿಕ ತರಬೇತಿ ಕೇಂದ್ರಕ್ಕೆ ಸೇರಲು ಅರ್ಹತೆಗಳು

First Flying Training Organisation Start At Kalaburagi Airport

ಕಲಬುರಗಿ ಮತ್ತು ಅಕ್ಕಪಕ್ಕದ ಜಿಲ್ಲೆಗಳ ಯುವಕ/ ಯುವತಿಯರು ಪೈಲೆಟ್ ತರಬೇತಿ ಪಡೆಯಲು ಈ ಕೇಂದ್ರ ಸಹಾಯಕವಾಗಿದೆ.

ಉತ್ತರ ಕರ್ನಾಟಕದ 3ನೇ ವೈಮಾನಿಕ ತರಬೇತಿ ಶಾಲೆಗೆ ಒಪ್ಪಿಗೆ ಉತ್ತರ ಕರ್ನಾಟಕದ 3ನೇ ವೈಮಾನಿಕ ತರಬೇತಿ ಶಾಲೆಗೆ ಒಪ್ಪಿಗೆ

ಕಲಬುರಗಿ ವಿಮಾನ ನಿಲ್ದಾಣ ಸ್ಥಾಪನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯಮಗಳಿಗೆ ಸಹಕಾರಿಯಾಗಿದೆ. ರಾಜ್ಯದ 7ನೇ ವಿಮಾನ ನಿಲ್ದಾಣವಾಗಿ ಕಲಬುರಗಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಗೊಳಿಸಲಾಗಿತ್ತು.

ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2006ರಲ್ಲಿ ಕಲಬುರಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಜಿಲ್ಲೆಯ ಶ್ರೀನಿವಾಸ ಸರಡಗಿ ಗ್ರಾಮದ ಬಳಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. 2019ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೇ ವಿಮಾನ ನಿಲ್ದಾಣ ಉದ್ಘಾಟನೆಗೊಂಡಿತು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮೊದಲ ಒಂದು ವರ್ಷದಲ್ಲಿಯೇ 924 ವಿಮಾನಗಳು ಹಾರಾಟ ನಡೆಸಿದ್ದವು. ಬೆಂಗಳೂರು ಸೇರಿದಂತೆ ಅಕ್ಕಪಕ್ಕದ ರಾಜ್ಯಗಳ ಪ್ರಮುಖ ನಗರಗಳಿಗೆ ವಿಮಾನ ಸಂಪರ್ಕವಿದೆ.

ವಿಮಾನ ನಿಲ್ದಾಣ ನಿರ್ಮಾಣ ಮಾಡುವಾಗಲೇ ವೈಮಾನಿಕ ತರಬೇತಿ ಕೇಂದ್ರ ಸ್ಥಾಪನೆ ಮಾಡಲು ಯೋಜನೆ ರೂಪಿಸಲಾಗಿತ್ತು. ಬಳಿಕ ವಿಮಾನ ನಿಲ್ದಾಣ ಪ್ರಾಧಿಕಾರದ ಒಪ್ಪಿಗೆ ಪಡೆದು ಈಗ ಮೊದಲ ವೈಮಾನಿಕ ತರಬೇತಿ ಕೇಂದ್ರ ಪ್ರಾರಂಭಿಸಲಾಗಿದೆ.

Recommended Video

HD Revanna ನವರು R Ashok ಹೇಳಿಕೆ ವಿರುದ್ಧ ತಿರುಗೇಟು ನೀಡಿದ್ದಾರೆ | Oneindia Kannada

English summary
First Flying Training Organisations(FTOs) started at Kalaburagi airport, Karnataka. AAI has allotted land of 5000 sqm to Asia Pacific Flight Training Academy to establish FTO.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X