ಕಲಬುರಗಿ: ಭೀಕರ ಅಪಘಾತ ಐವರು ಸಾವು
ಕಲಬುರಗಿ, ಆಗಸ್ಟ್ 27: ನಗರದ ಆಳಂದ ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿರುವ ಭೀಕರ ಅಪಘಾತದಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ.
ಸ್ಕಾರ್ಪಿಯೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಮೃತರನ್ನು ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ಚಿಂಚಪುರದವರು ಎಂದು ಗುರುತಿಸಲಾಗಿದೆ. ಇವರೆಲ್ಲರೂ ತಿರುಪತಿಗೆ ಪ್ರವಾಸಕ್ಕೆ ತೆರಳಿ ವಾಪಸ್ಸಾಗುತ್ತಿದ್ದರು.
ಬಿಎಸ್ವೈ ಸಂಪುಟದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಘೋರ ಅನ್ಯಾಯ, ಆಕ್ರೋಶ
ಸಂಜಯ್ ಕುಮಾರ್, ರಾಣಿ ಸಂಜಯ್, ಭಾಗ್ಯಶ್ರೀ, ಶ್ರೇಯಸ್, ಧೀರಜ್ ಸಂಗಣ್ಣ ಎಂಬುವರು ಅಪಘಾತದಲ್ಲಿ ಮೃತರಾಗಿದ್ದಾರೆ. ಶ್ರೇಯಸ್ ಮತ್ತು ಧೀರಜ್ ಸಂಗಣ್ಣ ಕ್ರಮವಾಗಿ ಎರಡು ಮತ್ತು ಮೂರು ವರ್ಷದ ಮಕ್ಕಳಾಗಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆಗೆ ಮೋದಿಗೆ ಆಹ್ವಾನ
ಶಿವರಾಜ್, ಶೀತಲ್ ಸಂಗಣ್ಣ, ಭೀಮಾಶಂಕರ ಅವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.